Breaking News

ಶಿವಮೊಗ್ಗ

ರೇಣುಕಾಚಾರ್ಯ ವಿರುದ್ಧ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ.

ಶಿವಮೊಗ್ಗ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ‌.ರೇಣುಕಾಚಾರ್ಯ ಅವರು ಮಸೀದಿ ಹಾಗೂ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿಟಿಜನ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ರೇಣುಕಾಚಾರ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ರೇಣುಕಾಚಾರ್ಯ ಅವರು ಮಸೀದಿಗಳು ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳಾಗಿವೆ ಎಂದು ಹೇಳಿಕೆ ನೀಡುವ ಮೂಲಕ ಒಂದು ಕೋಮಿನ ವಿರುದ್ಧ ಇನ್ನೊಂದು ಕೋಮನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Read More »

ಲ್ಯಾಪ್ ಟಾಪ್ ಗಾಗಿ ಎನ್ ಎಸ್ ಯುಐ ಪ್ರತಿಭಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್ ನೀಡುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಎನ್ ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ವರ್ಷ ಕಾರಣಾಂತರಗಳಿಂದ ಸರ್ಕಾರ ಲ್ಯಾಪ್ ಟಾಪ್ ವಿತರಿಸಿರಲಿಲ್ಲ. ಆದರೆ ಈ ಬಾರಿ ಸರ್ಕಾರ ಲ್ಯಾಪ್ ಟಾಪ್ ವಿತರಿಸಲು ಮುಂದಾಗಿದೆಯಾದರೂ ಅದು ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ. ಇದರಿಂದಾಗಿ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕೂಡಲೆ ಎಲ್ಲ ವಿದ್ಯಾರ್ಥಿಗಳಿಗೂ ...

Read More »

ಮೆಗ್ಗಾನ್ ಆಸ್ಪತ್ರೆ ವ್ಯವಸ್ಥೆ ಸುಧಾರಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಅವರು ಮಂಗಳವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೆಗ್ಗಾನ್ ಆಸ್ಪತ್ರೆಯ ಕುಂದುಕೊರತೆ ಹಾಗೂ ಲೋಪ ದೋಷಗಳ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದು, ಇದನ್ನು ಸರಿಪಡಿಸಬೇಕು ಎಂದು ಹೇಳಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಬಹುತೇಕ ಔಷಧಿಗಳಿಗೆ ಚೀಟಿ ಬರೆದುಕೊಡಲಾಗುತ್ತಿದೆ. ಸಿರಿಂಜಿ, ಬ್ಯಾಂಡೇಜ್ ಸೇರಿದಂತೆ ಸಣ್ಣಪುಟ್ಟ ಸಾಮಾಗ್ರಿಗಳನ್ನು ಸಹ ಹೊರಗಿನಿಂದ ಖರೀದಿಸಿ ತರುವಂತೆ ರೋಗಿಗಳಿಗೆ ...

Read More »

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಾಸಕ ಸೋಮಶೇಖರ ರೆಡ್ಡಿ ಅವರು ಮುಸ್ಲಿಮ್ ಸಮುದಾಯವನ್ನು ಅವಹೇಳನ ಮಾಡುವಂತ ಹೇಳಿಕೆ ನೀಡಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆಪಡೆದರು. ಸೋಮಶೇಖರ ರೆಡ್ಡಿ ಅವರು ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವಂಥ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದ್ದರೂ ಇನ್ನೂ ಅವರನ್ನು ಬಂಧಿಸಿಲ್ಲ. ಯಡಿಯೂರಪ್ಪ ಅವರೇ ಸೋಮಶೇಖರ ರೆಡ್ಡಿ ಅವರ ರಕ್ಷಣೆಗೆ ನಿಂತಿದ್ದಾರೆ ಎಂಬ ಅನುಮಾನ ಮೂಡಲಾರಂಭಿಸಿದೆ. ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಕಾರರು ...

Read More »

ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಎದುರು ನಡೆದಿದೆ. ರಾತ್ರಿ ಮೋರಿ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿ ನಿದ್ದೆ ಮಾಡುವಾಗ ಮೋರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಜಯನಗರ ಠಾಣೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಪರಿಚಿತ ವ್ಯಕ್ತಿಯ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ಅಪರಿಚಿತ ವ್ಯಕ್ತಿಯ ಗುರುತಿಗೆ ಜಯನಗರ ಠಾಣೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

Read More »

ಶಿಷ್ಟಾಚಾರ ಕಟ್ಟುನಿಟ್ಟಿನಿಂದ ಪಾಲಿಸಿ: ಜಿಲ್ಲಾಧಿಕಾರಿ ಸೂಚನೆ

  ಶಿವಮೊಗ್ಗ  : ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಸರ್ಕಾರದ ಶಿಷ್ಟಾಚಾರವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಷ್ಟಾಚಾರ ಪಾಲನೆ ಮಾಡುವ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಶಿಷ್ಟಾಚಾರ ಪಾಲನೆಯನ್ನು ಲಘುವಾಗಿ ಪರಿಗಣಿಸಬಾರದು. ಕಾರ್ಯಕ್ರಮ ಆಯೋಜಿಸುವುದಕ್ಕಿಂತ ಒಂದು ವಾರ ಪೂರ್ವದಲ್ಲೇ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು. ಶಿಷ್ಟಾಚಾರ ಪಾಲಿಸದೆ, ಸ್ಥಳೀಯವಾಗಿ ಸಾರ್ವಜನಿಕರು ಅಥವಾ ಗುತ್ತಿಗೆದಾರರು ಶಂಕುಸ್ಥಾಪನೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ...

Read More »

ಶಿವಮೊಗ್ಗದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

  ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ದಿನವಾದ ಇಂದು ಬೆಳಗಿನ ಜಾವದಿಂದಲೇ ಜನ ಜೀವನ ಎಂದಿನಂತಿತ್ತು. ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್ ಸೇವೆ ಎಂದಿನಂತಿತ್ತು. ಆಟೋಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿದ್ದವು. ಅಂಗಡಿ ಮುಂಗಟ್ಟುಗಳು ಎಂದಿನಂತೆಯೇ ತೆರೆದಿದ್ದು ವರ್ತಕರು ವ್ಯಾಪಾರ ಆರಂಭಿಸಿದ್ದಾರೆ. ಒಟ್ಟಾರೆ ಶಿವಮೊಗ್ಗದಲ್ಲಿ ಭಾರತ್ ಬಂದ್ ಎನ್ನುವುದು ಪ್ರತಿಭಟನೆಗಷ್ಟೇ ಸೀಮಿತವಾಗುವ ಸಾಧ್ಯತೆಯಿದೆ.

Read More »

ಸಚಿವರೇ ಸಿಮ್ಸ್‌ಗೆ ಹೋಗದಿದ್ದರೆ ಗತಿ ಏನು?: ಮಾಜಿ ಶಾಸಕ ಕೆಬಿಪಿ ಪ್ರಶ್ನೆ

ಶಿವಮೊಗ್ಗ: ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಸಿಮ್ಸ್ ನಿರ್ದೇಶಕ ಡಾ. ಲೇಪಾಕ್ಷಿ ಅವರನ್ನು ನಿಂದಿಸಿರುವುದು ಸರಿ ಅಲ್ಲ ಎಂದು ಮಾಜಿ ಸಚಿವ ಕೆ.ಬಿ. ಪ್ರಸನ್ನ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಶ್ವರಪ್ಪ ಅವರು ಡಾ. ಲೇಪಾಕ್ಷಿ ಅವರು ಇರುವ ವರೆಗೂ ಸಿಮ್ಸ್‌ಗೆ ಕಾಲಿಡುವುದಿಲ್ಲ ಎನ್ನುತ್ತಿದ್ದಾರೆ. ಇದು ಜನಪ್ರತಿನಿಧಿಯೊಬ್ಬರು ನಡೆದುಕೊಳ್ಳುವ ರೀತಿಯೇ? ಅವರು ಆಸ್ಪತ್ರೆಗೆ ಕಾಲಿಡದಿದ್ದರೆ ಅಲ್ಲಿಯ ಅವ್ಯವಸ್ಥೆಗಳನ್ನು ಸರಿ ಮಾಡುವವರು ಯಾರು? ರೋಗಿಗಳಿಗೆ ತೊಂದರೆ ಆದರೆ ಅದರ ಜವಾಬ್ದಾರಿ ಯಾರದು ಎಂದಿದ್ದಾರೆ. ಅಧಿಕಾರಿಯೊಬ್ಬರನ್ನು ಬಹಿರಂಗವಾಗಿಯೇ ಎಲ್ಲರ ...

Read More »

ಕುವೆಂಪು ಆಶಿಸಿದ ಭಾರತ ಉಳಿಸಿಕೊಳ್ಳೋಣ: ಬಸವ ಮರಳಸಿದ್ದ ಸ್ವಾಮೀಜಿ

  ಶಿವಮೊಗ್ಗ: ಭಾರತದ ಬಲವೇ ಅನೇಕತೆಯಲ್ಲಿ ಏಕತೆ ಎಂಬುದಾಗಿದೆ. ಕುವೆಂಪು ಅವರಂಥ ಮಹಾಕವಿಗಳು ಹೇಳಿದಂತೆ ಹಿಂದೂ, ಕ್ರೈಸ್ತ, ಮುಸಲ್ಮಾನ ಪಾರಸಿಕ ಜೈನರುದ್ಯಾನವೆಂಬುದೇ ಭಾರತದ ಹೆಗ್ಗಳಿಕೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಶರಣರು ಹೇಳಿದರು‌. ನಗರದ ಪತ್ರಿಕಾ ಭವನದಲ್ಲಿ ಕುವೆಂಪು ಜನ್ಮದಿನದ ಅಂಗವಾಗಿ ನಡೆದ ಸಂವಿಧಾನ ಪ್ರಸ್ತಾವನೆಯ ಓದು, ಕುವೆಂಪು ಗೀತಗಾಯನ, ನಾಡಗೀತೆ ವಾಚನ ಮತ್ತು ಸರ್ವಧರ್ಮ ಸಹಭೋಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಮತ-ಧರ್ಮ, ತತ್ವ, ಸಿದ್ಧಾಂತಗಳಿಗೂ ಈ ದೇಶ ನೆಲೆಯಾಗಿದೆ. ಎಲ್ಲವನ್ನೂ ಪೊರೆದಿದೆ. ಎಲ್ಲರ ಸಹಬಾಳ್ವೆಯ, ಸಾಮರಸ್ಯದಲ್ಲೇ ಎಲ್ಲರ ಹಿತವಿದೆ. ಏಳಿಗೆ ...

Read More »

ಒಂದೇ ಕಡೆ 50 ದೇವತೆಗಳ ಸಮಾಗಮ ಸಂಭ್ರಮ

  ನಾಳೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಶಕ್ತಿ ದೇವತೆಗಳ ಸಮಾಗಮ ಸಮಿತಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಪ್ರತಿ ವರ್ಷ ಎಳ್ಳಮವಾಸೆ ದಿನದಂದು ನಡೆಯುತ್ತಿತ್ತು, ಅದೇ ಈ ಬಾರಿ 21ನೆ ವರ್ಷದ ಆಚರಣೆಯಲ್ಲಿ ಸೂರ್ಯಗ್ರಹಣದ ಪ್ರಯುಕ್ತ ನಾಳೆ ಬೆಳಗ್ಗೆ ಸುಮಾರು 11 ಗಂಟೆಗೆ ನಗರದ 50 ದೇವತೆಗಳ ಸಮಾಗಮವಿದ್ದು, ಮದ್ಯಾಹ್ನ 12:30 ರಿಂದ 1:00 ಗಂಟೆಯ ಸಮಯದಲ್ಲಿ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಗೆ,ಅನ್ನ ಸಂತರ್ಪಣೆ ಕಾರ್ಯಕ್ರಮವಿರುತ್ತದೆ.. ಸಂಜೆ ಸಂಜೆ ಸಾವಿರಾರು ಮಾತೆಯರು ...

Read More »