ಶಿವಮೊಗ್ಗ: ಇಂದು ಸಂಜೆ ವೇಳೆ ಅರ್ಧ ಗಂಟೆ ಸುರಿದ ಮಳೆ ಶಿವಮೊಗ್ಗ ನಗರದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗುತ್ತಿದೆ. ಆದರೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ಶಿವಮೊಗ್ಗ ಪಾರ್ಕ್ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಮೇಲೆ ಬರೋಬ್ಬರಿ ಎರಡು ಅಡಿಗೂ ಹೆಚ್ಚು ನೀರು ನಿಂತಿತ್ತು. ಅರ್ಧ ಗಂಟೆ ಸುರಿದ ಧಾರಾಕಾರ ಮಳೆ ...
Read More »ಶಿವಮೊಗ್ಗ
ಮಾರ್ಗಸೂಚಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ರಾಜೇಶ ಸುರಗಿಹಳ್ಳಿ
ಶಿವಮೊಗ್ಗ : ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸರ್ಕಾರದ ಆರೋಗ್ಯ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ಇನ್ನು ಎರಡು ಮೂರು ದಿನಗಳು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ನೀರಿಕ್ಷೆ ಇದೆ. ಮೋಡ, ಮಳೆ, ಶೀತ ವಾತಾವರಣವು ಕೋವಿಡ್ ವೈರಸ್ ಹರಡುವಿಕೆಗೆ ಪೂರಕ ವಾತಾವರಣವಾಗಿರುತ್ತದೆ. ಅಷ್ಟೇ ಅಲ್ಲದೆ ವೈರಸ್ ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆ, ವಾಂತಿ, ಬೇದಿ ಇತರೆ ಕಾಯಿಲೆಗಳಂತಹ ಅನೇಕ ...
Read More »ಈದ್ ಮಿಲಾದ್ ಹಬ್ಬವನ್ನು ಕೋವಿಡ್-19ರ ಶಿಷ್ಟಾಚಾರದಂತೆ ಆಚರಿಸಲು ಮನವಿ
ಶಿವಮೊಗ್ಗ : ಕೋವಿಡ್-19 ಹಿನ್ನೆಲೆಯಲ್ಲಿ ಅ.30ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಮಾದರ್ ಪಟೇಲ್ ತಿಳಿಸಿದ್ದಾರೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕøತಿಕ ಕಾರ್ಯಕ್ರಮ/ಸಭೆ ಸಮಾರಂಭಗಳನ್ನು, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜೆ ಬಳಕೆಯನ್ನು, ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವುದು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿ/ದರ್ಗಾಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಉಪಯೋಗಿಸುವುದು, ...
Read More »ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ : ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ : ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಈಗಾಗಲೇ 30ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದ ಅವರು ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ ದೇಶದ ವಿಶಿಷ್ಟ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು. ಇಲ್ಲಿಗೆ ಭೇಟಿ ನೀಡುವ ...
Read More »ಪ್ರತಿಯೊಬ್ಬರಿಗೂ ನಿವೇಶನ, ಸೂರು ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ...
Read More »ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು ...
Read More »5 ಗಂಟೆಗಳ ಸತತ ಕಾರ್ಯಾಚರಣೆ.ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ.
ಶಿವಮೊಗ್ಗ : ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದು ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡ ಅಮೋಘ (29) ಎಂಬ ಯುವಕನನ್ನು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ 5 ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸನ ಮೂಲದ ಅಮೋಘ ತಮಿಳುನಾಡು ಮೂಲದ ಸಂಜೀವ್ ಕಪೂರ್ ಮೂಲದ ಮಧು ಎಂಬುವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇನಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪಿನಲ್ಲಿ ಕೊಡಚಾದ್ರಿ ಗಿರಿ ಹತ್ತಿ ...
Read More »ಏಳು ತಿಂಗಳ ಬಳಿಕ ತವರಿಗೆ ಆಗಮಿಸಿದ ಸಿ.ಎಂ
ಶಿವಮೊಗ್ಗ: ಬರೋಬ್ಬರಿ ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನ್ನ ತವರು ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶಿಕಾರಿಪುರಕ್ಕೆ ಸಿಎಂ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿದೆ. ಕೂಡಲೇ ಮಳೆ ನಿಂತು ಪ್ರವಾಹ ತಗ್ಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಕೆಲಸ ಮಾಡುತ್ತೇವೆ ಎಂದು ...
Read More »ಸಿಗಂದೂರಲ್ಲಿ ನಡೆದ ಘಟನೆ ಶೋಭೆ ತರುವಂತದ್ದಲ್ಲ – ಸಿಎಂ
ಶಿವಮೊಗ್ಗ: ಸಿಗಂದೂರಿನಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಜಿಲ್ಲಾಧಿಕಾರಿ ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಯಿಂದ ಸಿಗಂದೂರು ದೇವಾಲಯದ ಘಟನೆ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಜೊತೆಗೆ ದೇವಾಲಯದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
Read More »ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು: ಯಡಿಯೂರಪ್ಪ
ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಗೆ ಉತ್ತಮ ವಾತಾವರಣವಿದೆ. ಮತದಾರರು ಬಿಜೆಪಿ ಪರವಾಗಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಠೇವಣಿಯನ್ನು ಪಡೆಯಲು ಸಾಧ್ಯವಿಲ್ಲ ಎಂದುಕೊಂಡಿದ್ದೆವು. ಆದರೆ ಇದೀಗ ಶಿರಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ. ಕಳೆದ ಮೂರು ದಿನದಿಂದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
Read More »
C News TV Kannada News Online in cnewstv