Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಲಾಕ್‌ಡೌನ್‌ನಿಂದ ಕೋಳಿ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು ಕೋಳಿ ಸಾಕಣೆದಾರರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಚಿಕನ್ ಮಾರಾಟ ಅವಧಿ ಹೆಚ್ಚಿಸಿ ರೈತರು, ಮಾರಾಟಗಾರರ ರಕ್ಷಣೆಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ನಿಗದಿ ಮಾಡಿರುವ ಕಾರಣ ಕೋಳಿ ಮಾರಾಟದಲ್ಲಿ ಇಳಿಕೆ ಕಂಡ ಪರಿಣಾಮ ರಿಟೈಲ್‌ದಾರರು ಕಡಿಮೆ ಬೆಲೆಗೆ ಕೋಳಿ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಆದರೆ ಮಾರಾಟ ಬೆಲೆಯಲ್ಲಿ ಕಡಿಮೆಯಾಗಿಲ್ಲ. ...
Read More »ರಾಜ್ಯ
ಸಿ.ಎಂ. ಬದಲಾವಣೆ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು ಗೊತ್ತಾ ??
Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯಾವುದೋ ಒಂದು ಪತ್ರಿಕೆಯಲ್ಲಿ, ಯಾವುದೋ ಒಂದು ಟಿವಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತೋರಿಸುತ್ತಾರೆ.ಅದು ಸತ್ಯ ಅಂತ ನಂಬುದಕ್ಕೆ ಆಗುವುದಿಲ್ಲ.ಯಡಿಯೂರಪ್ಪ ಅವರ ಅಧಿಕಾರವಧಿ ಮುಗಿದೆ ಹೋಯ್ತು, ಹೊಸ ಸಿಎಂ ಪ್ರತಿಜ್ಞಾ ವಿಧಿ ತೆಗೆದುಕೊಂಡು ಬಿಟ್ಟೆ ಬಿಟ್ಟರು ಅಂತಾ ತೋರಿಸಿದ್ರು.ಬಿಜೆಪಿ ಎಲ್ಲಾ ವಿಚಾರದ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ ಅವರು,ಪತ್ರಿಕೆ ಟಿವಿಯವರು ನಮ್ಮ ಪಕ್ಷದ ಮೇಲೆ ಡಾಮಿನೆಂಟ್ ಮಾಡೋಕೆ ಸಾಧ್ಯವಿಲ್ಲ ಎಂದರು. ನಮ್ಮದು ಕಾಂಗ್ರೆಸ್ ಅಲ್ಲ ...
Read More »ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕರೋನಾ ವಾರಿಯರ್ಸ್
Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಅವರು 4ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕರೋನಾ ...
Read More »18 ವರ್ಷ ಮೇಲ್ಪಟ್ಟವರಿಗೆ ಸದ್ಯಕ್ಕಿಲ್ಲ ಲಸಿಕೆ, ಎರಡನೇ ಡೋಸ್ ರವರಿಗೆ ಮೊದಲ ಆದ್ಯತೆ
Cnewstv.in / Karnataka / 13.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ಯಿಂದ ( ಮೇ. 14) ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಮೊದಲ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದ ಎಲ್ಲ ಲಸಿಕಾ ಕೇಂದ್ರಗಳು ಈ ಆದೇಶವನ್ನು ಪಾಲಿಸಲು ಅರೋಗ್ಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಪಡೆದಿರುವ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಮೊದಲ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದ್ದು, ಈಗ ರಾಜ್ಯದಲ್ಲಿ ಲಭ್ಯವಿರುವ ಲಸಿಕೆಯನ್ನು ಎರಡನೇ ಡೋಸ್ ...
Read More »ಪರಿಹಾರ ನೀಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ, ಕೆ.ಎಸ್.ಈ ಹೇಳಿಕೆಗೆ ತಿರುಗೇಟು ಕೊಟ್ಟ ಶಿವಮೊಗ್ಗ ಯುವ ಕಾಂಗ್ರೆಸ್
Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಹಾರ ಕೊಡಲು ನಾವೇನು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದ್ದೀವಾ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಶಿವಮೊಗ್ಗ ಯುವ ಕಾಂಗ್ರೆಸ್ ತಿರುಗೇಟು ನೀಡಿದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್ ರವರು ಇಙದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಸಚಿವರಾದ ಕೆಎಸ್ ಈಶ್ವರಪ್ಪನವರು ನಿನ್ನೆ ದಿನ ಕೊಟ್ಟಂತಹ ಹೇಳಿಕೆಯು ಬಾಲಿಶ ಹೇಳಿಕೆ ಆಗಿದ್ದು, ಈಶ್ವರಪ್ಪ ರವರು ಹೇಳಿದ್ದು ಸತ್ಯ ಇವರ ಬಳಿ ನೋಟ್ ...
Read More »ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ.
ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 791 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3519 ಸಕ್ರಿಯ ಪ್ರಕರಣಗಳಿವೆ. 2902 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1666 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 7 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 405 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 442 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 401 ಜನ ನಿಗದಿತ ...
Read More »18 ವರ್ಷ ಮೇಲ್ಪಟ್ಟವರಿಗೆ ಶೀಘ್ರ ಲಸಿಕೆ ನೀಡಿ: ಕೆ.ಚೇತನ್
18 ವರ್ಷ ಮೇಲ್ಪಟ್ಟವರಿಗೆ ಶ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಕೊರೊನಾ 2ನೇ ಅಲೆಗೆ ಯುವಕರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಪ್ರಮುಖ ಕಾರಣ. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿರುವುದು ಏಕೆ ಎಂಬುದನ್ನು ಚೇತನ್ ಪ್ರಶ್ನಿಸಿದ್ದಾರೆ. ...
Read More »ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲಾಕ್‍ಡೌನ್ ಕುರಿತಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪೊಲೀಸ್ ಇಲಾಖೆ ಜಾರಿಗೊಳಿಸಬೇಕು. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಇತ್ಯಾದಿಗಳಿಗಾಗಿ ನಿಗದಿಪಡಿಸಿದ ಸಮಯ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದು ಹೇಳಿದರು. ಬೆಂಗಳೂರಿನಿಂದ ಬರುವವರ ಮೇಲೆ ನಿಗಾ: ಬೆಂಗಳೂರಿನಿಂದ ಆಗಮಿಸುವವರ ಮೇಲೆ ಕಳೆದ ಬಾರಿಯಂತೆ ಈ ...
Read More »ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ
ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ. ಸೋಂಕಿತರನ್ನು ಯಾವ ಆಸ್ಪತ್ರೆಗೆ ಸೇರಿಸಬೇಕು, ವೆಂಟಿಲೇಟರ್, ವ್ಯಾಕ್ಸಿನೇಷನ್, ಆಂಬುಲೆನ್ಸ್ ಸೇರಿದಂತೆ ಪ್ರತಿಯೊಂದು ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಟಿ.ಡಿ ಮೇಘರಾಜ್ ಅವರು ತಿಳಿಸಿದ್ದಾರೆ. 1-ಆಸ್ಪತ್ರೆ ಮಾಹಿತಿಗಾಗಿ ಮತ್ತು ...
Read More »
C News TV Kannada News Online in cnewstv