ಶಿವಮೊಗ್ಗ : ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್ ಮಾರ್ಚ್ 27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‍ನಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅವರು ತಿಳಿಸಿದರು. ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ವಿಭಜನಾ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳನ್ನು ಗುರುತಿಸಿ, ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ...
Read More »ಶಿವಮೊಗ್ಗ
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ ಸಿಎಂ
ವಿಜಯಪುರ ಜಿಲ್ಲೆಯಲ್ಲಿನಲ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಿಂದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನನಿಲ್ದಾಣವನ್ನು ಎರಡು ಹಂತದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು. ವಿಜಯಪುರ ವಿಮಾನ ನಿಲ್ದಾಣದಲ್ಲಿ ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ...
Read More »ತಾಳಗುಪ್ಪದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಸಾವು.
ಶಿವಮೊಗ್ಗ: ಸೈಕಲ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಸೈಕಲ್ ಸವಾರ ಅಣ್ಣಪ್ಪ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ- 206 ರಲ್ಲಿ ತಾಳಗುಪ್ಪದ ಬಳಿ ನಡೆದ ಘಟನೆ ನಡೆದಿದ್ದು, ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.
ಶಿವಮೊಗ್ಗ, 72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ. ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
Read More »ಶಿವಮೊಗ್ಗದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್.
ಶಿವಮೊಗ್ಗ: ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ...
Read More »ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.
ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...
Read More »ಶಿವಮೊಗ್ಗ ಸಮೀಪ ಬಸ್ ಬೈಕ್ ಡಿಕ್ಕಿ, ಇಬ್ಬರ ದೇಹ ಛಿದ್ರ ಛಿದ್ರ.
ಶಿವಮೊಗ್ಗ : ಇಂದು ಮಧ್ಯಾಹ್ನ 1.45 ರ ಹೊತ್ತಿಗೆ ಶಿವಮೊಗ್ಗ- ಹೊನ್ನಾಳಿ ಮಾರ್ಗದ ಮೇಲಿನ ಹನಸವಾಡಿ ಬಳಿ ಸಂಭವಿಸಿದ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು ಕಂಡ ಘಟನೆ ವರದಿಯಾಗಿದೆ. ಶಿವಮೊಗ್ಗ ಮಾರ್ಗದಿಂದ ದಾವಣಗೆರೆ ಮೂಲಕ ಬೆಂಗಳೂರಿಗೆ ಹೋಗುತ್ತಿದ್ದ ಕೆ.ಎ. 17 ಎಫ್ 1931 ಕ್ರಮ ಸಂಖ್ಯೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ಬಂದ ಹೊನ್ನಾಳಿ ತಾಲೂಕು ಲಿಂಗಾಪುರ ಸಮೀಪದ ಬಾಗೋಡಿ ಗ್ರಾಮದ ಇಬ್ಬರು ಸಾವು ಕಂಡಿದ್ದಾರೆ. ಬೈಕ್ ...
Read More »ಮನೆ ಹಿಂದೆಇಟ್ಟಿದ್ದ ಅಡಕೆಯನ್ನೇ ಕದ್ದ ಖತರ್ನಾಕ್ ಕಳ್ಳರು
ಶಿವಮೊಗ್ಗ: ಮನೆಯ ಹಿಂದೆ ಇಟ್ಟಿದ ಅಡಕೆಯನ್ನು ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ. ದುಮ್ಮಳ್ಳಿ ಗ್ರಾಮದ ಚಂದ್ರು ಎಂಬುವರ ಮನೆಯ ಹಿಂದೆ ಸಂಗ್ರಹಿಸಿಟ್ಟಿದ್ದ ಒಂದೂವರೆ ಕ್ವಿಂಟಾಲ್ ನಷ್ಟು ಅಡಕೆಯನ್ನು ಸೋಮವಾರ ರಾತ್ರಿ ಕಳ್ಳರು ಕದ್ದೊಯ್ದಿದ್ದಾರೆ. ಅಡಕೆ ಬೆಲೆ ಹೆಚ್ಚಾಗುತ್ತಿದ್ದಂತೆ ಮಲೆನಾಡಿನಲ್ಲಿ ಅಡಕೆ ಕಳವು ಪ್ರಕರಣಗಳು ಹೆಚ್ಚಲಾರಂಭಿಸಿವೆ.
Read More »ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ
ಶಿವಮೊಗ್ಗ : ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು. ಸಾರ್ವಜನಿಕರ ದೂರಿಗೆ ತಕ್ಷಣ ...
Read More »ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...
Read More »
C News TV Kannada News Online in cnewstv