Breaking News

ಶಿವಮೊಗ್ಗ

ಬಸವನಗುಡಿ ರಸ್ತೆಯಲ್ಲಿ ರೌಡಿಶೀಟರ್ ಕೊಲೆ

  ಶಿವಮೊಗ್ಗ : ಹಾಡುಹಗಲೇ ರೌಡಿಶೀಟರ್ ಮಂಜುನಾಥ್ (30) ನನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಸವನಗುಡಿ 5ನೇ ತಿರುವಿನಲ್ಲಿ ಇಂದು ಮಧ್ಯಾಹ್ನ ಮಂಜುನಾಥ್ ನಡೆದುಕೊಂಡು ಹೋಗುತ್ತಿದ್ದಾಗ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಮಂಜುನಾಥ್ ನನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ ಪಿ ಶಾಂತರಾಜು ಭೇಟಿ ನೀಡಿದರು.

Read More »

ಶರಾವತಿ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಎಸ್.ಯಡಿಯೂರಪ್ಪ

  ಶಿವಮೊಗ್ಗ : ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ...

Read More »

ದೀಪಾವಳಿಗಿಲ್ಲ ಪಟಾಕಿ ರಂಗು

ಶಿವಮೊಗ್ಗ: ದೀಪಾವಳಿ ಹಬ್ಬ ಬೆಳಕಿನ ಹಬ್ಬ. ದೀಪಾವಳಿ ಬಂದರೆ ಸಾಕು ಪಟಾಕಿಗಳ ಸದ್ದು ಎಲ್ಲೆಡೆ ಮಾರ್ದನಿಸುತ್ತಿತ್ತು. ಪಟಾಕಿಗಳು ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಿದ್ದವು. ಆದರೆ ಈ ಬಾರಿ ಕಾಣಿಸಿಕೊಂಡಿರುವ ಮಹಾಮಾರಿ ಕರೋನಾ ದೀಪಾವಳಿ ಸಂಭ್ರಮಕ್ಕೂ ತಣ್ಣೀರೆರಚಿದೆ. ಕರೋನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪಟಾಕಿಯಿಂದ ಬರುವ ಹೊಗೆಯಿಂದಾಗಿ ಕರೋನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಟಾಕಿ ನಿಷೇಧದ ...

Read More »

ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

  ಶಿವಮೊಗ್ಗ : ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿ ಬಸಮ್ಮ ಕೋಂ ದಿ||ಯಲ್ಲಪ್ಪ ಎಂಬುವವರು ಅಕ್ಟೋಬರ್ 22 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಎರಡು ಜನ ಅಪರಿಚಿತರು ಆಸ್ಪತ್ರೆಯ ಮುಂಭಾಗ ನಕಲಿ ಬಂಗಾರದ ಸರವನ್ನು ತೋರಿಸಿ ಆ ನಕಲಿ ಬಂಗಾರದ ಸರವನ್ನು ಕೊಟ್ಟು ನಂತರ 3,500 ರೂ. ನಗದು ಹಾಗೂ ...

Read More »

ಕ್ರಿಕೆಟ್‌ ಬೆಟ್ಟಿಂಗ್‌: ಮೂವರ ಬಂಧನ

  ಶಿವಮೊಗ್ಗ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್‌ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ...

Read More »

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ಕರೆ ತರಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆ ತರಲು ವ್ಯವಸ್ಥಿತವಾದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 22ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಇವರ ಪೈಕಿ 9ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದ್ದು, ಇನ್ನುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 2ನೇ ತರಗತಿಯಿಂದ 10ನೇ ತರಗತಿವರೆಗೆ ...

Read More »

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನವೆಂಬರ್ 5ರಂದು ಹೆದ್ದಾರಿ ಬಂದ್

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು 70 ಸಾವಿರ ಪ್ರದೇಶಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ಆದರೆ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಖರೀದಿಸಬೇಕು. ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು MSP ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧವೆಂದು ಘೋಷಿಸಬೇಕು. ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವು ಸಹ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದು ವಾಪಸ್ ...

Read More »

ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಹಿಂದೆಂದೂ ಆಗದಷ್ಟು ಮತದಾನವಾಗಿದೆ : ಕೆಎಸ್ ಈಶ್ವರಪ್ಪ

  ಶಿವಮೊಗ್ಗ : ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರಗಳಲ್ಲಿ ಚುನಾವಣೆಯನ್ನು ಬಿಜೆಪಿ ಸಂಘಟನಾತ್ಮಕವಾಗಿ ಮಾಡಿದೆ. ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಸಹ ಹಿಂದೆಂದೂ ಆಗದಷ್ಟು ಮತದಾನವಾಗಿದೆ. ನಮ್ಮ ಸಂಘಟನೆಯ ಪ್ರಯತ್ನದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನವೆಂಬರ್ 5ರಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ. ಅಶೋಕ್ ಗಸ್ತಿ ಅವರ ಕೆಲಸವನ್ನು ಗಮನಿಸಿ ಅವರನ್ನು ರಾಜ್ಯಸಭೆಗೆ ...

Read More »

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ.

  ಶಿವಮೊಗ್ಗ : ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟಿಸಲಾಗಿದೆ. ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ 130 ಜನ ಸಾಧಕರು ಅರ್ಜಿ ಸಲ್ಲಿಸಿದರು ಆದರೆ ಈ ಪೈಕಿ 26 ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದ 65 ಜನ ಸಾಧಕರಿಗೆ ಮಾತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಸುರೇಶ್ ಗೌಡರು ಆದೇಶವನ್ನು ಹೊರಡಿಸಿದ್ದಾರೆ. ಈ ಬಾರಿ ರಾಜ್ಯ ಸರ್ಕಾರ ಪ್ರಕಟಿಸಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಶಿವಮೊಗ್ಗದ ಮೂವರು ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ ...

Read More »

ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿ ಖೈದಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.

  ಶಿವಮೊಗ್ಗ; ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿ ಖೈದಿ ಮಂಜುನಾಥ್ 33 ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ನಿನ್ನೆ ಸಂಜೆ ಜೈಲಿನ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್ ನಿಂದ ಮಂಜು ನೇಣು ಬಿಗಿದುಕೊಂಡಿದ್ದಾನೆ.ತಕ್ಷಣ ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾನೆ ಎನ್ನಲಾಗಿದೆ. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚನಾಮೆ ಶವಪರೀಕ್ಷೆ..ವಿಡಿಯೋ ಚಿತ್ರೀಕರಣ ಮಾಡಲಾಗಿದೆ.ಮೃತ ಕೈದಿ ಮಂಜು ಸಾಗರ ಎಸ್ ಎಸ್ ಕಾಲೊನಿ ನಿವಾಸಿಎಂದು ತಿಳಿದು ಬಂದಿದೆ.

Read More »