ಶಿವಮೊಗ್ಗ: ಇಂದು ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು ಮಹಾನಗರ ಪಾಲಿಕೆ ಉಪಮೇಯರ್ ಎಸ್ ಎನ್ ಚನ್ನಬಸಪ್ಪ,, ಮಹಾನಗರಪಾಲಿಕೆಯಲ್ಲಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಮಂಡಳಿ ಉತ್ತಮ ಕೆಲಸ ಮಾಡುವ ಮೂಲಕ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇವುಗಳನ್ನು ಮಾಡುವ ಸಂದರ್ಭದಲ್ಲಿ ನಾಗರಿಕರಿಗೆ ಒಂದಿಷ್ಟು ತೊಂದರೆಯಾಗಿರುವುದು ನಿಜ. ಆದರೆ ಅಭಿವೃದಿಯಾಗಬೇಕಾದರೆ ಸಣ್ಣಪುಟ್ಟ ತೊಂದರೆಗಳು ಸಹಜವಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತವೆ. ಈಗಾಗಲೇ ಅಭಿವೃದಿಯ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ಮುಂದಿನ ಎರಡು ವರ್ಷಗಳ ಅವಧಿ ಯಲ್ಲಿ ...
Read More »Uncategorized
ಪ್ಲಾಸ್ಟಿಕ್ ಮುಕ್ತ ಆಂದೋಲನದ ಮೂಲಕ ಗಾಂಧಿ ಜಯಂತಿ ಆಚರಣೆ..
ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಪಿ.ವಿ.ಸಿಂಧು ಶಟಲ್ ಬಳಗ ಹಾಗೂ ಗ್ರೋ ಗ್ರೀನ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯನ್ನು ಚಂದನ ಪಾರ್ಕ್ ನಲ್ಲಿ ಆಚರಿಸಲಾಯಿತು.. ಬಳಿಕ ಬಡಾವಣೆಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮಾದಾನ ಮಾಡಿದರು. ಇದಾದ ನಂತರದಲ್ಲಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ಗಳನ್ನು ವಿತರಣೆ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ಆಂದೋಲನಕ್ಕೆ ಬೆಂಬಲ ಸೂಚಿಸಿದರು..ಈ ಸಂದರ್ಭದಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಕಾಟನ್ ಬ್ಯಾಗ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿ.ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಂಪೂರ್ಣ ಸಹಕರಿಸಿ ಬಡಾವಣೆಯ ನಿವಾಸಿಗಳಲ್ಲಿ ...
Read More »ಬ್ಯಾಂಕ್ ನಲ್ಲಿ ಇಟ್ಟ ಹಣ ಬಿಡಿಸಿಕೊಳ್ಳಲು ಗ್ರಾಹಕರ ಪರದಾಟ
ಶಿವಮೊಗ್ಗ: ಬ್ಯಾಂಕ್ ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲ ಎಂದರೆ ಬ್ಯಾಂಕ್ ನವರು ದಂಡ ಹಾಕುತ್ತಾರೆ. ಆದರೆ ಬ್ಯಾಂಕ್ ನಲ್ಲಿ ಡಿಪಾಸಿಟ್ ಇಟ್ಟಿರುವ ಹಣವನ್ನು ಬಿಡಿಸಿಕೊಳ್ಳಲು ಹೋದರೆ ಆ ಹಣವನ್ನು ಗ್ರಾಹಕರಿಗೆ ಕೊಡಲು ಸಾಧ್ಯವಿಲ್ಲ ಎನ್ನುವುದು ಎಷ್ಟರಮಟ್ಟಿಗೆ ಸರಿ. ಇಂಥದ್ದೊಂದು ಸಂದಿಗ್ಧ ಸ್ಥಿತಿಗೆ ಪಂಜಾಬ್ ಅಂಡ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ಬಂದು ತಲುಪಿಗೆ. ಹೌದು ಇಂದು ಬೆಳಗ್ಗೆ ಈ ಬ್ಯಾಂಕ್ ನ ಗ್ರಾಹಕರಿಗೆ ಅಚ್ಚರಿ ಕಾದಿತ್ತು. ಬ್ಯಾಂಕ್ ನಲ್ಲಿ ತಾವು ಇಟ್ಟಿರುವ ಹಣದಲ್ಲಿ ತಮಗೆಷ್ಟು ಬೇಕೋ ಅಷ್ಟನ್ನು ಬಿಡಿಸಿಕೊಳ್ಳಲು ಹೋದ ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ...
Read More »ಅನಾಥರು ಹಾಗೂ ಬುದ್ದಿಮಾಂದ್ಯರೊಂದಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಜನ್ಮದಿನಾಚರಣೆ
ಶಿವಮೊಗ್ಗ: ತಮ್ಮ ಆತ್ಮೀಯರೊಂದಿಗೆ ಸೇರಿ ಜನ್ಮ ದಿನ ಆಚರಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಆದರೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಅವರು ತಮ್ಮ ಜನ್ಮ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಂಗಳವಾರ ಬೆಳಗ್ಗೆ ವಿದ್ಯಾನಗರದಲ್ಲಿರುವ ಆಶಾಕಿರಣ ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ಜನ್ಮದಿನ ಆಚರಿಸಿಕೊಂಡ ಸುಂದರೇಶ್ ಅವರು ಬಳಿಕ ವಿವೇಕಾನಂದ ಬಡಾವಣೆಯಲ್ಲಿರುವ ಜೀವನ ಸಂಜೆ ವೃದ್ಧಾಶ್ರಮದಲ್ಲಿ ವೃದ್ಧರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ನಂತರ ಕಾಂಗ್ರೆಸ್ ಕಚೇರಿಗೆ ಆಗಮಿಸಿ ತಮ್ಮ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೇರಿ ಜನ್ಮದಿನ ಆಚರಿಸಿಕೊಂಡರು. ಬಳಿಕ ಗೋಪಾಳದ ಶಾರದದೇವಿ ಅಂದರ ವಿಕಾಸಕೇಂದ್ರ, ಆಲ್ಕೊಳದಲ್ಲಿರುವ ...
Read More »ಆಯುಷ್ಮಾನ್ ಭಾರತ ಜಾಥಾಗೆ ಚಾಲನೆ
ಶಿವಮೊಗ್ಗ: ಆಯುಷ್ಮಾನ್ ಭಾರತ ಪಾಕ್ಷಿಕ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಇಂದು ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೂ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನಸಾಮನ್ಯರಿಗೆ ತಲುಪುವಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ...
Read More »ಸರ್ಕಾರದಲ್ಲಿ ಸಿಎಂ ಪುತ್ರರ ಹಸ್ತಕ್ಷೇಪ ನಿರಾಕರಿಸಿದ ಬಿವೈಆರ್.
ಶಿವಮೊಗ್ಗ: ಸಿಎಂ ಯಡಿಯೂರಪ್ಪ ಅವರ ಸರ್ಕಾರದಲ್ಲಿ ತಮ್ಮ ಹಸ್ತಕ್ಷೇಪದ ಆರೋಪವನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನಿರಾಕರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರ ಪುತ್ರನಾದರೂ ನಾನೊಬ್ಬ ಜನಪ್ರತಿನಿಧಿ. ಹಾಗೆಯೇ ವಿಜಯೇಂದ್ರ ಬಿಜೆಪಿ ಕಾರ್ಯಕರ್ತನಾಗಿ ದ್ದರಿಂದ ಸಹಜವಾಗಿಯೇ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತೇವೆ ಅಷ್ಟೇ…. ಅಷ್ಟೇ ಹೊರತು ಪಡಿಸಿ ಅಧಿಕಾರ ದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಸುಪ್ರೀಂ ಕೋರ್ಟ್ ನಲ್ಲಿಂದು ಬಿಎಸ್ವೈ ಆಸ್ತಿ ದುಪ್ಪಟ್ಟು ಪ್ರಕರಣದ ಅರ್ಜಿ ವಿಚಾರಣೆ ವಿಚಾರ ನಡೆಯುತ್ತಿದ್ದು, ಕಾನೂನು ತನ್ನ ಕಾರ್ಯ ನಿರ್ವಹಿಸುತ್ತದೆ. ...
Read More »ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನಾರಾಯಣ ಹೃದಯಾಲಯ, ಸರ್ಜಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ನಗರ ಬಿಜೆಪಿ ಆಯೋಜಿಸಿದ್ದ ಆರೋಗ್ಯ ಶಿಬಿರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಂಸದ ರಾಘವೇಂದ್ರ, ಪ್ರಪಂಚ ಕಂಡ ಅಪ್ರತಿಮ ನಾಯಕ ಪ್ರಧಾನಿ ಮೋದಿಯವರು. ಅವರ ಜನ್ಮದಿನದ ಅಂಗವಾಗಿ ನಮ್ಮ ಸಂಘಟನೆ ರಾಷ್ಟ್ರಾಧ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ...
Read More »ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಸಚಿವ ಸಿ.ಟಿ.ರವಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 47ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಈ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಧಾರ್ಮಿಕ, ಪ್ರಾಕೃತಿಕ, ಹೆರಿಟೇಜ್ ಸೇರಿದಂತೆ 4 ಟೂರಿಸಂ ಸಕ್ರ್ಯೂಟ್ ರೂಪಿಸಲಾಗಿದೆ. ಈ ಎಲ್ಲಾ ಪ್ರವಾಸಿ ತಾಣಗಳಿಗೆ ಸರಿಯಾದ ಸಂಪರ್ಕ ವ್ಯವಸ್ಥೆ, ವಸತಿ, ಶಾಪಿಂಗ್, ಶೌಚಾಲಯ, ಕುಡಿಯುವ ...
Read More »ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಗೆ ಸಿದ್ಧವಾದ ರಕ್ಷಣಾ ಇಲಾಖೆ
ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ. 700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ...
Read More »ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಗಳ ನಡುವೆ ಡಿಕ್ಕಿ..
ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಬಳಿಯ ಶರಾವತಿಯ ಹಿನ್ನೀರಿನಲ್ಲಿಎರಡು ಲಾಂಚ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ 500 ಕ್ಕುಹ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಶರಾವತಿ-1 ಹಾಗೂ ಶರಾವತಿ-2 ಲಾಂಚ್ ಗಳ ನಡುವೆ ಅಂಬಾರಗೋಡ್ಲು ದಡದ ಸಮೀಪ ಡಿಕ್ಕಿ ಸಂಭವಿಸಿದೆ. ಲಾಂಚ್ ಚಾಲಕರುಗಳ ನಿರ್ಲಕ್ಷವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾಂಚ್ ಗಳ ಡಿಕ್ಕಿಯಲ್ಲಿ ಎರಡೂ ಲಾಂಚ್ ಗಳೂ ಜಖಂಗೊಂಡಿವೆ. ಆದರೆ ಸಂಚಾರ ನಡೆಸಲು ಯಾವುದೇ ಸಮಸ್ಯೆ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ಬಳಿಕವೂ ಮತ್ತೆ ಸಂಚಾರ ಆರಂಭಿಸಿವೆ.
Read More »
C News TV Kannada News Online in cnewstv