ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...
Read More »ಶಿವಮೊಗ್ಗ
ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು
ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ
ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ...
Read More »DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ.
Cnewstv | 08.04.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲ ಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾರವರ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನಗರ ಶಾಖೆಯಲ್ಲಿ 2014ರ ಜೂನ್ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ
ಶಿವಮೊಗ್ಗ : ತಾಲೂಕಿನ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಗರದಿಂದ ಬಸ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದ ಪ್ರಯಾಣಕರಿಗೆ ಕೆಎಸ್ಆರ್ಟಿಸಿ ಇಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗವು ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಹಾಗೂ ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, ...
Read More »ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನ ನಿಷೇಧಿಸಿ, ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಲಾಗಿದೆ. ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ...
Read More »ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಮೂರು ದಿನಗಳಲ್ಲಿ ಅವುಗಳನ್ನು ಖಾಲಿ ಮಾಡುವಂತೆ ಹಂದಿ ಮಾಲೀಕರಿಗೆ ಮಹಾನಗರ ಪಾಲಿಕೆ ಎಚ್ಚರಿಕೆಯ ಕರೆ ನೀಡಿದೆ. ಶಿವಮೊಗ್ಗ ನಗರದಲ್ಲಿ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿದ್ದಾರೆ. ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ...
Read More »ನಾಳೆ (ಏ.05) ವಿದ್ಯುತ್ ವ್ಯತ್ಯಯ.
Cnewstv | 04.04.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ (ಏ.05) ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೆ ಕಾಮಗಾರಿ ನಡೆಯುತ್ತಿರುವುದರಿಂದ 11 ಕೆವಿ. ವಿದ್ಯುತ್ ಮಾರ್ಗ ಸ್ಥಳಾಂತರಿಸುತ್ತಿದ್ದು, ಏ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ...
Read More »ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ
ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...
Read More »