cnewstv | 06.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಗ್ಗಾನ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ.. ಶಿವಮೊಗ್ಗ : ಇಂದು ಬೆಳಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬೇಟಿ ನೀಡಿ ಪೌರಕಾರ್ಮಿಕ ಮೂರ್ತಿ ಯವರ ಆರೋಗ್ಯ ವಿಚಾರಣೆ ಮಾಡಿದ್ದರು.. ಮಾಜಿ ಕಾರ್ಪೊರೇಟರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕ ಮೂರ್ತಿ ಆತ್ಮಹತ್ಯೆಗೆ ಯತ್ನಿಸಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸಂತೋಷ್ ಲಾಡ್ ಮೂರ್ತಿ ಯವರ ಆರೋಗ್ಯ ವಿಚಾರಿಸಿ, ಬುದ್ದಿ ...
Read More »ಶಿವಮೊಗ್ಗ
ಹಿರಿಯ ಸಾಹಿತಿ ನಾ.ಡಿಸೋಜ ನಿಧನ : ಬೇಳೂರು ಸಂತಾಪ
ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು,ಮಂಗಳೂರಿನ ಫಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು ಸಂಜೆ 7.30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ನವೀನ್, ಸಾಮಾಜಿಕ ಜಾಲತಾಣ ಹಾಗೂ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಜತೆಗೆ ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಕೂಡ ಆಗಿದ್ದರು. ಸೋಮವಾರ ಪೂರ್ತಿ ದಿನ ಸಾಹಿತಿ ನಾ.ಡಿಸೋಜ ...
Read More »ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು..
cnewstv | 04.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು.. ಶಿವಮೊಗ್ಗ : ನಗರದ ಬೆಕ್ಕಿನ ಕಲ್ಮಠದ ಹಿರಿಯ ಜಗದ್ಗುರು ಶ್ರೀ ಗುರುಬಸವ ಮಹಾಶಿವಯೋಗಿಗಳ 113ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಾಗರೀಕರಿಗೆ ವಿವಿಧ ಸ್ಪರ್ಧೆಗಳನ್ನು ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ್ಷೆ ದಿವ್ಯ ಪ್ರೇಮ್ ತಿಳಿಸಿದರು. ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ...
Read More »ಎಂಎಸ್ಪಿ ಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ
ಶಿವಮೊಗ್ಗ: ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಒತ್ತಾಯಿಸಿದೆ. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಎಂ ಎಸ್ ಪಿ ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡಬೇಕು ಹಾಗೂ ವಿದ್ಯುತ್ ಶಕ್ತಿ ಖಾಸಗಿಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ರೈತರು ಈ ಹಿಂದೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಲಿಖಿತ ಭರವಸೆ ಸಹ ನೀಡಿತ್ತು. ಭರವಸೆ ನೀಡಿ ...
Read More »ಕಾರು – ಬಸ್ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು
ಶಿವಮೊಗ್ಗ: ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದ್ದು, ಮೃತರ ವಿವರ ...
Read More »ತುಂಗಾ ಚಾನಲ್ ನಲ್ಲಿ ಈಜಲು ಹೋಗಿದ್ದ ಬಾಲಕ ಸಾವು
ಶಿವಮೊಗ್ಗ: ಕಲ್ಲೂರು ಮಂಡ್ಲಿ ಸಮೀಪದ ಬಂಡೆ ಕಲ್ಲೂರು ತುಂಗಾ ಚಾನಲ್ ನಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹಳೇ ಮಂಡ್ಲೀ ನಿವಾಸಿ ಮೋಹಿತ್(15) ಮೃತ ಬಾಲಕ. ಬುಧವಾರ ಸ್ನೇಹಿತರೊಂದಿಗೆ ಈಜಲು ಹೋದಾಗ ಚಾನಲ್ ನಲ್ಲಿ ಮೋಹಿತ್ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಬುಧವಾರ ಸಂಜೆಯಿಂದ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಸಂಜೆ ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆಯಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಟಿಟಿ – ಜೀಪ್ ನಡುವೆ ಢಿಕ್ಕಿ- ದೇವರ ದರ್ಶನಕ್ಕೆ ಬಂದವರಿಗೆ ಆಘಾತ
ಶಿವಮೊಗ್ಗ: ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಹಾಗೂ ಕೊಲ್ಲೂರಿಗೆ ತೆರಳುತ್ತಿದ್ದ ಟಿಟಿ ನಡುವೆ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಿಟ್ಟೂರಿನಲ್ಲಿ ನಡೆದಿದೆ. ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, 8 ಜನರು ಗಾಯಗೊಂಡಿದ್ದಾರೆ. ದೇವರ ದರ್ಶನಕ್ಕೆ ಬಂದವರಿಗೆ ಅಪಘಾತ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿ, ಕೊಡಚಾದ್ರಿ ಪ್ರವಾಸಕ್ಕೆ 8 ಜನರು ಜೀಪ್ ನಲ್ಲಿ ತೆರಳುತ್ತಿದ್ದರು. ಇನ್ನೋಂಡೆದೆ ಶಿವಮೊಗ್ಗದಿಂದ ಟಿಟಿಯಲ್ಲಿ ಕೊಲ್ಲೂರು ಹಾಗೂ ಸಿಗಂದೂರು ದೇವಿಯ ದರ್ಶನಕ್ಕೆ ಹೊರಟ್ಟಿದ್ದರು. ಈ ನಡುವೆ ಮರಕುಟಿಗ ಬಳಿ ಅಪಘಾತ ನಡೆದಿದ್ದು, ಜೀಪ್ ...
Read More »ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಈಶ್ವರಪ್ಪ ಬಂಧನ
ಶಿವಮೊಗ್ಗ: 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಇ- ಖಾತೆಯೊಂದನ್ನ ಮಾಡಿಕೊಡಲು 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂಡುವಳ್ಳಿ ಗ್ರಾಮದ ಮಹಮ್ಮದ್ ಗೌಸ್ ಎಂಬವರು ತಮ್ಮ ತಂದೆಯ ಹೆಸರಿನಲ್ಲಿದ್ದ ಮನೆಯ ಖಾತೆಯನ್ನು ತಾಯಿಯ ಹೆಸರಿಗೆ ಬದಲಾಯಿಸಲು, ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಬೇಕಿದ್ದ ಪಿಡಿಓ ಈಶ್ವರಪ್ಪ ವಿಳಂಬ ಮಾಡುತ್ತಿದ್ದರಲ್ಲದೇ, ಲಂಚಕ್ಕೆ ಸಹ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು ಬೆಳಿಗ್ಗೆ ...
Read More »ಶಿವಣ್ಣಗಾಗಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ವಿಶೇಷ ಪೂಜೆ
ಶಿವಮೊಗ್ಗ: ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಶೀಘ್ರವೇ ಗುಣಮುಖರಾಗಿ, ರಾಜ್ಯಕ್ಕೆ ಮರಳಲಿ ಎಂದು ಶಿವಮೊಗ್ಗದಲ್ಲಿಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ. ಚಿಕಿತ್ಸೆಗಾಗಿ ಕಳೆದ ವಾರ ಅಮೇರಿಕಾಕ್ಕೆ ತೆರಳಿರುವ ಶಿವಣ್ಣ, ಜನವರಿ ತಿಂಗಳ ಅಂತ್ಯದಲ್ಲಿ ರಾಜ್ಯಕ್ಕೆ ವಾಪಸ್ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ...
Read More »ಬಸ್ ಹಾಗೂ ಬೈಕ್ ಢಿಕ್ಕಿ: ಇಬ್ಬರು ಯುವಕರು ಸಾವು
ಶಿವಮೊಗ್ಗ: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಇಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೂರ್ವ ...
Read More »
C News TV Kannada News Online in cnewstv