Breaking News

ಶಿವಮೊಗ್ಗ

ಸಚಿವರಿಬ್ಬರ ರಾಜೀನಾಮೆಗೆ ಸುಂದರೇಶ್ ಆಗ್ರಹ

ಶಿವಮೊಗ್ಗ: ಕರೋನಾ ಪಿಪಿಇ ಕಿಟ್ ಖರೀದಿ ಹಾಗೂ ಔಷದ ಮತ್ತು ಇತರೆ ಪರಿಕರಗಳ‌ ಖರೀದಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು‌ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕರೋನಾ ಹರಡುವುದನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ ಯಾವ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಅಲ್ಲಿ ಕರೋನಾ ತಡೆಯಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರಿಗೆ ಇರುವ ಜನಪರ‌ ...

Read More »

ಇಂದಿನಿಂದ ಸಂಜೆ 6ಗಂಟೆ ಬಳಿಕ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತ 

  ಶಿವಮೊಗ್ಗ : ಶಿವಮೊಗ್ಗದಲ್ಲಿ ಕರೋನಾ ನಿಯಂತ್ರಣದ ಕ್ರಮವಾಗಿ ಸಂಜೆ 6ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ಇಂದಿನಿಂದ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು 6ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು. ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ...

Read More »

ಸೇವಾ ಸಿಂಧು ಯೋಜನೆಯಡಿ ವಿವಿಧ ಇಲಾಖೆಗಳ 451ಸೇವೆಗಳು ಲಭ್ಯ: ಜಿ.ಅನುರಾಧ

  ಶಿವಮೊಗ್ಗ  : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್‍ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್‍ಸೈಟ್ ಮೂಲಕ ಅಥವಾ ಸಮೀಪದ ಸಿಎಸ್‍ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್‍ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...

Read More »

ಶಿವಮೊಗ್ಗದಲ್ಲಿ ಇಂದು 23 ಕರೋನಾ ಪ್ರಕರಣಗಳು ಪತ್ತೆ.

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 23 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊ‌ಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದಲ್ಲದೇ, ಟ್ರಾವೆಲ್ ಹಿಸ್ಟರಿಯೇ ಇಲ್ಲದ 8 ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲಾಡಳಿತ ಈ 8 ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 199 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 117ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಪ್ರಸ್ತುತ ಶಿವಮೊಗ್ಗದಲ್ಲಿ 80 ಜನ ಕರೋನಾ ಸೋಂಕಿತರಿದ್ದು, ಇವರೆಲ್ಲರಿಗೂ ...

Read More »

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 22 ಕರೋನಾ ಪ್ರಕರಣಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರು 22 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊ‌ಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಜನರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ವಿದೇಶ ಹಾಗೂ ಅಂತರ್ ರಾಜ್ಯ ಹಾಗೂ ಬೆಂಗಳೂರಿನಿಂದ ಬಂದ 9 ಜನರಲ್ಲಿ ಇಂದು ಕರೋನಾ ವೈರಸ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 173 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 109 ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ...

Read More »

ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 2225 ಬೆಡ್ ವ್ಯವಸ್ಥೆ

  ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯ ಪಡೆಯಲು ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ : ಕರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ನೋಂದಣಿಯಾಗಿರುವ 21ಆಸ್ಪತ್ರೆಗಳಲ್ಲಿ ಕರೋನಾ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳು ಸೇರಿದಂತೆ ವೈದ್ಯಕೀಯ ಸೌಲಭ್ಯಗಳ ಕುರಿತು ಈಗಾಗಲೇ ನೀಡಿರುವ ಮಾಹಿತಿಯನ್ನು ಗೂಗಲ್ ಶೀಟ್‍ನಲ್ಲಿ ನವೀಕರಿಸಬೇಕು. ಕೆಪಿಎಂಎ ವೈದ್ಯಾಧಿಕಾರಿಗಳ ತಂಡ ...

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ

  ಶಿವಮೊಗ್ಗ : ಎಸ್‍ಎಸ್‍ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ  ಪರಿಶೀಲನೆ ನಡೆಸಿದರು.  ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್‍ಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಹಜವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯಲ್ಲಿ 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 84 ಪರೀಕ್ಷಾ ಕೇಂದ್ರಗಳಿವೆ. ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ರೂಟ್‍ಗಳಲ್ಲಿ 198 ...

Read More »

ಶೀಘ್ರವೇ ಸೆಟ್ಟೇರಲಿರುವ ಫ್ಯಾಮಿಲಿ ಪ್ಯಾಕ್ ಕನ್ನಡ ಚಲನಚಿತ್ರ

  ಫ್ಯಾಮಿಲಿ ಪ್ಯಾಕ್ ಇದು ನೂತನವಾಗಿ ಸೆಟ್ಟೇರಲಿರುವ ಕನ್ನಡ ಚಲನಚಿತ್ರದ ಹೆಸರು. ಈ ಹೆಸರು ಕೇಳಿದಾಕ್ಷಣ ಯಾರಾದರೂ ಇದು ಪಕ್ಕಾ ಕಾಮಿಡಿ ಚಿತ್ರ ಎಂದುಕೊಳ್ಳುತ್ತಾರೆ. ಹೌದು ಇದೊಂದು ಪಕ್ಕಾ ಕಾಮಿಡಿ ಪ್ರಿಯರಿಗೆ ಹೇಳಿ ಮಾಡಿಸಿದಂತಾ ಚಲನಚಿತ್ರ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಈ ಚಲನಚಿತ್ರ ನಿರ್ಮಿಸಿ ಅರ್ಪಿಸುತ್ತಿದ್ದಾರೆ. ಇನ್ನು ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಒಂದಾಗಿದ್ದ ನಿರ್ದೇಶಕ ಅರ್ಜುನ್ ಕುಮಾರ್ ಹಾಗೂ ನಾಯಕ ನಟ ಲಿಖಿತ್ ಶೆಟ್ಟಿ ಜೋಡಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲೂ ಮುಂದುವರಿದಿದೆ. ಇನ್ನು ಚಿತ್ರದ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಚಿತ್ರದ ...

Read More »

ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ...

Read More »

ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್.. ಎಷ್ಟು ತಿಂಗಳು ಬಂದ್ ?? ಪರ್ಯಾಯ ಮಾರ್ಗ ಯಾವುದು ಗೊತ್ತಾ ??

  ಶಿವಮೊಗ್ಗ : ಆಗುಂಬೆ ಭಾಗದಲ್ಲಿ ಅತಿಯಾದ ಮಳೆಯಾಗುತ್ತಿದೆ ಹಾಗಾಗಿ ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ರಸ್ತೆ ಕುಸಿದು ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಬಹುದು. ಆಸ್ತಿ ಮತ್ತು ಪ್ರಾಣ ಹಾನಿಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 a ತಿರ್ಥಹಳ್ಳಿ – ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವವರೆಗೂ 15.06.2020 ರಿಂದ 15.10.2020 ರವರೆಗೆ 12 ಟನ್ ಗಿಂತ ಅಧಿಕಾ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.. ಪರ್ಯಾಯ ಮಾರ್ಗಗಳು : 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ...

Read More »