Breaking News

ರಾಜ್ಯ

ಮಾರ್ಚ್ 13ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ: 25000 ಜನ ಭಾಗಿ.‌

  ಶಿವಮೊಗ್ಗ : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದರಾದ ಧ್ರವನಾರಾಯನ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಮಾರ್ಚ್ 13ರಂದು ಶಿವಮೊಗ್ಗದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನವರೆಗೆ ಮೆರವಣಿಗೆ ನಡೆಸಿ, ನಂತರ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದರು. ಪ್ರತಿಭಟನೆ ಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಲ್ಲಿಕಾಜುನ್ ಖಕೆ ಸೇರಿದಂತೆ ಪ್ರಮುಖ ...

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021 – 22ನೇ ಸಾಲಿನ ಬಜೆಟ್‌ನಲ್ಲಿ – ಶಿವಮೊಗ್ಗಕ್ಕೆ ಏನೆಲ್ಲ ಘೋಷಣೆಯಾಗಿದೆ?

  ಶಿವಮೊಗ್ಗದಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್‍ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಶಿವಮೊಗ್ಗ ಮತ್ತು ಮೈಸೂರಿನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಸಂಸ್ಥೆ ಮಾದರಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ 384 ಕೋಟಿ ರೂ. ಮತ್ತು 220 ಕೋಟಿ ರೂ.ಗಳ ನೀಡಲಾಗಿದೆ. ಶೀಘ್ರವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ. ಮಲೆನಾಡು ಮತ್ತು ...

Read More »

ಲಾರಿ ಮುಷ್ಕರ ಹಿಂಪಡೆಯಲು ಸಚಿವ ಈಶ್ವರಪ್ಪ ಮನವಿ.

ಶಿವಮೊಗ್ಗ : ತೈಲಬೆಲೆ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ನಡೆಸುತ್ತಿರುವ ಲಾರಿ ಮುಷ್ಕರವನ್ನು ಹಿಂಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ. ಅದರೆ, ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡೋದು ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರ ಬೆಲೆಯನ್ನು ಎಷ್ಟು ಕಡಿಮೆ ಮಾಡ್ಬೇಕೋ ಅಷ್ಟು ಕಡಿಮೆ ಮಾಡುತ್ತೇ. ಮುಷ್ಕರ ಮಾಡೋದ್ರಿಂದ ನಿಮಗೆ ಮಾತ್ರವಲ್ಲದೆ, ರೈತರು, ಕೈಗಾರಿಕೆಗಳು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತೇ. ಮುಷ್ಕರವೇ ...

Read More »

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ ಸಿಎಂ

  ವಿಜಯಪುರ ಜಿಲ್ಲೆಯಲ್ಲಿ‌ನಲ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಿಂದಲೇ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ನಲ್ಲಿ‌ ನಡೆದ ವರ್ಚುವಲ್‌ ಕಾರ್ಯಕ್ರಮದಲ್ಲಿ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು‌. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನ‌ನಿಲ್ದಾಣವನ್ನು ಎರಡು ಹಂತದಲ್ಲಿ‌ ಅಭಿವೃದ್ಧಿ ಪಡಿಸಲಾಗುವುದು. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ‌ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು. ವಿಜಯಪುರ ವಿಮಾನ ನಿಲ್ದಾಣದಲ್ಲಿ ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ...

Read More »

ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ

  ಶಿವಮೊಗ್ಗ : ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು. ಸಾರ್ವಜನಿಕರ ದೂರಿಗೆ ತಕ್ಷಣ ...

Read More »

ನಿರಂತರ ಜ್ಯೋತಿ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಸೂಚನೆ : ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್‍ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ...

Read More »

ಶಿವಮೊಗ್ಗದಲ್ಲಿ ಇವತ್ತು ನಡೆಯಬೇಕಿದ್ದ ಸಚಿವರ ಕಾರ್ಯಕ್ರಮ ಸದ್ದು.

  ಶಿವಮೊಗ್ಗ : ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆ‍ತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಚಿವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆಗೆ ನಡೆಸಬೇಕಿತ್ತು. ಬೆಳಗ್ಗೆ 6 ಗಂಟೆಯಿಂದಲೇ ಪರಿಶೀಲನೆ ಆರಂಭವಾಗಬೇಕಿತ್ತು. ಆದರೆ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ತಿಳಿದು, ಬೆಳಗಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

Read More »

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಮೂವರು ಖೈದಿಗಳಿಗೆ ಇರಿದ ಸಹಖೈದಿ

  ಶಿವಮೊಗ್ಗ : ಚಮಚವನ್ನು ಚಾಕು ರೀತಿ ಬಳಕೆ ಮಾಡಿ ಸಜಾಬಂಧಿಯೊಬ್ಬ ಮೂವರು ಸಜಾಬಂಧಿಗಳಿಗೆ ಇರಿದಿರುವ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಇಂದು ಸಂಜೆ ನಡೆದಿದೆ. ನ್ಯಾಯಾಧೀಶರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲಿನಲ್ಲಿದ್ದ ಉಡುಪಿಯ ಪ್ರಶಾಂತ್ ಎಂಬ ಖೈದಿ ತನ್ನೊಂದಿಗಿದ್ದ ಮೂವರು ಖೈದಿಗಳನ್ನು ಇರಿದ ಆರೋಪಿ. ಇಂದು ಪ್ರಶಾಂತ್ ಓರ್ವ ಖೈದಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಈ ವೇಳೆ ಜೈಲಿನಲ್ಲಿ ಸಜಾಬಂಧಿಗಳಾಗಿರುವ ಮಾಲತೇಶ, ದೇವೇಂದ್ರ, ಬೆನಕಶೆಟ್ಟಿ ಎಂಬುವರು ಜಗಳ ಬಿಡಿಸಲು ಹೋಗಿದ್ದಾರೆ. ಆಗ ರೊಚ್ಚಿಗೆದ್ದ ಪ್ರಶಾಂತ್ ಈ ಮೂವರ ಮೇಲೆ ಚಮಚವನ್ನೇ ಚಾಕುವಿನಂತೆ ಬಳಸಿ ...

Read More »

ವದಂತಿಗಳಿಗೆ ಕಿವಿಗೊಡಬೇಡಿ. ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಬಿಗಿ ಬಂದೋಬಸ್ತು : ಐಜಿಪಿ ರವಿ

  ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಯಿಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ...

Read More »

ಶಿವಮೊಗ್ಗದ 3 ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದಲ್ಲಿ ಉಂಟಾದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ, ತುಂಗಾನಗರ, ಕೋಟೆ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ನಾಳೆ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಿಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.  

Read More »