Breaking News

ರಾಜ್ಯ

ಗದುಗಿನ ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನ

ಗದುಗಿನ ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ನೆನ್ನೆ   ಹೃದಯಾಘಾತಕ್ಕೆ ಒಳಗಾಗಿದ್ದರು ಅವರನ್ನು ಗದಗಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳು ತೋಂಟದಾರ್ಯ ಮಠದ 19ನೇ ಪೀಠಾಧಿಪತಿಯಾಗಿದ್ದರು. 1994ರಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ, 1995ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಇವರಿಗೆ ಲಭಿಸಿತು. 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ತೋಂಟದಾರ್ಯ ಸ್ವಾಮೀಜಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More »

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸುಧಾ ಮೂರ್ತಿ ಚಾಲನೆ.

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಬೆಳ್ಳಗೆ ಸುಧಾ ಮೂರ್ತಿ ಚಾನನೆ ನೀಡಿದ್ದರು. ಚಾಮುಂಡಿ ಬೆಟ್ಟದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿಯವರು ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸುಧಾ ಮೂರ್ತಿ ಭಾಷಣ ಆರಂಭದಲ್ಲಿ, ಕನ್ನಡ ಜನತೆಗೆ ನನ್ನ ನಮಸ್ಕಾರಗಳನ್ನು ತಿಳಿಸಿದ್ದರು. ಸುಧಾ ಮೂರ್ತಿಯವರು ಸಂಸ್ಕೃತಿಯ ಪ್ರತಿಬಿಂಬವಾದ ದಸರಾ ಮಹೋತ್ಸವ ಉದ್ಘಾಟನೆಗೆ ನನ್ನ ಆಯ್ಕೆ ಮಾಡಿದ್ದು ಪೂರ್ವ ಜನ್ಮದ ಪುಣ್ಯ. ದಸರಾ ಶತಮಾನಗಳಿಂದ ಆಚರಿಸುತ್ತಿರುವ ಹಬ್ಬ.ಅಜ್ಜಿಯ ಕಾಲದಲ್ಲಿ ಇದಕ್ಕೆ ಮಹಾನವಮಿ ಹಬ್ಬ ಎಂದು ಕರೆಯುತ್ತಿದ್ದರು. ಮೈಸೂರಿನ ದೊರೆಗಳಿಗೆ ನಾವು ...

Read More »

ಲೋಕಸಭೆ ಹಾಗು ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ

ರಾಜ್ಯದಲ್ಲಿನ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ ಹಾಗು ನ. 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್,ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.. ಅ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 17ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು. ಅ. 20ರಂದು ...

Read More »

ನಾಳೆಯಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ನಾಳೆಯಿಂದ ರಾಜ್ಯದ ದಕ್ಷಿಣ ಒಳನಾಡಿನ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ನಾಳೆಯಿಂದ ಒಂದೆರೆಡು ದಿನಗಳ ಕಾಲ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದಿಂದ ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ತಿಳಿದು ಬಂದಿದೆ.

Read More »

ವಿವಿಧ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 04 : (ಕರ್ನಾಟಕ ವಾರ್ತೆ) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಪ್ರಸ್ತಾವನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31ರೊಳಗಾಗಿ www.karepass.cgg.gov.in ಮತ್ತು www.backwardclasses.kar.nic.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ...

Read More »

ಗಾಂಧಿ ಗ್ರಾಮ ಪುರಸ್ಕಾರ ತಿರಸ್ಕರ

 ಬೀದರ್ ಜಿಲ್ಲೆಯ ಚಂಬೊಲ್ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿತು, ಆದರೆ ಇಲ್ಲಿನ ಪಿ.ಡಿ.ಓ ಮಂಗಳಾ ಕಂಬ್ಳೆ ಪ್ರಶಸ್ತಿಗೆ ಸಂಭ್ರಮಿಸುವ ಸ್ಥಿತಿಯಲ್ಲಿಲ್ಲ. ಇದಕ್ಕೆ ಕಾರಣ ಅವರ ಮೇಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕಿರುಕುಳದಿಂದ ಬೇಸತ್ತು ಪ್ರಶಸ್ತಿಯಿಂದ ದೂರವಿದ್ದರು. ಇಲ್ಲಿನ ಪರಿಸ್ಥಿತಿ ಕುರಿತು ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಚಿವ ಕೃಷ್ಣ ಭೈರೇಗೌಡ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಯಾರೊಬ್ಬರ ಹೆಸರನ್ನೂ ಪ್ರಸ್ತಾಪಿಸದೆ ತಮಗೆ ಅಗುತ್ತಿರುವ ಕಿರುಕುಳ ಹಾಗು ಮಾನಸಿಕ ಹಿಂಸೆ ...

Read More »

ಹಿರಿಯ ನಾಗರಿಕರು, ಗರ್ಭಿಣಿಯರಿಗೆ 5000 ಮಾಸಾಶನ: ಸಿಎಂ ಭರವಸೆ

ಬೆಂಗಳೂರು, ಅಕ್ಟೋಬರ್ 01: ಹಿರಿಯ ನಾಗರೀಕರು ಹಾಗೂ ಗರ್ಭಿಣಿಯರಿಗೆ ಸರ್ಕಾರದ ವತಿಯಿಂದ ತಿಂಗಳಿಗೆ 5000 ಮಾಸಾಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರೀಕರ ದಿನ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರೀಕರಿಗೆ 5000 ನೀಡುವುದು ನನ್ನ ಕನಸಾಗಿತ್ತು. ಆದರೆ ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ ಎಂದು ಅವರು ಹೇಳಿದರು. ನಾವು ಮೈತ್ರಿ ಸರ್ಕಾರದಲ್ಲಿದ್ದೇವೆ, ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ, ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಂತ-ಹಂತವಾಗಿ ಕಾರ್ಯ ಮಾಡಬೇಕು ಎಂದು ಕುಮಾರಸ್ವಾಮಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments