Breaking News

Uncategorized

ಮೆಗ್ಗಾನ್ ಆಸ್ಪತ್ರೆಯಲ್ಲಿ ಎಸ್.ಎಲ್.ಧರ್ಮೇಗೌಡರ ಮರಣೋತ್ತರ ಪರೀಕ್ಷೆ

  ಶಿವಮೊಗ್ಗ : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಇಂದು ಮುಂಜಾನೆ ರೈಲು ಹಳಿ ಮಧ್ಯೆ ಪತ್ತೆಯಾದ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಆ್ಯಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದ್ದು, ಈ ವೇಳೆ ಅವರ ಕುಟುಂಬದವರು ಉಪಸ್ಥಿತರಿದ್ದರು.ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಪೂರ್ಣ ಸಿದ್ಧತೆ ಮಾಡಕೊಳ್ಳಲಾಗಿದೆ. ಶಿವಮೊಗ್ಗ ಜಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ...

Read More »

ಮೂವರು ಕಳ್ಳರ ಬಂಧನ ಹಾಗೂ 11 ದ್ವಿ ಚಕ್ರ ವಾಹನ ವಶ

ಶಿವಮೊಗ್ಗ : ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ನವೆಂಬರ್ 11ರಂದು ತುಂಗಾನಗರ ಪೊಲೀಸರು ಮೂವರು ದ್ವಿ ಚಕ್ರ ವಾಹನ ಕಳ್ಳರನ್ನು ಬಂಧಿಸಿ, 11 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆಮಾಡಿ, ಆರೋಪಿತರಿಂದ ಒಟ್ಟು 3.44 ಲಕ್ಷ ರೂ. ಮೌಲ್ಯದ 11 ದ್ವಿ ಚಕ್ರ ವಾಹನ ವಶಪಡಿಸಿಕೊಂಡಿರುತ್ತಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಆರೋಪಿಗಳು ಹಾಗೂ ಕಳ್ಳತನವಾದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ ...

Read More »

ಶಿವಮೊಗ್ಗದಲ್ಲಿ ತಗ್ಗಿದ ಕರೋನಾ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಜನರಿಗೆ ಇದೊಂದು ಗುಡ್ ನ್ಯೂಸ್. ಜಿಲ್ಲೆಯಲ್ಲಿ ಗಣನೀಯವಾಗಿ ತಗ್ಗಲಾರಂಭಿಸಿದೆ ಕರೋನಾ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಪ್ರತಿದಿನ ಮೂರಂಕಿ ದಾಟುತ್ತಿದ್ದ ಕರೋನಾ ಸೋಂಕಿತರ ಸಂಖ್ಯೆ ಇದೀಗ ಎರಡಂಕಿಗೆ ಇಳಿದಿದೆ. ಹೌದು ಕಳೆದ ವಾರದವರೆಗೂ ಪ್ರತಿದಿನ ಶಿವಮೊಗ್ಗ ಜಿಲ್ಲೆಯಲ್ಲಿ 350ರಿಂದ 370 ಕರೋನಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಈ ಪ್ರಮಾಣ 100ರ ಸಂಖ್ಯೆಗೆ ಇಳಿದಿತ್ತು. ಆದರೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕರೋನಾ ಸೋಂಕಿತರ ಸಂಖ್ಯೆ ಕೇಳಿದರೆ ಯಾರಿಗಾದರೂ ಆಶ್ಚರ್ಯವಾಗುತ್ತದೆ. ಹೌದು ...

Read More »

ಜಿಲ್ಲೆಯಲ್ಲಿ ಕಡಿಮೆಯಾದ ಕರೋನಾ ಪಾಸಿಟಿವ್ ಪ್ರಕರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕಳೆದ ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದು, ಶೇಕಡಾ 6.6 ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಕರೊನಾ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಜಿಲ್ಲೆಯ ಅಂಕಿಅಂಶಗಳ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಕಳೆದ ತಿಂಗಳು ಕರೋನಾ ಪಾಸಿಟಿವ್ ಪ್ರಕರಣಗಳು ಶೇ.25ರಷ್ಟು ಇತ್ತು. ಇದೀಗ ಶೇ.6.6 ಗೆ ಇಳಿದಿದೆ. ಇದೇ ರೀತಿ ಕರೋನಾ ಸಾವಿನ ಪ್ರಮಾಣದಲ್ಲಿಯೂ ಗಣನೀಯವಾದ ಇಳಿಕೆ ಕಂಡು ಬಂದಿದೆ. ಶೇ.2.5ರಷ್ಟಿದ್ದ ಸಾವಿನ ಪ್ರಮಾಣ ಇದೀಗ 0.9ಕ್ಕೆ ಇಳಿದಿದೆ. ಇದೇ ...

Read More »

ಅಕ್ಟೋಬರ್ 9 & 10 ರಂದು ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ

ಶಿವಮೊಗ್ಗ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ 110/11 ಕೆ.ವಿ. ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2 ಕುಂಸಿ, ಎಫ್-3 ಸಿರಿಗೆರೆ, ಎಫ್-9 ಆಯನೂರು, ಎಫ್-10 ಹಾರ್ನಳ್ಳಿ ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುಮಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ಟೋಬರ್-09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಸಂಜೆ 06 ...

Read More »

ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.

  ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ. ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Read More »

ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ ಇದೀಗ ಮಠದ ಅಂಗಳಕ್ಕೂ ಕಾಲಿಟ್ಟಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಜಿಲ್ಲೆಯಲ್ಲಿ ಒಂದೇ ದಿನ 126 ಕೊರೊನಾ ಪ್ರಕರಣಗಳು

  ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಬರೊಬ್ಬರಿ 126 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1143 ಕ್ಕೆ ಏರಿಕೆಯಾಗಿದೆ. ಈ ಪೈಕಿ 589 ಜನರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ 534 ಸಕ್ರಿಯಾ ಪ್ರಕರಣಗಳಿವೆ. ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಹಳೆ ಶಿವಮೊಗ್ಗ ನಗರವನ್ನು ಸೀಲ್ ಡೌನ್ ಮಾಡಲಾಗಿದ್ದು, ಅದರೆ ಇಂದು ಸಚಿವ ಕೆ ಎಸ್ ಈಶ್ಚರಪ್ಪನವರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಈ ಆದೇಶವನ್ನು ರದ್ದುಗೊಳಿಸಿದ್ದಾರೆ. ಸ್ಥಳೀಯರಿಂದ ಸೀಲ್ ಡೌನ್ ಗೆ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಇಡೀ ...

Read More »

ನಾಳೆಯಿಂದ ಯಾವುದೇ ಪ್ರದೇಶದಲ್ಲಿ‌ ಸೀಲ್ ಡೌನ್ ಇಲ್ಲ. ಶಿವಮೊಗ್ಗ ನಗರದ 7 ವಾರ್ಡ್ ಗಳಲ್ಲಿ ವಿಧಿಸಿದ್ದ ಸೀಲ್ ಡೌನ್ ರದ್ದು : ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ: ಶಿವಮೊಗ್ಗ ನಗರದ ಕೆಲವು ವಾರ್ಡ್ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರಗಳ ಕ್ಲಸ್ಟರ್ ಕಂಟೈನ್‌ಮೆAಟ್ ಝೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ರಾಜ್ಯದ ಎಲ್ಲೆಡೆ ಲಾಕ್‌ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯರು ತಾವೇ ಕರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬರುವ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ...

Read More »

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವ ಪೊಲೀಸರ ವಶಕ್ಕೆ.

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಶ್ರೀ ಚನ್ನಬಸವೇಶ್ವರ ದೇವಾಲದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ನಿನ್ನೆ ತಡರಾತ್ರಿ ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ನಾಲ್ವರು ಕಳ್ಳರು ದೇವಾಲಯದ ಒಳಗೆ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದಾರೆ. ಕೂಡಲೇ‌ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನಾಲ್ವರು ಕಳ್ಳರನ್ನು ಹಿಡಿಯಲು ಹೋಗಿದ್ದಾರೆ. ಆಗ ಮೂವರು ಕಳ್ಳರು ತಪ್ಪಿಸಿಕೊಂಡಿದ್ದು, ಓರ್ವ ಮಾತ್ರ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ...

Read More »