ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ.
Cnewstv / 02.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ.
ಬೆಂಗಳೂರು : ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೆನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಮೋಡ ಕವಿಡ ವಾತಾವರಣವಿದ್ದು, ಸಂಜೆ ಮತ್ತೆ ಮಳೆಯಾಗುವಾ ಸಾಧ್ಯತೆ ಇದೆ. ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.
ಇಂದಿನಿಂದ ನವೆಂಬರ್ 6 ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಮಲೆನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು, ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳಿಗೆ ಹಲದಿ ಅಲಟ್ ಘೋಷಿಸಲಾಗಿದೆ.
ಇದನ್ನು ಒದಿ : http://cnewstv.in/?p=11384
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ. 2022-11-02
Recent Comments