Breaking News

ರಾಜ್ಯ

ಕೊರೊನಾ ಅತಂಕ : ರಾಜ್ಯಾದ್ಯಂತ ಬ್ಯಾಂಕಿಂಗ್ ವೇಳೆ ಬದಲು – ಎಸ್.ಎಲ್.ಬಿ.ಸಿ

  ಕೊರೋನಾ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ ಇದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಯಮಗಳನ್ನು ಪಾಲಿಸುವುದು ಹಾಗೂ ಬ್ಯಾಂಕ್ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಬ್ಯಾಂಕಿಂಗ್ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ ಎಂದು ಸ್ಟೇಟ್ ಲೆವೆಲ್ ಬ್ಯಾಂಕ್ ಕಮಿಟಿ ಕನ್ವೈನರ್(SLBC) ತಿಳಿಸಿದ್ದಾರೆ. ಏಪ್ರಿಲ್ 22 ರಿಂದ ಮೇ 31 ರವರೆಗೆ ರಾಜ್ಯದ ಎಲ್ಲಾ ಬ್ಯಾಂಕುಗಳು ಇನ್ನು ಮುಂದೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಸೇವೆ ನೀಡಲಿದೆ ಹಾಗೂ ಬ್ಯಾಂಕಿನಲ್ಲಿ ಶೇಕಡಾ 50 ರಷ್ಟು ಮಾತ್ರ ಸಿಬ್ಬಂದಿ ಹಾಜರಾಗುವಂತೆ ಸ್ಟೇಟ್ ಲೆವೆಲ್ ...

Read More »

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ : ಜನರಲ್ಲಿ ಜಾಗೃತಿ ಮೂಡಿಸಿದ ಮೇಯರ್ ಸುನಿತಾ ಅಣ್ಣಪ್ಪ.

  ಶಿವಮೊಗ್ಗ : ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದು ಮಹಾನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಉಪಮೇಯರ್ ಶಂಕರ್ ಗನ್ನಿಯವರು ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಶಿವಪ್ಪ ನಾಯಕ ವೃತ್ತ, ಗಾಂಧಿಬಜಾರ್ ಸೇರಿದಂತೆ ಪ್ರಮುಖ ವ್ಯಾಪಾರ ಕೇಂದ್ರಗಳಲ್ಲಿ ಸಂಚರಿಸಿ ಮಾಸ್ಕ್ ಹಾಕುವುದು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ವ್ಯಾಪಾರಸ್ಥರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ...

Read More »

ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ, ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ. ಹೊಸ ರೂಲ್ಸ್ ನ ಕಂಪ್ಲೀಟ್ ಡೀಟೇಲ್ಸ್

  ಬೆಂಗಳೂರು : ಎ.20: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಿಂದ ಮೇ4ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಪ್ರತಿದಿನ ರಾತ್ರಿ 9 ರಿಂದ ಮುಂಜಾನೆ 6 ಗಂಟೆಯವರೆಗೂ ಕರ್ಫ್ಯೂ ರೆಸ್ಟೋರೆಂಟ್’ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ, ಸಪ್ಲೈ ಮಾಡುವಂತಿಲ್ಲ ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಲ್ಲಾ ಶಾಲೆ ಕಾಲೇಜುಗಳು, ಸ್ವಿಮ್ಮಿಂಗ್ ಪೂಲ್, ಜಿಮ್ ,ಪಾಕ್ ಕ್ರೀಡಾಂಗಣ, ಸಿನಿಮಾ ...

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್

  ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಬುಧವಾರದಿಂದ ಎರಡು ದಿನ ಅಬ್ಬರ ಪ್ರಚಾರ ನಡೆಸಿದ್ದರು. ಈ ವೇಳೆ ಅವರು 99 ಡಿಗ್ರಿ ಜ್ವರದಿಂದ ಬಳಲುತ್ತಿದ್ದರು. ಈ ಜ್ವರದ ನಡುವೆಯೂ ರೋಡ್​ ಶೋ, ಸಮಾವೇಶದಲ್ಲಿ ಮತಪ್ರಚಾರ ನಡೆಸಿದ್ದರು. ಜ್ವರ ತಗ್ಗದ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ...

Read More »

ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ.

  ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2 ನೇ ಅಲೆಯ ಸ್ಫೋಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರು, ದಕ್ಸಿಣ ಕನ್ನಡ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನಗಳ ಕಾಲ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಶನಿವಾರದಿಂದ ಜಾರಿಗೊಳಿಸುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ. ಪಿಎಂ ...

Read More »

ಮೇ ಅಂತ್ಯದ ವೇಳೆ ಕೊರೋನಾ ಸ್ಫೋಟ: ಸಚಿವ ಡಾ.ಕೆ.ಸುಧಾಕರ್

  ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ.‌ ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...

Read More »

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಎಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ?? ಹಾಗೂ ಲಭ್ಯವಿರುವ ಲಸಿಕೆಯ ಪ್ರಮಾಣವೆಷ್ಟು ಗೊತ್ತಾ ??

  ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 2200 ಮಂದಿಯ ಕರೋನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕರೋನಾ ನಿಯಂತ್ರಣದಲ್ಲಿಡಬಹುದಾಗಿದೆ. ಜನರು ನಿರ್ಲಕ್ಷö್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟವನ್ನು ಎದುರಿಸಬೇಕಾಗಬಹುದು. ಜಿಲ್ಲೆಯಲ್ಲಿ ಇದುವರೆಗೆ 18041 (ಶೇ.85) ಆರೋಗ್ಯ ಕಾರ್ಯಕರ್ತೆಯರಿಗೆ ಪ್ರಥಮ ಡೋಸ್ ಹಾಗೂ ಶೇ.53ರಷ್ಟು ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ...

Read More »

ಶಿವಮೊಗ್ಗಕ್ಕೆ ನೂತನ ಎಸ್ಪಿ ಆಗಿ ಲಕ್ಷ್ಮೀಪ್ರಸಾದ್ ನೇಮಕ.

  ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಯಾಗಿ ಯುವ ಅಧಿಕಾರಿ ಬಿ.ಎಂ‌. ಲಕ್ಷ್ಮೀ ಪ್ರಸಾದ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಪ್ರಸುತ್ತ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರಿನ ಪೂರ್ವ ಸಂಚಾರ ವಿಭಾಗದ ಡೆಪ್ಯೂಟಿ ಕಮಿಷನರ್ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ. ಬಿ.ಎಂ‌. ಲಕ್ಷ್ಮೀ ಪ್ರಸಾದ್ ರವರ ಕಿರು ಪರಿಚಯ 2014 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಲಕ್ಷ್ಮೀ ಪ್ರಸಾದ್ ಬಿ ಟೆಕ್ ಪದವೀದರರಾಗಿದ್ದಾರೆ. ಯುಪಿಎಸ್ ಸಿ ಯಲ್ಲಿ 2014 ರಲ್ಲಿ ನಡೆದ ಯುಪಿಎಸ್ ಸಿಯಲ್ಲಿ 151 ನೇ ರ್ಯಾಕ್ ಪಡೆದಿದ್ದರು. ಇವರು ...

Read More »

ಶಿವಮೊಗ್ಗ ಜಿಲ್ಲೆಯಾದ್ಯಂತ ಮಾರ್ಚ್ ತಿಂಗಳಿನಲ್ಲಿ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಎಷ್ಟು ಪ್ರಕರಣಗಳು ದಾಖಲಾಗಿದೆ ಗೊತ್ತಾ ?!

  ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಪೊಲೀಸ್ ಇಲಾಖೆ ಯಿಂದ ಕಾರ್ಯಾಚರಣೆ ನಡೆಸಿ ಮಾರ್ಚ್ 1 ರಿಂದ ಮಾರ್ಚ್ 31ರ ವರೆಗೆ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ, ರೂ 2,23,350 ದಂಡ ವಿಧಿಸಿ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಎಂ ಶಾಂತರಾಜು ರವರು ತಿಳಿಸಿರುತ್ತಾರೆ. ತಾಲ್ಲೂಕುವಾರು ದಾಖಲಾದ ಪ್ರಕರಣಗಳು :  ಶಿವಮೊಗ್ಗ ತಾಲ್ಲೂಕ್ : ಒಟ್ಟು 468 ಪ್ರಕರಣಗಳನ್ನು ದಾಖಲಿಸಿ ರೂ 1,00,750 ದಂಡ ವಿಧಿಸಲಾಗಿದೆ. ಭದ್ರಾವತಿ ತಾಲ್ಲೂಕ್ : ಒಟ್ಟು 827 ಪ್ರಕರಣಗಳನ್ನು ದಾಖಲಿಸಿ ...

Read More »

ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ

  ಬೆಂಗಳೂರು : ಸಿ.ಡಿ ಪ್ರಕರಣದಲ್ಲಿ ಸಿಕ್ಕಿಕೊಂಡಿರುವ ಅತೃಪ್ತ ಶಾಸಕ ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಕೂಡಲೆ ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಅನೀತಿ ಮತ್ತು ಅಧರ್ಮ ರಾಜಕಾರಣದ ವಿರುದ್ಧ ಇಂದು ಬೆಳಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ನೇತೃತ್ವವನ್ನು ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ...

Read More »