Breaking News

ಶಿವಮೊಗ್ಗ

 ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ, ನಿರಾಕರಿಸುವ, ದುಬಾರಿ ಶುಲ್ಕ ವಸೂಲಿ ಮಾಡುವ ಖಾಸಗಿ ಅಸ್ಪತ್ರೆ ವಿರುದ್ಧ ದೂರು ನೀಡಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ. ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ...

Read More »

ಕರೋನಾ ಲಾಕ್ಡೌನ್ ನಿರ್ಗತಿಕರಿಗೆ – ಯುವ ಕಾಂಗ್ರೆಸ್ ನಿಂದ ಆಹಾರ ವಿತರಣೆ

  ಶಿವಮೊಗ್ಗ ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕರೋನಾ ಲಾಕ್ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್ ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರು ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ನ ...

Read More »

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ. ಸೋಂಕಿತರನ್ನು ಯಾವ ಆಸ್ಪತ್ರೆಗೆ ಸೇರಿಸಬೇಕು, ವೆಂಟಿಲೇಟರ್, ವ್ಯಾಕ್ಸಿನೇಷನ್, ಆಂಬುಲೆನ್ಸ್ ಸೇರಿದಂತೆ ಪ್ರತಿಯೊಂದು ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಟಿ.ಡಿ ಮೇಘರಾಜ್ ಅವರು ತಿಳಿಸಿದ್ದಾರೆ. 1-ಆಸ್ಪತ್ರೆ ಮಾಹಿತಿಗಾಗಿ ಮತ್ತು ...

Read More »

ದಿನಸಿ ಸೇರಿ ಅಗತ್ಯ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಸಲು ಅನುಮತಿ ...

Read More »

ಕೊರೊನಾ ಅತಂಕ : ರಾಜ್ಯಾದ್ಯಂತ ಬ್ಯಾಂಕಿಂಗ್ ವೇಳೆ ಬದಲು – ಎಸ್.ಎಲ್.ಬಿ.ಸಿ

  ಕೊರೋನಾ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ ಇದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಯಮಗಳನ್ನು ಪಾಲಿಸುವುದು ಹಾಗೂ ಬ್ಯಾಂಕ್ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಬ್ಯಾಂಕಿಂಗ್ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ ಎಂದು ಸ್ಟೇಟ್ ಲೆವೆಲ್ ಬ್ಯಾಂಕ್ ಕಮಿಟಿ ಕನ್ವೈನರ್(SLBC) ತಿಳಿಸಿದ್ದಾರೆ. ಏಪ್ರಿಲ್ 22 ರಿಂದ ಮೇ 31 ರವರೆಗೆ ರಾಜ್ಯದ ಎಲ್ಲಾ ಬ್ಯಾಂಕುಗಳು ಇನ್ನು ಮುಂದೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಸೇವೆ ನೀಡಲಿದೆ ಹಾಗೂ ಬ್ಯಾಂಕಿನಲ್ಲಿ ಶೇಕಡಾ 50 ರಷ್ಟು ಮಾತ್ರ ಸಿಬ್ಬಂದಿ ಹಾಜರಾಗುವಂತೆ ಸ್ಟೇಟ್ ಲೆವೆಲ್ ...

Read More »

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ : ಜನರಲ್ಲಿ ಜಾಗೃತಿ ಮೂಡಿಸಿದ ಮೇಯರ್ ಸುನಿತಾ ಅಣ್ಣಪ್ಪ.

  ಶಿವಮೊಗ್ಗ : ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದು ಮಹಾನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಉಪಮೇಯರ್ ಶಂಕರ್ ಗನ್ನಿಯವರು ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಶಿವಪ್ಪ ನಾಯಕ ವೃತ್ತ, ಗಾಂಧಿಬಜಾರ್ ಸೇರಿದಂತೆ ಪ್ರಮುಖ ವ್ಯಾಪಾರ ಕೇಂದ್ರಗಳಲ್ಲಿ ಸಂಚರಿಸಿ ಮಾಸ್ಕ್ ಹಾಕುವುದು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ವ್ಯಾಪಾರಸ್ಥರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ...

Read More »

ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ, ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ. ಹೊಸ ರೂಲ್ಸ್ ನ ಕಂಪ್ಲೀಟ್ ಡೀಟೇಲ್ಸ್

  ಬೆಂಗಳೂರು : ಎ.20: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಿಂದ ಮೇ4ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಪ್ರತಿದಿನ ರಾತ್ರಿ 9 ರಿಂದ ಮುಂಜಾನೆ 6 ಗಂಟೆಯವರೆಗೂ ಕರ್ಫ್ಯೂ ರೆಸ್ಟೋರೆಂಟ್’ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ, ಸಪ್ಲೈ ಮಾಡುವಂತಿಲ್ಲ ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಲ್ಲಾ ಶಾಲೆ ಕಾಲೇಜುಗಳು, ಸ್ವಿಮ್ಮಿಂಗ್ ಪೂಲ್, ಜಿಮ್ ,ಪಾಕ್ ಕ್ರೀಡಾಂಗಣ, ಸಿನಿಮಾ ...

Read More »

ನಿರಂತರ ಜ್ಯೋತಿ ಯೋಜನೆ: ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

  ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿನ ಲೋಪಗಳ ಕುರಿತು ಪರಿಶೀಲನಾ ಸಭೆ ನಡೆಸಿದರು. ಪೀಢರ್ ಬೇರ್ಪಡಿಸುವಿಕೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 41 ಮಾರ್ಗಗಳ ಕಾಮಗಾರಿಗೆ 105 ಕೋಟಿ ರೂ. ಬಿಲ್ಲು ಪಾಸು ಮಾಡಲಾಗಿದೆ. ಪ್ರಸ್ತುತ ಎಲ್ಲಾ ಮಾರ್ಗಗಳ ಕಾಮಗಾರಿ ಅನುಷ್ಟಾನದ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೆ ...

Read More »

ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದವರ ವಿರುದ್ಧ 1166 ಪ್ರಕರಣಗಳು ದಾಖಲು.

ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್ 19ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 1166 ಪ್ರಕರಣಗಳು ದಾಖಲಾಗಿದೆ. 1,60,450 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..  

Read More »

ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ : ಸಾರ್ವಜನಿಕರಿಂದ ಮೆಚ್ಚುಗೆ

  ಶಿವಮೊಗ್ಗ : ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಎಚ್ ಟಿ ಶೇಖರ್ ಡಿವೈಎಸ್‍ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದನ್ನು ಗಮನಿಸಿದರು. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ಹೇಳಿ, ...

Read More »