ಶಿವಮೊಗ್ಗ : ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ...
Read More »Uncategorized
Donald Trump considering suspending H1B, other visas
Washington: US President Donald Trump is considering suspending a number of employment visas including the H-1B, most sought-after among Indian IT professionals, in view of the massive unemployment in America due to the coronavirus pandemic, according to a media report. The proposed suspension could extend into the government’s new fiscal year beginning October 1, when many new visas are ...
Read More »ಶಿವಮೊಗ್ಗದಲ್ಲಿ 6 ಕರೋನಾ ಪ್ರಕರಣ ಪತ್ತೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 6 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಿಂದ ಬಂದ ಐವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಇಬ್ಬರು ಮೂರು ವರ್ಷದ ಮಕ್ಕಳು ಸೇರಿದ್ದಾರೆ. ಇನ್ನುಳಿದಂತೆ 60 ವರ್ಷ ವೃದ್ದೆಯಲ್ಲೂ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
Read More »ತಾಯಿಯ ಕೊಳೆತ ಶವದೊಂದಿಗೆ ಒಂದು ವಾರ ಕಳೆದ ಮಾನಸಿಕ ಅಸ್ವಸ್ಥ ಮಗಳು
ಶಿವಮೊಗ್ಗ : ತಾಯಿಯ ಶವದೊಂದಿಗೆ ಒಂದು ವಾರಗಳನ್ನು ಮಾನಸಿಕ ಅಸ್ವಸ್ಥ ಮಗಳು ಕಳೆದ ಘಟನೆ ಶಿವಮೊಗ್ಗದ ಬಸವನಗುಡಿ 5 ನೇ ತಿರುವಿನ ಮನೆಯಲ್ಲಿ ನಡೆದಿದೆ. ಅನಾರೋಗ್ಯದಿಂದ ಮನೆಯಲ್ಲಿ ನಿವೃತ್ತ ಶಿಕ್ಷಕಿ ರಾಜೇಶ್ವರಿ ಮೃತಪಟ್ಟಿದರೆ. ತಾಯಿ ಮೃತ ದೇಹ ಕೊಳೆತು ದುರ್ವಾಸನೆ ಬರುತ್ತಿದ್ದರೂ ತಾಯಿಯ ಶವದೊಂದಿಗೆ ಒಂದು ವಾರ ಕಳೆದಿದ್ದಾಳೆ ಮಾನಸಿಕ ಅಸ್ವಸ್ಥ ಮಗಳು ಶಾಂಭವಿ. ಮನೆಯಿಂದ ದುರ್ವಾಸನೆ ಬರುವುದನ್ನು ತಡೆಯಲಾರದೆ ಜಯನಗರ ಪೊಲೀಸ್ ಠಾಣೆಗೆ ಅಕ್ಕಪಕ್ಕದ ಮನೆಯವರು ಮಾಹಿತಿ ನೀಡಿದ್ದರು. ಜಯನಗರ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲು ಒಡೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Read More »ಶಿವಮೊಗ್ಗದಲ್ಲಿ ಅಣಕುಸೀಲ್ ಡೌನ್
ಶಿವಮೊಗ್ಗ: ಒಂದು ವೇಳೆ ಶಿವಮೊಗ್ಗದಲ್ಲಿ ಕರೋನಾ ವೈರಸ್ ಕಾಣಿಸಿಕೊಂಡರೆ ಏರಿಯಾಗಳನ್ನು ಹೇಗೆ ಸೀಲ್ ಡೌನ್ ಮಾಡಬೇಕು ಎಂಬ ಬಗ್ಗೆ ಇಂದು ಶಿವಮೊಗ್ಗದ ಸೀಗೆಹಟ್ಟಿ ಭಾಗದಲ್ಲಿ ಪೊಲೀಸರು ಅಣಕು ಸೀಲ್ ಡೌನ್ ಮಾಡಿದರು. ಸಿದ್ದಯ್ಯ ರಸ್ತೆಯಿಂದ ಸೀಗೆಹಟ್ಟಿವರೆಗೆ ಎಲ್ಲ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಯಿತು. ಈ ಪ್ರದೇಶದಲ್ಲಿ ವಾಹನಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ಏರಿಯಾವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲು ಎಷ್ಟು ಸಮಯ ಬೇಕು. ಬಫರ್ ಝೋನ್, ಕಂಟೋನ್ಮೆಂಟ್ ಏರಿಯಾ ಹೇಗೆ ಲಾಕ್ ಮಾಡಬೇಕು, ವಾಹನಸಂಚಾರವನ್ನು ಹೇಗೆ ನಿರ್ಬಂಧಿಸಬೇಕು ಎಂಬುದನ್ನು ...
Read More »ಕರೋನಾ ವೈರಸ್ ತುರ್ತುಪರಿಸ್ಥಿತಿಯನ್ನು ಎದುರಿಸಲು ಮೆಗ್ಗಾನ್ ಆಸ್ಪತ್ರೆ ಸಜ್ಜು – ಜಿಲ್ಲಾಧಿಕಾರಿ
ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊರ ರೋಗಿ ಸೇವೆ ಸ್ಥಗಿತ ಬೇಡ: ಖಾಸಗಿ ಆಸ್ಪತ್ರೆಗಳಲ್ಲಿ ...
Read More »ಅಗತ್ಯ ವಸ್ತುಗಳ ಸೇವೆ ಇರುತ್ತದೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಅಂಗಡಿಗಳಲ್ಲಿ ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಎಂದಿನಂತೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇಂದಿನಿಂದ ಮಾ.31ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಗಿದೆ. ಜನರು ಒಟ್ಟಾಗಿ ಸೇರುವಂತಹ ಮಾರುಕಟ್ಟೆ ಪ್ರದೇಶಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದೇ ರೀತಿ ಅಗತ್ಯ ವಸ್ತುಗಳು, ದಿನಸಿ ಸಾಮಾಗ್ರಿ ಇತ್ಯಾದಿ ಅಂಗಡಿಗಳನ್ನು ಹೊರತುಪಡಿಸಿ ಬೇರೆಲ್ಲಾ ...
Read More »47 ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ.. ಯಾರ್ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಗೊತ್ತಾ ??
ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ, ಸಾಧನೆ ಮತ್ತು ಅತ್ಯುತ್ತಮ ವರದಿ(ಲೇಖನ)ಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕೆ.ಎನ್.ಸುಬ್ರಮಣ್ಯ ಪ್ರಶಸ್ತಿಗೆ ದಿ ಹಿಂದೂ ಬ್ಯೂರೋ ಉಪ ಮುಖ್ಯಸ್ಥ ಬಿ.ಎಂ.ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಅಪ್ಪಾಜಿಗೌಡ ಸ್ಮಾರಕ ಪ್ರಶಸ್ತಿ-(ಅತ್ಯುತ್ತಮ ಚಲನಚಿತ್ರ ವರದಿಗಳಿಗೆ) ಹಿರಿಯ ಪತ್ರಕರ್ತ ಮುರಳೀಧರ್ ಖಜಾನೆ, ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿ-(ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ) ಕೋಲಾರ ಕನ್ನಡ ಮಿತ್ರ ಸಂಪಾದಕರು ಕೋ.ನಾ.ಪ್ರಭಾಕರ್ ಅವರು ಆಯ್ಕೆಯಾಗಿದ್ದಾರೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ-ಪ್ರಜಾವಾಣಿ ವರದಿಗಾರ ಭೀಮಸೇನ ...
Read More »ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು
ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.
Read More »ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿಡೀರ್ ರಸ್ತೆ ತಡೆ : ಪೊಲೀಸರಿಂದ ಸಿಕ್ತು ಲಾಠಿ ರುಚಿ
ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲವೆಂದು ಆಗ್ರಹಿಸಿ ಕಾರ್ಯಕರ್ತರು ಅಮೀರ್ ಅಹಮ್ಮದ್ ವೃತ್ತದ ಬಳಿ ಬಿ.ಎಚ್.ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಘಟನೆ ವಿವರ: ಪೌರತ್ವ ಕಾಯ್ದೆ ವಿರುದ್ಧ ಜ.3ರಂದು ನಗರದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಕೆಂದು ವಿವಿಧ ಮುಸ್ಲಿಂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಅನುಮತಿ ...
Read More »
C News TV Kannada News Online in cnewstv