ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಅವರು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಹೌದು ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಕಾಂತೇಶ್ ಅಭಿಮಾನಿಗಳು ಒತ್ತಾಯಿಸಲಾರಂಭಿಸಿದ್ದಾರೆ. ಈ ಬಗ್ಗೆ ಪೇಸ್ ಬುಕ್ ನಲ್ಲಿ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಕಾಂತೇಶಣ್ಣ ಎಂಬ ಪೇಜನ್ನು ಓಪನ್ ಮಾಡಿದ್ದಾರೆ. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ದಯವಿಟ್ಟು ಕಾಂತೇಶ್ ...
Read More »ಶಿವಮೊಗ್ಗ
ಮಹಾನಗರಪಾಲಿಕೆಯ ಆಯುಕ್ತೆ ಚಾರುಲತಾ ಸೋಮಲ್ ವರ್ಗಾವಣೆ ಮಾಡದಂತೆ ಕಾಂಗ್ರೆಸ್ ಜೆ.ಡಿ.ಎಸ್ ಪಾಲಿಕೆ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಜನಪರವಾಗಿ ದಕ್ಷ ಹಾಗೂ ನಿಷ್ಪಕ್ಷಪಾತವಾಗಿ ಸೇವೆಸಲ್ಲಿಸಿದ ಪಾಲಿಕೆ ಆಯುಕ್ತ ಚಾರುಲತಾ ಸೋಮನ್ ರವರ ವರ್ಗಾವಣೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಮಾಹಾನಗರಪಾಲಿಕೆ ಸದಸ್ಯ ರಮೇಶ್ ಹೆಗಡೆಯವರು. “ಸರ್ಕಾರ ದಿಢೀರನೆ ಈ ವರ್ಗಾವಣೆ ಮಾಡಿರುವುದು ಖಂಡನೀಯ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ರಹಿತ ಪಾರದರ್ಶಕ ಅಧಿಕಾರವನ್ನು ನೀಡುವುದಾಗಿ ಹೇಳಿದ್ರು ಆದರೆ ಇಂತಹ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡ್ತಾ ಇರೋದು ನೋಡಿದರೆ ಈ ಸರ್ಕಾರ ಭ್ರಷ್ಟಾಚಾರ ಪರವಾದ ಸರ್ಕಾರ ಎನಿಸುತ್ತಿದೆ.ಮುಖ್ಯಮಂತ್ರಿಗಳು ...
Read More »ಸಚಿವ ನಾಗೇಶ್ ಅಣಕು ಶವಯಾತ್ರೆ.
ಶಿವಮೊಗ್ಗ :ಬಂಜಾರ ತಾಂಡಗಳ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ನಾಗೇಶ್ ವಿರುದ್ಧ ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಬಸ್ ನಿಲ್ದಾಣದಿಂದ ಗೋಪಿವೃತ್ತದವರೆಗೆ ಸಚಿವ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ಸಚಿವ ನಾಗೇಶ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಗೇಶ್ ಬಂಜಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು ತಮಟೆ, ಚಟ್ಟದೊಂದಿಗೆ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದರು. ಬಳಿಕ ಗೋಪಿ ವೃತ್ತದಲ್ಲಿ ನಾಗೇಶ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದರು. ಬಳಿಕ ನಾಗೇಶ್ ...
Read More »ಮದ್ಯಪಾನ ಮಾಡಿದ್ದ ಕಾರು ಚಾಲಕನಿಗೆ ಬಿತ್ತು ಭಾರಿ ದಂಡ
ಶಿವಮೊಗ್ಗ: ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನೊಬ್ಬ ದೊಡ್ಡ ಮೊತ್ತದ ದಂಡ ಪಾವತಿಸಿದ್ದಾನೆ. ನೂತನ ವಾಹನ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಹೌದು ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬರು ಬರೋಬ್ಬರಿ 12 ಸಾವಿರ ರೂ. ದಂಡ ತೆತ್ತಿದ್ದಾರೆ. ಶಿಕಾರಿಪುರದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗದ 3ನೇ ಜೆಎಂಎಫ್‌ಸಿ ನ್ಯಾಯಾಲಯವು 12 ಸಾವಿರ ರೂ. ದಂಡ ವಿಧಿಸಿದೆ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ಸಂಚಾರ ಪೊಲೀಸರು ವಾಹನ ತಡೆದು ತಪಾಸಣೆ ...
Read More »ಪಾಲಿಕೆ ಸಭೆಯಲ್ಲಿ ವಾಕ್ಸಮರ
https://youtu.be/vqxYLZMLZpM ಶಿವಮೊಗ್ಗ: ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿಲ್ಲ ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ದಸರಾ ಆಚರಣೆ ಅಂಗವಾಗಿ ನಡೆದ ಪಾಲಿಕೆ ವಿಶೇಷ ಸಭೆಯ ಆರಂಭದಲ್ಲೇ ನೆರೆ ಸಂತ್ರಸ್ತರ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಮೊದಲು ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿ. ಈಗ ನೀಡುತ್ತಿರುವ ಪರಿಹಾರದಲ್ಲೂ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಸಂತ್ರಸ್ತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.. ...
Read More »ಬೈಕ್ ಲಾರಿ ಮುಖಾಮುಖಿ ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು
ಸಾಗರ : ತಾಳಗುಪ್ಪದ ಚೂರಿಕಟ್ಟೆ ಬಳಿ ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರರು ಸಿದ್ಧಾಪುರ ತಾಲ್ಲೂಕಿನ ಹೊಸೂರು ಗ್ರಾಮದವರು. ಸಂದೀಪ್(22),ವಿನಾಯಕ(25) ಮೃತ ಯುವಕರು. ಸಾಗರ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.. ಇಮ್ರಾನ್ ಸಾಗರ್ Contact For advertisement 7676236690
Read More »ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬುಧವಾರ ಸಂಜೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ದಿನನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.. Contact for Advertisement : 7676236690
Read More »ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ...
Read More »ಜಿಮ್ ಟ್ರೈನರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ವಿಫಸ್ಟ್ ಜಿಮ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಮ್ ಎದುರು ಪ್ರತಿಭಟನೆ ನಡೆಸಿದರು. ಜಿಮ್ ನ ಮಾಲೀಕ ಹಾಗೂ ಟ್ರೈನರ್ ಆಗಿರುವ ರಾಜ್ ಕದಂಬ ಎಂಬಾತ ಜಿಮ್ ಗೆ ಬರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಜಿಮ್ ನಲ್ಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ. ಈತನ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಮ್ ನ ಬಾಗಿಲು ಮುಚ್ಚಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವವನ್ನು ...
Read More »ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ: ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರಸರ್ಕಾರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮೇಲೆ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹಾಕುವ ಕೆಲಸ ಮಾಡುತ್ತಿದೆ. ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಒತ್ತಡ ಹೇರಿದೆ. ಕೇಂದ್ರ ಸರ್ಕಾರದ ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ದೇವೇಂದ್ರಪ್ಪ, ...
Read More »
C News TV Kannada News Online in cnewstv