Breaking News

ಶಿವಮೊಗ್ಗ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಮಾಜಿ ಶಾಸಕ ವಿಎಸ್ ವಿ ದತ್ತ ಆಕ್ರೋಶ

  ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿವೆ. ಹಂಪಿ ಕನ್ನಡ ಮಾಡುತ್ತಿದೆ. ಆದರೆ ಇದೇ ವೇಳೆಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಮಾತ್ರ ಹಣ ಬಿಡುಗಡೆ ಮಾಡುತ್ತಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇವಲ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರಲ್ಲಿ ಮಾತ್ರ ಸರ್ಕಾರ ಕನ್ನಡ ವಿರೋಧಿ ನೀತಿ ತಾಳುತ್ತಿಲ್ಲ ಇದರ ಜೊತೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಯುತ್ತಿರುವ ಯುವಜನೋತ್ಸವ ಆಯ್ಕೆಯಲ್ಲೂ ಕನ್ನಡ ವಿರೋಧಿ ನಿಲುವು ತಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ...

Read More »

ಬ್ರಿಟನ್ ನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ 23 ಜನರು

ಬ್ರಿಟನ್ ನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ 23 ಜನರ ಶಿವಮೊಗ್ಗ : ಬ್ರಿಟನ್ ನಿಂದ ಶಿವಮೊಗ್ಗಕ್ಕೆ ಇದುವರೆಗೆ 23 ಜನರು ಆಗಮಿಸಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬ್ರಿಟನ್ ನಿಂದ ಬಂದ 23 ಜನರ ಗಂಟಲ ದ್ರವ ಮಾದರಿ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸಲಾಗಿದೆ. ನಾಳೆ ಸಂಜೆಯ ಒಳಗಾಗಿ ಇವರ ವರದಿ ಬರುತ್ತದೆ. ಬಳಿಕ ಬ್ರಿಟನ್ ನಿಂದ ಬಂದವರಿಗೆ ಕರೋನಾ ಇದೆಯೇ ಇಲ್ಲವೇ ಎಂಬುದು ತಿಳಿಯುತ್ತದೆ ಎಂದು ಹೇಳಿದರು. ...

Read More »

ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.

  ಶಿವಮೊಗ್ಗ : ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಭದ್ರಾವತಿ ಮೂಲದ ಲಲಿತಾ ಕಾಲೇಜಿನ ಹಾಸ್ಟೆಲ್ ನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಲಲಿತಾ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಂಸಗ ಮಾಡುತ್ತಿತ್ತು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Read More »

ಶಿವಮೊಗ್ಗದಲ್ಲಿ ವಿವಿಧ ಆಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿರುವ ಸಚಿವ ಭೈರತಿ ಬಸವರಾಜ್

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ನಡೆಸಿರುವ ವಿವಿಧ ಆಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಉದ್ಘಾಟಿಸಲಿದ್ದಾರೆ. ಜೊತೆಗೆ ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಗರಾಭಿವೃದ್ಧಿ ಸಚಿವರು ಶಿವಮೊಗ್ಗದಲ್ಲಿ 105 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಮಕ್ಕಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಮಕ್ಕಳನ್ನು ದೈಹಿಕವಾಗಿ ಸದೃಢಗೊಳಿಸುವ ...

Read More »

ಮತಪೆಟ್ಟಿಗೆ ಇಡುವ ಸ್ಟ್ರಾಂಗ್ ರೂಂಗಳಿಗೆ ಎಸ್.ಪಿ ಬೇಟಿ ಪರಿಶೀಲನೆ

ಶಿವಮೊಗ್ಗ; ಇಂದು ಮೊದಲನೇ ಹಂತದ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ-2020 ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾನ ಮುಗಿದ ನಂತರ, ಮತಪೆಟ್ಟಿಗೆ ಸಂಗ್ರಹಿಸಿಡುವ ಕೊಠಡಿಯ ಕೇಂದ್ರಗಳಿಗೆ ಕೆ. ಎಂ ಶಾಂತರಾಜು, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗದ ಹೆಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಮತ್ತು ಭದ್ರಾವತಿಯ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂ ಗಳಿಗೆ ಭೇಟಿ ನೀಡಿ, ಅಲ್ಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಎ.ಸಿ ಶಿವಮೊಗ್ಗ, ತಹಸಿಲ್ದಾರ್ ಶಿವಮೊಗ್ಗ, ತಹಸಿಲ್ದಾರ್ ಭದ್ರಾವತಿ, ...

Read More »

ಸುಗಮವಾಗಿ ಚುನಾವಣೆ ನಡೆಸಲು ಸರ್ವ ಸಿದ್ಧತೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ :  ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶಿವಮೊಗ್ಗ ನಗರದ ಎನ್‍. ಇ.ಎಸ್‍ ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿಗಳಲ್ಲಿ ಹಾಗೂ ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ. ಮತದಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ ...

Read More »

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಮೂವರು ಖೈದಿಗಳಿಗೆ ಇರಿದ ಸಹಖೈದಿ

  ಶಿವಮೊಗ್ಗ : ಚಮಚವನ್ನು ಚಾಕು ರೀತಿ ಬಳಕೆ ಮಾಡಿ ಸಜಾಬಂಧಿಯೊಬ್ಬ ಮೂವರು ಸಜಾಬಂಧಿಗಳಿಗೆ ಇರಿದಿರುವ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಇಂದು ಸಂಜೆ ನಡೆದಿದೆ. ನ್ಯಾಯಾಧೀಶರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲಿನಲ್ಲಿದ್ದ ಉಡುಪಿಯ ಪ್ರಶಾಂತ್ ಎಂಬ ಖೈದಿ ತನ್ನೊಂದಿಗಿದ್ದ ಮೂವರು ಖೈದಿಗಳನ್ನು ಇರಿದ ಆರೋಪಿ. ಇಂದು ಪ್ರಶಾಂತ್ ಓರ್ವ ಖೈದಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಈ ವೇಳೆ ಜೈಲಿನಲ್ಲಿ ಸಜಾಬಂಧಿಗಳಾಗಿರುವ ಮಾಲತೇಶ, ದೇವೇಂದ್ರ, ಬೆನಕಶೆಟ್ಟಿ ಎಂಬುವರು ಜಗಳ ಬಿಡಿಸಲು ಹೋಗಿದ್ದಾರೆ. ಆಗ ರೊಚ್ಚಿಗೆದ್ದ ಪ್ರಶಾಂತ್ ಈ ಮೂವರ ಮೇಲೆ ಚಮಚವನ್ನೇ ಚಾಕುವಿನಂತೆ ಬಳಸಿ ...

Read More »

ಸುಪ್ರೀಂ ನಿಂದ ಕೇಂದ್ರ ಸರ್ಕಾರಕ್ಕೆ ಕಪಾಳಮೋಕ್ಷ.

  ಶಿವಮೊಗ್ಗ : ರೈತಸಂಘಟನೆಗಳ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದು ರೈತಸಂಘದ ರಾಜ್ಯ ಕಾರ್ಯದ್ಯಕ್ಷ  ಹೆಚ್.ಆರ್. ಬಸವರಾಜಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ರೈತಸಂಘಟನೆಗಳು ಕಳೆದ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದು, ಅವರ ಬೆಂಬಲಕ್ಕೆ ಸುಪ್ರೀಂ ಕೋರ್ಟ್ ನಿಂತಿರುವುದು ರೈತರಿಗೆ ಸಿಕ್ಕ ಜಯ. ಕೇಂದ್ರ ಸರ್ಕಾರ ಈಗಾದರೂ ಜನರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಅರಿತು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಜೊತೆಗೆ ...

Read More »

ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ.

ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ಶಿವಮೊಗ್ಗ : ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಗಳಿಗೆ  ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಯನ್ನುದ್ದೇಶೀಸಿ ಮಾತನಾಡಿದ ಅವರು, ಸದನದಲ್ಲಿ ನಡೆದ ಗಲಾಟೆಗೆ ಬಿಜೆಪಿ ಕಾರಣವಾಗಿದ್ದರೂ ಸಹ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ಸಮರ್ಥಿಸಿಕೊಳ್ಳುತ್ತಿ ರುವುದು ಖಂಡನೀಯ. ಮೊದಲನೇ ಹೆಂಡತಿ ಇದ್ದಾಗ ಎರಡನೇ ಮದುವೆ ಆಗೋದು ತಪ್ಪು. ಈ ಪರಿಷತ್ ಘಟನೆ ಕೂಡ ಆಗಿರುವುದು ಅದೇ ರೀತಿಯಲ್ಲೇ. ಪರಿಷತ್ ...

Read More »

ಗ್ರಾಮ ಪಂಚಾಯ್ತಿ ಚುನಾವಣೆ-2020 ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ. ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯ ವಶ

ಗ್ರಾಮ ಪಂಚಾಯ್ತಿ ಚುನಾವಣೆ-2020 ನಿಮಿತ್ತ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಟಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಖಚಿತ ಮಾಹಿತಿಯನ್ನು ಸಂಗ್ರಹಿಸಿ ಕ್ಯಾಪ್ಟನ್ ಅಜಿತ್ ಕುಮಾರ್, ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ ಆರೋಪಿಯು ಕರ್ನಾಟಕ ರಾಜ್ಯದಲ್ಲಿ ತೆರಿಗೆಯನ್ನು ವಂಚಿಸಿ ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯವನ್ನು ಗ್ರಾಮ ಪಂಚಾಯ್ತಿ ಚುನಾವಣೆಗೆ ಬಳಸುವ ಉದ್ದೇಶದಿಂದ ಕೆಎ-15-8249 ಆಟೋರಿಕ್ಷಾದಲ್ಲಿ ಗೋವಾ ರಾಜ್ಯದಲ್ಲಿ ತಯಾರಾದ ಮೆಕ್ಡೊನಾಲ್ಡ್ ವಿಸ್ಕಿ, ಇಂಪೀರಿಯಲ್ ವಿಸ್ಕಿ, ಗೋವಾ ಫೆನ್ನಿ ಸೇರಿದಂತೆ ಅಕ್ರಮವಾಗಿ 71 ಲೀಟರ್ ಗೋವಾ ಮದ್ಯ ...

Read More »