ಶಿವಮೊಗ್ಗ: ಮಹಾನಗರ ಪಾಲಿಕೆ ಆಶ್ರಯ ಕಚೇರಿಯಲ್ಲಿ ಎಫ್.ಡಿ.ಎ ಆಗಿ ಕಾರ್ಯನಿರ್ವಹಿಸುವ ಸುನೀಲ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಿವೇಶನ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಂದ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮಧ್ಯಾಹ್ನ ದೂರುದಾರ ನಾಗರಾಜ್ ಅವರಿಂದ ಎಫ್.ಡಿ.ಎ ಸುನೀಲ್ ತನ್ನ ಮನೆಯಲ್ಲಿ 10.000 ರೂ.ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ ಮನೋಜ್,ಇನ್ಸ್ ಪೆಕ್ಟರ್ ಗಳಾದ ತಿಪ್ಪೇಸ್ವಾಮಿ, ವಿರೇಂದ್ರ,ಸಿಬ್ಬಂದಿಗಳಾದ ವಸಂತ್,ನಾಗರಾಜ್,ರಘುನಾಯ್ಕ್,ಯೇಗೇಶಪ್ಪ,ಹರೀಶ್, ಶ್ರೀನಿವಾಸ ಪಾಲ್ಗೊಂಡಿದ್ದರು. ವರದಿ : ಇಮ್ರಾನ್ ಸಾಗರ್
Read More »ಶಿವಮೊಗ್ಗ
ನಾಗರಹಾವಿನೊಂದಿಗೆ ಚೆಲ್ಲಾಟ ತಂದ ಸಂಕಟ.
ನಾಗರಹಾವಿನೊಂದಿಗೆ ಚೆಲ್ಲಾಟವಾಡಲು ಹೋಗಿದ್ದ ಸ್ನೇಕ್ ಡ್ಯಾನಿ ನಾಗರಹಾವಿನ ಕಡಿತಕ್ಕೆ ಒಳಗಾಗಿದ್ದಾರೆ. ಇಂದು ಸಂಜೆ ಭದ್ರಾವತಿಯ ಹೊಸಮನೆಯಲ್ಲಿ ಸ್ನೇಕ್ ಡ್ಯಾನಿ ನಾಗರಹಾವೊಂದನ್ನು ಹಿಡಿದ್ದಾರೆ. ಅದರ ಹೆಡಗೆ ಮುತ್ತಿಕ್ಕಲು ಹೋದಾಗ ಡ್ಯಾನಿಯ ತುಟಿಗೆ ನಾಗರ ಹಾವು ಕಚ್ಚಿದ್ದು, ಗಂಭೀರವಾಗಿ ಗಾಯವಾಗಿದ್ದು ಸ್ನೇಕ್ ಡ್ಯಾನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. https://youtu.be/S7nQBuPobpk https://youtu.be/S7nQBuPobpknbsp;
Read More »ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಆಫರ್
ಶಿವಮೊಗ್ಗ: ಸರ್ಕಾರಿ ನೌಕರರಿಗೆ ಬಂಪರ್ ಆಫರ್ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ. ಇದುವರೆಗೆ ಸೈನಿಕರಿಗೆ ಮಿಲಿಟರಿ ಕ್ಯಾಂಟೀನ್, ಪೊಲೀಸರಿಗೆ ಪೊಲೀಸ್ ಕ್ಯಾಂಟೀನ್ ಮೂಲಕ ರಿಯಾಯಿತಿ ದರದಲ್ಲಿ ದಿನಬಳಕೆ ವಸ್ತುಗಳನ್ನು ನೀಡಲಾಗಿತ್ತು. ಇದೇ ಮಾದರಿಯಲ್ಲಿ ಸರ್ಕಾರಿ ನೌಕರರ ಕ್ಯಾಂಟೀನ್ ಆರಂಭಿಸಿ ಸರ್ಕಾರಿ ನೌಕರರಿಗೆ ಶೇಕಡಾ 10 ರಿಂದ 40ರಷ್ಟು ರಿಯಾಯಿತಿ ದರದಲ್ಲಿ ದಿನಬಳಕೆ ವಸ್ತುಗಳನ್ನು ನೀಡಲು ಸರ್ಕಾರಿ ನೌಕರರ ಸಂಘ ತೀರ್ಮಾನಿಸಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಯೋಗಿಕವಾಗಿ ಆರಂಭದಲ್ಲಿ ಶಿವಮೊಗ್ಗದಲ್ಲಿ ...
Read More »ಮಂಗಳೂರು ಘಟನೆ -ಸಿಓಡಿ ತನಿಖೆಗೆ ಆದೇಶ
ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಘಟನೆಯನ್ನು ನ್ಯಾಯಾಂಗ ಮತ್ತು ಸಿಓಡಿ ತನಿಖೆಗೆ ವಹಿಸಲು ಆದೇಶಿಸ ಲಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹೆಲಿಪ್ಯಾಡ್‌ನಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬಂದವರು ಪ್ರತಿಭಟನೆ ನೆಪದಲ್ಲಿ ಹಿಂಸಾಚಾರ ನಡೆಸಿ ಗಲಭೆಗೆ ಕಾರಣರಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಿಳಿದು ಕೊಳ್ಳುವ ಪ್ರಯತ್ನ ಮಾಡದೇ ಹಿಂಸಾಚಾರನಡೆಸಲಾಗಿದೆಎಂದುದೂರಿದರು. ಸಾವಯವ ಕೃಷಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ಉತ್ತೇಜನಕ್ಕಾಗಿ ಹಲವು ಯೋಜನೆ ಕೈಗೊಳ್ಳಲಾಗಿದೆ. ಪೊಲೀಸರ ವೇತನ ಭತ್ಯೆ ಹೆಚ್ಚಳಕ್ಕೆ ...
Read More »ಸುಭಿಕ್ಷಾ ಲೋಕಾರ್ಪಣೆ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 4ಸಾವಿರ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದೆ ಇದಕ್ಕಾಗಿ ರಾಜ್ಯ ಸರಕಾರ 2,200 ಕೋಟಿ ರೂ ಅನುದಾನವನ್ನು ನಿಗದಿಪಡಿಸಿದೆ. ರೈತರಿಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿ ...
Read More »ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬೇಡಿ: ತಹಸೀಲ್ದಾರ್ ಗಿರೀಶ್
ಶಿವಮೊಗ್ಗ: ಕಳೆದ ನಾಲ್ಕು ತಿಂಗಳ ಹಿಂದೆ ಬಂದ ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ನಿಂದ ಸೂಕ್ತ ಪರಿಹಾರ ನೀಡಲಾಗುತ್ತದೆ. ಸಂತ್ರಸ್ತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬಾರದು ಎಂದು ತಹಸೀಲ್ದಾರ್ ಗಿರೀಶ್ ಮನವಿ ಮಾಡಿದ್ದಾರೆ. ಕೆಲ ಸಂತ್ರಸ್ತರ ದಾಖಲೆಗಳು ಸರಿ ಇಲ್ಲದಿರುವುದರಿಂದ ಅವರಿಗೆ ಪರಿಹಾರ ಬಂದಿಲ್ಲ. ನಮ್ಮ ಪಕ್ಕದ ಮನೆಯವರಿಗೆ ಪರಿಹಾರ ಬಂದಿದೆ. ಆದರೆ ನಮಗೆ ಪರಿಹಾರ ಬಂದಿಲ್ಲ ಎಂದು ಕೆಲ ಸಂತ್ರಸ್ಥರು ತಿಳಿದುಕೊಂಡಿದ್ದಾರೆ. ಈ ರೀತಿಯ ಸಂತ್ರಸ್ಥರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಂಡರೆ ಪರಿಹಾರ ಸಿಕ್ಕೇ ಸಿಗುತ್ತದೆ. ಅದನ್ನು ...
Read More »ಕಾಂಗ್ರೆಸ್ ದಿವಾಳಿಯಾಗಿದೆ
ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ...
Read More »ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ 19ಕ್ಕೆ
ಶಿವಮೊಗ್ಗ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ. ಹೀಗೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಎರಡು ದಿನಗಳ ಹಿಂದೆ ಕಾಯ್ದೆ ವಿರೋಧಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ...
Read More »3 ದಿನಗಳ ಕಾಲ ನಡೆಯಲಿರುವ ಪೋಲಿಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆ – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಇಂದು ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 3 ದಿನಗಳ ಕಾಲ ನಡೆಯ ಲಿರುವ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದರು. ಪೊಲೀಸರು ತಮ್ಮ ವೃತ್ತಿ ಬದುಕಿನಲ್ಲಿ ಶಿಸ್ತು ರೂಢಿಸಿಕೊಂಡು ಸದಾ ಜಾಗೃತವಾಗಿರಬೇಕು. ತಮ್ಮ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲರೂ ವಿಜಯಿಗಳಾಗುವುದು ಸಾಧ್ಯವಿಲ್ಲದಿರಬಹುದು. ಆದರೆ ಗೆಲ್ಲುವ ಪ್ರಯತ್ನದಿಂದ ಹಿಂದೆ ಸರಿಯಬಾರದು. ಕ್ರೀಡೆಯಲ್ಲಿ ಸ್ಪರ್ಧಾಭಾವನೆ ಬಹುಮುಖ್ಯ. ಎಲ್ಲಾ ಸಂಘಟಿತವಾದ ಪ್ರಯತ್ನಕ್ಕೆ ಜಯ ಖಂಡಿತ ಲಭಿಸುತ್ತದೆ ಎಂದರು. ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ.ಶಾಂತರಾಜು, ...
Read More »ಪೌರತ್ವ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಧರಣಿ – ಬಂಧನ – ಬಿಡುಗಡೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಗರದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ದೇಶದ ಅಖಂಡತೆಗೆ ಭಂಗ ತಂದಿದೆ. ಜನ ಆತಂಕದಲ್ಲಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು. ಕಾಯ್ದೆ ತಿದ್ದುಪಡಿ ಕೈಬಿಟ್ಟು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸಬೇಕು. ಧರ್ಮಾಂಧತೆಯ ಆಧಾರದ ಮೇಲೆ ಯಾವುದೇ ಕಾಯ್ದೆಗಳನ್ನು ರಚಿಸಬಾರದು ಎಂದು ಧರಣಿ ನಿರತರು ಆಗ್ರಹಿಸಿದರು. ದೇಶದ ಐಕ್ಯತೆಗೆ ಮಾರಕವಾಗಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ, ...
Read More »
C News TV Kannada News Online in cnewstv