ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿರುವುದಿಲ್ಲ. ಆದರೆ ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11ಮಂದಿ ಪೊಲೀಸ್ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ವಿಶೇಷ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಮತ್ತೆ 10 ಕರೋನಾ ಪ್ರಕರಣಗಳು. ಸೊಂಕಿತರ ಸಂಖ್ಯೆ 24 ಕ್ಕೆ ಏರಿಕೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಮತ್ತೆ 10 ಕರೋನಾ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 26ಕ್ಕೇರಿದೆ. ಬಾಂಬೆ, ತಮಿಳುನಾಡು ಹಾಗೂ ಕೇರಳದಿಂದ ಬಂದವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 10 ಜನರಲ್ಲಿ ಕರೋನಾ ದೃಢಪಟ್ಟಿದ್ದು, ಇನ್ನೂ 143 ಜನರ ವೈದ್ಯಕೀಯ ವರದಿ ಬರಬೇಕಿದೆ. ಅಲ್ಲದೆ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
Read More »ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ ಕ್ವಾರೆಂಟೈನ್:ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಬೇರೆ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿರುವ 1428ಮಂದಿಯನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಪೈಕಿ 802 ಮಂದಿಯ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು, 14ಪಾಸಿಟಿವ್ ಬಂದಿವೆ. ಇನ್ನುಳಿದವರ ಪರೀಕ್ಷೆಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಇದುವರೆಗೆ ಒಟ್ಟು 4554 ಸ್ಯಾಂಪಲ್‍ಗಳ ಪರೀಕ್ಷೆ ನಡೆಸಲಾಗಿದ್ದು, 4349 ವರದಿ ಬಂದಿವೆ. ಇನ್ನೂ 191 ಸ್ಯಾಂಪಲ್‍ಗಳ ವರದಿ ಬರಬೇಕಿದೆ ಎಂದು ಹೇಳಿದರು. ಕ್ವಾರೆಂಟೈನ್ ವ್ಯವಸ್ಥೆ: ಪ್ರಸ್ತುತ 916ಮಂದಿ ಸಾಂಸ್ಥಿಕ ಕ್ವಾರೆಂಟೈನ್ ...
Read More »ಜಿಲ್ಲೆಯಲ್ಲಿ ಮತ್ತೆ 3 ಕೊರೋನಾ ಪಾಸಿಟಿವ್ ಪ್ರಕರಣ
ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು ಮತ್ತೆ ಮೂರು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಒಟ್ಟು ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 12ಕ್ಕೇರಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.. ರಾಜ್ಯದಲ್ಲಿ ಇಂದು ಸಂಜೆ 5 ಗಂಟೆಯ ವರೆಗೆ ವರದಿಯಾದ ಹೊಸ 36 ಪಾಸಿಟಿವ್ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 3 ಹೊಸ ಪ್ರಕರಣಗಳು ಪತ್ರೆಯಾಗಿದೆ.ಮಹಾರಾಷ್ಟ್ರದ ಮುಂಬೈ ಪ್ರಯಾಣದ ಹಿನ್ನೆಲೆಯ ಹೊಂದಿರುವ 38 ವರ್ಷದ ಮಹಿಳೆ, 42 ವರ್ಷದ ಪುರುಷ ಹಾಗೂ ...
Read More »ಸಿಇಟಿ ಮಾದರಿಯಲ್ಲಿ SSLC ಪರೀಕ್ಷೆ ನಡೆಸಲು ಶೀಘ್ರ ತೀರ್ಮಾನ ತೆಗೆದುಕೊಳ್ಳಿ -ಶಿವಮೊಗ್ಗ ಜಿಲ್ಲಾ NSUI
ಶಿವಮೊಗ್ಗ : ಕೊವಿಡ್ 19 ಪರಿಣಾಮ ರಾಜ್ಯದಲ್ಲಿ ಈವರೆಗೆ SSLC ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರವು SSLC ಪರೀಕ್ಷೆ ನಡೆಸಲು ಸಿಇಟಿ ಮಾದರಿ ಅನುಸರಿಸಲು ಮುಂದಾಗಬೇಕು. SSLC ವೇಳಾಪಟ್ಟಿ ಹಾಗೂ ಮಾದರಿಯ ಬಗ್ಗೆ ಸ್ಪಷ್ಟಪಡಿಸಿದಲ್ಲಿ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಾರೆ. ಸರ್ಕಾರ ಹೀಗೆ ವಿಳಂಬ ಮಾಡಿದಲ್ಲಿ ಪಾಲಕರು ಮತ್ತು ವಿದ್ಯಾರ್ಥಿಗಳ ಆತಂಕ ಹೆಚ್ಚಳವಾಗಲಿದೆ. SSLC ವಿದ್ಯಾರ್ಥಿಗಳು ಪ್ರಸ್ತುತ ತಾವು ಇರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯೂ ಸಾಮಾಜಿಕ ...
Read More »ಗ್ರಾಮಪಂಚಾಯಿತಿ ಚುನಾವಣೆ ಮೇಲೂ ಕರೊನಾ ಕರಿನೆರಳು
ಶಿವಮೊಗ್ಗ : ಗ್ರಾಮಪಂಚಾಯಿತಿ ಚುನಾವಣೆಯ ಮೇಲೆಯೂ ಕರೋನಾ ಕರಿನೆರಳು ಬಿದ್ದಿದೆ. ಜೂನ್ ಜುಲೈ ಅವಧಿಯಲ್ಲಿ ಗ್ರಾಮಪಂಚಾಯಿತಿ ಚುನಾಯಿತರ ಅವಧಿ ಮುಗಿಯಲಿದ್ದ, ಎಲ್ಲವೂ ಸರಿಯಾಗಿದ್ದರೆ ಇದೇ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತು. ಆದರೆ ಕರೋನಾ ಎಫೆಕ್ಟ್ ನಿಂದಾಗಿ ಗ್ರಾಮಪಂಚಾಯಿತಿ ಚುನಾವಣೆ ಕನಿಷ್ಟ ಆರು ತಿಂಗಳು ಮುಂದೆ ಹೋಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಚಿವ ಸಂಪುಟ ಸಭೆಯಲ್ಲಿ ಚುನಾವಣೆ ನಡೆಸದಿರಲು ತೀರ್ಮಾನಿಸಿದೆ. ಕರೋನಾ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ತಿಂಗಳಕಾಲ ಮುಂದೂಡಲಾಗಿದೆ. ಹೀಗಾಗಿ ಅವಧಿ ಮುಗಿಯುವ ಗ್ರಾಮಪಂಚಾಯಿತಿಗಳಲ್ಲಿ ಅಡಳಿತ ಸಮಿತಿ ...
Read More »ಜಿಲ್ಲೆಯಲ್ಲಿ ಮತ್ತೊಂದು ಕರೋನಾ ಪಾಸಿಟಿವ್ ಪ್ರಕರಣ
ಶಿವಮೊಗ್ಗ : ಮುಂಬಯಿಯಿಂದ ಹಿಂತಿರುಗಿದ್ದ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ ಕರೋನಾ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಸೋಂಕಿತ ವ್ಯಕ್ತಿ ಈಗಾಗಲೇ ಕ್ವಾರೆಂಟೈನ್‍ನಲ್ಲಿದ್ದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಆ ವ್ಯಕ್ತಿಯೊಂದು ಪ್ರಾಥಮಿಕವಾಗಿ ಸಂಬಂಧ ಹೊಂದಿದ್ದ 12 ಮಂದಿಯನ್ನು ಗುರುತಿಸಲಾಗಿದ್ದು, ಎಲ್ಲರನ್ನು ಕ್ವಾರೆಂಟೈನ್ ಮಾಡಲಾಗಿದೆ. ಇನ್ನುಳಿದಂತೆ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ ಕ್ವಾರೆಂಟೈನ್ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು..ಅಲ್ಲದೆ ಕೊರೋನ ಪಾಸಿಟಿವ್ ಕಂಡುಬಂದ ವ್ಯಕ್ತಿಯು ಮುಂಬೈನಿಂದ ಬಂದಿರುವುದಾಗಿ ಸ್ಪಷ್ಟಪಡಿಸಿದರು.
Read More »ಡಿ ಕೆ.ಶಿವಕುಮಾರ್ ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಸಚಿವ, ಸಂಸದರಿಂದ ರೈಲ್ವೇ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ
ಶಿವಮೊಗ್ಗ : ಶಿವಮೊಗ್ಗ ನಗರ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ನಡೆಸಿದರು. ಸದರಿ ರಸ್ತೆಯ ಎರಡು ಬದಿಯಲ್ಲಿ 750ಮೀಟರ್ ಉದ್ದಕ್ಕೆ ಸಿಮೆಂಟ್ ಕಾಂಕ್ರೀಟ್ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100ಮೀಟರ್ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400ಮೀಟರ್ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ...
Read More »ಮೇ27ರಂದು ಹೃದ್ರೋಗ ವಿಭಾಗದ OPD ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ 27ರಂದು ಹೃದ್ರೋಗ ವಿಭಾಗದ ಹೊರ ರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಒಪಿಡಿಯಲ್ಲಿ ಪ್ರತಿ ದಿನ 80ರಿಂದ 100 ಮಂದಿ ಹೃದಯ ಸಂಬಂಧಿ ಖಾಯಿಲೆ ಇರುವ ರೋಗಿಗಳಿಗೆ ಸೂಕ್ತ ತಪಾಸಣೆ, ಸಲಹೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ. ಹೃದ್ರೋಗ ತಜ್ಞರಾದ ಡಾ.ಪರಮೇಶ್ವರ ಎಸ್ ಮತ್ತು ಡಾ.ಮಹೇಶಮೂರ್ತಿ ಅವರು ಇಲ್ಲಿ ಕಾರ್ಯನಿರ್ವಹಿಸುವರು ಎಂದು ಹೇಳಿದರು. ಕಾರ್ಡಿಯಾಕ್ ...
Read More »
C News TV Kannada News Online in cnewstv