ಶಿವಮೊಗ್ಗ : ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್ ಸ್ಪೋಟದ ಪರಿಣಾಮ ಜಿಲ್ಲೆಯಲ್ಲಿ ಭಾರೀ ಶಬ್ದ ಹಾಗೂ ಕಂಪನ ಸಂಭವಿಸಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ತಾಲೂಕಿನ ಹುಣಸೋಡು ಎಂಬಲ್ಲಿ ರೈಲ್ವೆ ಕ್ವಾರಿಯಲ್ಲಿ ಭಾರೀ ಸ್ಪೋಟ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಘಟನೆ ಸಂಭವಿಸಿದ್ದು, ದಟ್ಟ ವಾಸನೆ ಆವರಿಸಿದೆ. ಘಟನೆಯಲ್ಲಿ ಬಿಹಾರ ಮೂಲದ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸ್ಪೋಟದ ತೀವ್ರತೆಗೆ ಲಾರಿ ಸಂಪೂರ್ಣ ಛಿದ್ರಛಿದ್ರವಾಗಿದೆ. ಸ್ಧಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ದೌಡಾಯಿಸಿದ್ದಾರೆ.
Read More »ಶಿವಮೊಗ್ಗ
ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...
Read More »ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು.
ಶಿವಮೊಗ್ಗ:ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಅಂಜಲಿ(19) ಮೃತ ದುರ್ದೈವಿ. ದನಗಳಿಗೆ ನೀರು ಕುಡಿಸಲು ಎಂದಿನಂತೆಯೇ ಬೆಳಿಗ್ಗೆ ಬಾವಿಗೆ ಹೋಗಿದ್ದ ಅಂಜಲಿ, ನೀರು ಸೇದುವಾಗ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ನೀರು ತರಲು ಹೋಗಿದ್ದ ಅಂಜಲಿ ಬಾರದಿದ್ದನ್ನು ಗಮನಿಸಿ, ಮನೆಯವರು ಬಾವಿಯ ಬಳಿಗೆ ಬಂದು ಪರಿಶೀಲಿಸಿದಾಗ ಅಂಜಲಿ ಬಾವಿಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತ್ಯಾಗರ್ತಿ ಗ್ರಾಮಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »ನಿರಂತರ ಜ್ಯೋತಿ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಸೂಚನೆ : ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್‍ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ...
Read More »ಹಕ್ಕಿಜ್ವರ ಮುನ್ನಚ್ಚರಿಕೆ ಕ್ರಮ ಜನರು ಆತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿಜ್ವರ ಕುರಿತಾಗಿ ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ ...
Read More »ಕರೋನಾವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಜೀ ವಿಶ್ವದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ – ನಳಿನ್ ಕುಮಾರ್ ಕಟೀಲ್
ಶಿವಮೊಗ್ಗ : ಕರೋನಾ ವೈರಸ್ ಹತೋಟಿ ತರುವಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಉತ್ತಮ ಸಾಧನೆಯನ್ನು ಮಾಡಿದೆ,ಈ ಹಿನ್ನೆಲೆಯಲ್ಲಿ ಅಮೆರಿಕ ಸಂಶೋಧನ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯಿಂದ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಮಟ್ಟದ ನಾಯಕರಾಗಿ ಹೊರ ಹೊಮ್ಮಿರುವುದು ಸಾಕ್ಷಿಯಾಗಿದೆ,ಇದೇ ರೀತಿ ಕರ್ನಾಟಕದಲ್ಲಿ ಶ್ರೀಯುತ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರವು ಸಹ ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿದೆ ಎಂದು ಹೇಳಿದರು’ ಇವರು ಶಿವಮೊಗ್ಗ ನಗರದ ಹರ್ಷ ...
Read More »ಸರ್ಕಾರದ ಮಾರ್ಗಸೂಚಿ ಪ್ರಕಾರ ಹೊಸ ವರ್ಷಾಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಕರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಹೊಸ ವರ್ಷವನ್ನು ಆಚರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಇತ್ಯಾದಿ ಪ್ರದೇಶಗಳಲ್ಲಿ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳು, ವಿಶೇಷ ಪಾರ್ಟಿ ಆಯೋಜಿಸುವುದನ್ನು ನಿಷೇಧಿಸಲಾಗಿದ್ದು, ಪ್ರತಿನಿತ್ಯದ ವ್ಯವಹಾರ ನಡೆಸಲು ಯಾವುದೇ ನಿರ್ಬಂಧವಿರುವುದಿಲ್ಲ. ಈ ನಿರ್ಬಂಧ ಜನವರಿ 2ರವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ...
Read More »ಶಿವಮೊಗ್ಗದ ನಾಲ್ವರಲ್ಲಿ ಕಾಣಿಸಿಕೊಂಡ ರೂಪಾಂತರಿ ಕರೋನಾ.
ಶಿವಮೊಗ್ಗ : ಕಳೆದ ವಾರ ಬ್ರಿಟನ್ ನಿಂದ 23 ಜನ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರನ್ನೂ ಕೋವಿಡ್ ತಪಾಸಣೆಗೊಳಪಡಿಸಲಾಗಿತ್ತು. ಬಳಿಕ ಇವರಲ್ಲಿ ರೂಪಾಂತರಿ ಕರೋನಾ ಸೋಂಕು ಇದೆಯೇ ಇಲ್ಲವೋ ಎನ್ನುವುದನ್ನು ಖಚಿತ ಪಡಿಸಲು ಎಲ್ಲರ ಗಂಟಲ ದ್ರವ ಮಾದರಿ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.ಇಂದು ಬಂದ ವರದಿಯಲ್ಲಿ ಶಿವಮೊಗ್ಗ ಮೂಲದ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರಿ ಕರೋನಾ ಸೋಂಕು ಪತ್ತೆಯಾಗಿದೆ. ನಾಲ್ವರಿಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಶಿವಮೊಗ್ಗದಲ್ಲಿ ಇವತ್ತು ನಡೆಯಬೇಕಿದ್ದ ಸಚಿವರ ಕಾರ್ಯಕ್ರಮ ಸದ್ದು.
ಶಿವಮೊಗ್ಗ : ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಚಿವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆಗೆ ನಡೆಸಬೇಕಿತ್ತು. ಬೆಳಗ್ಗೆ 6 ಗಂಟೆಯಿಂದಲೇ ಪರಿಶೀಲನೆ ಆರಂಭವಾಗಬೇಕಿತ್ತು. ಆದರೆ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ತಿಳಿದು, ಬೆಳಗಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
Read More »ಭಗವದ್ಗೀತಾ ಪಾರಾಯಣ ಮತ್ತು ಕಂಠಪಾಠ ಮಹಾಯಜ್ಞ ಕಾರ್ಯಕ್ರಮ
ಶಿವಮೊಗ್ಗ : ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಭಗವದ್ಗೀತಾ ಪಾರಾಯಣ/ಕಂಠಪಾಠ ಮಹಾಯಜ್ಞ ಕಾರ್ಯಕ್ರಮವನ್ನು ಮನೆ ಮನಗಳಲ್ಲಿ ಮೊಳಗಿಸುವ ಕಾರ್ಯವನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಸಂಸ್ಕೃತ ಭಾರತಿ, ವಾಸವಿ ವಿದ್ಯಾಲಯ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೊಂದು ಸಮಾಜಮುಖೀ ಕಾರ್ಯಕ್ರಮವಾಗಿದ್ದು ಇದರಲ್ಲಿ ಸಮಾಜದ ಎಲ್ಲಾ ಬಂಧು ಬಾಂಧವರು ಮುಕ್ತವಾಗಿ ಭಗವದ್ಗೀತೆಯನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. *ಭಗವದ್ಗೀತಾ ಪಾರಾಯಣ/ಕಂಠಪಾಠ ಯಾಕೆ?* ಭಗವದ್ಗೀತೆಯು ಮಾನವ ಸಮಾಜದ ಏಳಿಗೆಯನ್ನು ಬಯಸುತ್ತದೆ. ಜಾತಿ-ಜಾತಿಗಳ ನಡುವಿನ ಮನಸ್ತಾಪ, ...
Read More »
C News TV Kannada News Online in cnewstv