ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು 18 ವರ್ಷದ ಸುನೈನಾ ಎಂಬ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ ನಗರದ ಚನ್ನಪ್ಪ ಲೇಔಟ್ ನಿವಾಸಿಯಾಗಿದ್ದು, ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಸಮೀಪದ ನಂಜಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..
Read More »ಶಿವಮೊಗ್ಗ
ಬೈಕ್ ಗೆ ಟೆಂಪೋ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು,
ಸಾಗರ ತಾಲ್ಲೂಕಿನ ಆವಿನಹಳ್ಳಿ ಸಮೀಪ ಕಾಗೇಹಳ್ಳ ಹೊಸೂರು ಬಳಿ ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಜೆಪಿ ನಗರದ ಓಂಕಾರ್(21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಂಬದಿ ಕುಳಿತಿದ್ದ ನಂದೀಶ್(13) ಹಾಗೂ ನಂದನ್(14) ಗೆ ತೀವ್ರ ಪೆಟ್ಟಾಗಿದೆ.. ವರದಿ: ಇಮ್ರಾನ್
Read More »ಶಿವಮೊಗ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿ ಅನುಮಾನಾಸ್ಪ ಸಾವು.
ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಅನುಮಾನಾಸ್ಪವಾಗಿ ಸಾವನ್ನಪ್ಪಿದ್ದಾನೆ. ಭದ್ರಾವತಿ ಮೂಲದ 30 ವರ್ಷದ ಖೈದಿ ಇರ್ಫಾನ್ ಮೃತಪಟ್ಟಿದ್ದು, ಇವನ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು ಹಾಗೂ ಹಲವು ಅಪರಾಧ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದ ಆರೋಪಿಯಾಗಿದ್ದ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.
Read More »ತಳ್ಳು ಗಾಡಿಗಳ ತೆರವು ವಿರೋಧಿಸಿ ಪ್ರತಿಭಟನೆ – ಟ್ರಾಫಿಕ್ ಜಾಮ್.
ಶಿವಪ್ಪನಾಯಕನ ವೃತ್ತದ ಸುತ್ತಮುತ್ತಲು ಹೂ, ಹಣ್ಣು-ತರಕಾರಿಗಳನ್ನು ಮಾರಾಟ ಮಾಡುವುದರಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮಾರಾಟ ಮಾಡಬೇಡಿ ಎಂದು ಪದೇಪದೇ ಹೇಳಿದರು ಸಹ ಮಾರಾಟ ಮಾಡುವುದನ್ನು ಬಿಟ್ಟಿಲ್ಲ. ಇದರಿಂದ ವಾಹನಗಳ ಸಂಚಾರಕ್ಕೆ ಹಾಗೂ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಸಂಚಾರಕ್ಕೆ ಅಡ್ಡಿಯಾಗಿದೆ ವ್ಯಾಪಾರಸ್ಥರನ್ನು ತೆರವುಗೊಳಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ವ್ಯಾಪಾರಿಗಳ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಣಾಮವಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಯಿತು.
Read More »ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ…
ಜಿಲ್ಲೆಯಲ್ಲಿ ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಲು, ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಬರಲಿರುವ ರಂಜಾನ್, ಗಣಪತಿ ಹಬ್ಬದಲ್ಲಿ ಯಾವುದೇ ರೀತಿಯಾದ ಅಹಿತಕರವಾದ ಘಟನೆಗಳು ನಡೆಯದಂದ್ದೆ ತಡೆಯುವ ಉದ್ದೇಶದಿಂದ ನಗರದ ಡಿಎಅರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪವಿಭಾಗ ವ್ಯಾಪ್ತಿಗೆ ಸುಮಾರು 1002 ರೌಡಿಗಳು ಇದ್ದು ಅವರ ಚಟುವಟಿಕೆ ಗಳ ಮೇಲೆ ತೀವ್ರಗಮನ ಹರಿಸಲಾಗಿದೆ. ಇನ್ನೂ ಮುಂದೆ ಕೂಡ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಇಲಾಖೆ ಸನ್ನದ್ದವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿಯವರು ತಿಳಿಸಿದರು..
Read More »ಮಲೆನಾಡಿನಲ್ಲಿ ಬರದ ಛಾಯೆ
ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರು ಶಿವಮೊಗ್ಗ ಜಿಲ್ಲೆಯಲ್ಲಿಯೇ ಈ ಬಾರಿ ಭೀಕರ ಬರಗಾಲದ ಛಾಯೆ ಕಾಣಿಸಿಕೊಂಡಿದೆ. ಜಿಲ್ಲೆಯ ಅರೆಮಲೆನಾಡು ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸೊರಬ ಹಾಗೂ ಶಿಕಾರಿಪುರ ತಾಲೂಕಿನ ಕೆಲ ಗ್ರಾಮಗಳ ಜನರು ಜೀವ ಜಲವನ್ನು ಅರಸಿ ಕಿಲೋಮೀಟರ್ ಗಟ್ಟಲೆ ಅಲೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆರೆಕಟ್ಟೆಗಳು ಸಂಪೂರ್ಣವಾಗಿ ಒಣಗಿದ್ದು ನೀರಿನ ಸೆಲೆಯೇ ಇಲ್ಲದ ಸ್ಥಿತಿ ನಿರ್ಮಾಣವಾಗಿದ್ದರಿಂದ ಜಾನುವಾರುಗಳ ಸ್ಥಿತಿ ಹೇಳತೀರದಾಗಿದೆ.. ಶಿವಮೊಗ್ಗ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಒಟ್ಟಾರೆ ...
Read More »ಆಯನೂರು ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸಾವು.
ಆಯನೂರು ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸಾವು ಆಯನೂರು ಹೊರವಲಯದ ಚಿಕ್ಕದಾನವಂದಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.ಇಂದು ಸಂಜೆ ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಶಿವಮೊಗ್ಗ ಮೂಲದ ಮೆಸ್ಕಾಂ ನಿವೃತ್ತ ಎಈಈ ಚಂದ್ರಪ್ಪ ಎಂಬುವವರ ಕುಟುಂಬಕ್ಕೆ ಎಂದು ಹೇಳಲಾಗಿದೆ. ಎಈಈ ಆಗಿದ್ದ ಚಂದ್ರಪ್ಪ, ಪತ್ನಿ ಮಂಗಳಾ, ಇವರ ಪುತ್ರ ಮಂಜುನಾಥ, ಅಳಿಯ ನೀಲಕಂಠ , ಪುತ್ರಿ ...
Read More »ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ .
ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ . ಹಿಂದಿನ ಕಾಲದಲ್ಲಿ ಮಣ್ಣಿನ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುವುದು ಮಣ್ಣಿನ ಮಡಿಕೆಯಲ್ಲಿ ನೀರು ಬಳಸುವುದು ಸಾಮಾನ್ಯವಾಗಿತ್ತು. ಆದರೆ ಬದಲಾದ ಕಾಲದಲ್ಲಿ ಮಣ್ಣಿನ ಪಾತ್ರೆಯ ಬಳಕೆ ಕಡಿಮೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಗಾಜು ಬಳಕೆಗೆ ಬಂದಿವೆ.. ಪ್ಲಾಸ್ಟಿಕ್ ಪಾತ್ರೆಯಲ್ಲಿ ನೀರು ತುಂಬಿಡುವುದರಿಂದ ರಾಸಾಯನಿಕಗಳು ಬಿಡುಗಡೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕೆಲವರು ನೀರನ್ನು ಫ್ರಿಡ್ಜ್ ನಲ್ಲಿಟ್ಟು ತಂಪು ಮಾಡಿ ಕುಡಿತಾರೆ ಅಂತಹವರಿಗೆ ಶೀತ ಗ್ಯಾರಂಟಿ..ಅದರೆ ನೈಸರ್ಗಿಕವಾಗಿರುವ ಮಣ್ಣಿನ ಮಡಿಕೆಯಲ್ಲಿ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮ. ಮಣ್ಣಿನ ...
Read More »ಶಿಮುಲ್ ಅಧಿಕಾರ ಕಾಂಗ್ರೆಸ್ ಹಾಗೂ ಜೆಡಿಎಸ್ ತೆಕ್ಕೆಗೆ.
ಶಿಮುಲ್ ಅಧಿಕಾರ ಕಾಂಗ್ರೆಸ್ ಹಾಗೂ ಜೆಡಿಎಸ್ ತೆಕ್ಕೆಗೆ. ಶಿವಮೊಗ್ಗದಲ್ಲಿ ಇಂದು ಬೆಳಿಗ್ಗಿನಿಂದಲೇ ಶಿಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದ್ದಿದ್ದು, ಸುಮಾರು ನಾಲ್ಕು ಗಂಟೆಯ ವೇಳೆಗೆ ಶಿಮೂಲ್ ಒಳಗಡೆ ಚುನಾವಣೆಯ ಮತದಾನ ಮುಗಿದು, ಮೂರು ವಿಭಾಗಗಳ ಮತಎಣಿಕೆಯಾಗಿ ಫಲಿತಾಂಶ ಪ್ರಕಟವಾಗಿವೆ.. ಶಿಮುಲ್ ನ 14 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ 10 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಬಿಜೆಪಿಯ 3 ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯ ಆಡಳಿತ ಮಂಡಳಿಯಲ್ಲಿದ್ದ 14 ನಿರ್ದೇಶಕರ ಪೈಕಿ 11 ಮಂದಿ ಸ್ಪರ್ಧಿಸಿದ್ದರು ಅದರಲ್ಲಿ ...
Read More »ಶಿಮೂಲ್ ನ ನಿರ್ದೇಶಕರ ಚುನಾವಣೆಯಲ್ಲಿ ಲಘು ಲಾಠಿ ಪ್ರಹಾರ
ಶಿವಮೊಗ್ಗದಲ್ಲಿ ಇಂದು ಬೆಳಿಗ್ಗಿನಿಂದಲೇ ಶಿಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಮತದಾರರಿಗೆ ಮತದಾನಕ್ಕೆ ಹಣ ಮತ್ತು ಬಂಗಾರದ ಆಮಿಷಗಳನ್ನು ನೀಡಿದ್ದರು ಎನ್ನಲಾಗಿದ್ದು, ಇದೆ ಸಂಬಂಧ ಅಭ್ಯರ್ಥಿಗಳ ಬೆಂಬಲಿಗರ ನಡುವಿನ ಜಗಳ ಮುಗಿಲು ಮುಟ್ಟಿತ್ತು.. ದಾವಣಗೆರೆಯ ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಆಭ್ಯರ್ಥಿಗಳ ಬೆಂಬಲಿಗರರ ನಡುವಿನ ಜಗಳ ತಾರಕಕ್ಕೇರಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಬೆಂಬಲಿಗರ ಗುಂಪಿನ ನಡುವಿನ ಜಗಳವನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು..
Read More »
C News TV Kannada News Online in cnewstv