Monthly Archives: October 2018

ಸಾಗುವಾನಿ ದಿಮ್ಮಿ ಸಾಗಿಸುವವರು ಗ್ರಾಮಸ್ಧರ ವಶಕ್ಕೆ

ಸಾಗುವಾನಿ ಮರದ ದಿಮ್ಮಿ ಗಳನ್ನು ಉಂಬಳೇಬೈಲ್ ಅರಣ್ಯ ಇಲಾಖೆ ಯಿಂದ ವ್ಯಾಗನಾರ್ ಕಾರನಲ್ಲಿ (  KA 34 M 2972  )ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮದ ಜನರೇ ಕಾರಿನ ಸಮೇತ ಅರೋಪಿಗಳನ್ನು ಹಿಡಿದು ಪೋಲಿಸರ ಹಾಗು ಅರಣ್ಯ ಅಧಿಕಾರಗಳ ವಶಕ್ಕೆ ಒಪ್ಪಿಸಿದ್ದಾರೆ

Read More »

ಇಂದಿನಿಂದಲೇ ನೀತಿ ಸಂಹಿತೆ ಜಾರಿ- ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೇಯಲ್ಲೇ , ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಈಗಾಗಲೇ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜಕೀಯ ಪಕ್ಷಗಳು, ವ್ಯಕ್ತಿಗಳ ಪ್ರಚಾರದ ಬ್ಯಾನರ್, ಪೋಸ್ಟರ್ ಇತ್ಯಾದಿಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಲು ಸೂಚನೆ ನೀಡಲಾಗಿದ್ದು, ಕಾರ್ಯ ಆರಂಭಿಸಲಾಗಿದೆ. ರಾಜಕೀಯ ಪಕ್ಷಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಪೂರ್ವದಲ್ಲಿ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ..ಮಾದರಿ ನೀತಿ ಸಂಹಿತೆ ಜಾರಿಗಾಗಿ ಈಗಾಗಲೇ ತಂಡಗಳನ್ನು ರಚಿಸಲಾಗಿದೆ. 162 ಸೆಕ್ಟರ್ ಅಧಿಕಾರಿಗಳು, 9 ಅಕೌಂಟಿಂಗ್ ತಂಡಗಳು, 39 ...

Read More »

ಲೋಕಸಭೆ ಹಾಗು ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ

ರಾಜ್ಯದಲ್ಲಿನ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ ಹಾಗು ನ. 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್,ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.. ಅ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 17ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು. ಅ. 20ರಂದು ...

Read More »

ಬಿ.ಎಸ್.ವೈ ಮಗನ‌ಪರ ಪ್ರಚಾರು ಶುರು

ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗುತ್ತಿದಂತೆ ಬಿ.ಎಸ್’ವೈ ಮಗನ‌ಪರ ಪ್ರಚಾರು ಶುರುಮಾಡಿದ್ದಾರೆ.ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆ ಚಾಲನೆ ನೀಡಿದ ಅವರು ಇಂದು ಚುನಾವಣೆ ದಿನಾಂಕ ಘೋಷಣೆ ನೀಡುತ್ತಿದ್ದಂತೆ .ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ ಬಿ ವೈ ರಾಘವೇಂದ್ರ ಅವರನ್ನು ಮತ್ತೋಮ್ಮೆ ಸಂಸದರಾಗಿ ಆಯ್ಕೆ ಮಾಡಲು ಜನತೆ ಮನವಿ ಮಾಡಿದರು.

Read More »

ಬೆಂಗಳೂರು-ಶಿವಮೊಗ್ಗ ಇಂಟರ್ ಸಿಟಿ ರೈಲಿನ ಸಂಚಾರವನ್ನು ತಾಳಗುಪ್ಪದವರೆಗೆ ವಿಸ್ತರಣೆ..ರೈಲ್ವೆ ಇಲಾಖೆ ಆದೇಶ..

ಚುನಾವಣಾ ಸಮಯದಲ್ಲಿ ಸಾಗರಕ್ಕೆ ಆಗಮಿಸಿದ್ದ ಕೇಂದ್ರ ಸಂಪರ್ಕ ಮತ್ತು ಸಂವಹನ ಹಾಗೂ ರೈಲ್ವೆ ರಾಜ್ಯ ಸಚಿವ ಮನೋಜ್ ಕುಮಾರ್ ಸಿನ್ಹಾ ಅವರಿಗೆ ಪ್ರಯಾಣಿಕರ ಹಿತ ದೃಷ್ಟಿಯಿಂದ ಶಿವಮೊಗ್ಗ – ಬೆಂಗಳೂರು ಇಂಟರ್ಸಿಟಿ ರೈಲ್ವೆ ಸಂಪರ್ಕವನ್ನು ತಾಳುಗುಪ್ಪಕ್ಕೆ ವಿಸ್ತರಿಸುವಂತೆ ಮನವಿ ಸಲ್ಲಿಸಲಾಗಿತ್ತು ನಂತರ ಯಡಿಯೂರಪ್ಪ ನವರ ನೇತೃತ್ವದಲ್ಲಿ 8-8-2018 ರಂದು ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸೂಕ್ತ ವಾಗಿ ಸ್ಪಂದಿಸಿದ ಸಚಿವರು ಇಂದು ತಾಳುಗುಪ್ಪಕ್ಕೆ ಇಂಟರ್ಸಿಟಿ ರೈಲ್ವೆ ಸಂಪರ್ಕ ವಿಸ್ತರಿಸಿ ಆದೇಶ ಹೊರಡಿಸಿರುತ್ತಾರೆ.ಬೆಂಗಳೂರು-ಶಿವಮೊಗ್ಗ ಇಂಟರ್ ಸಿಟಿ ರೈಲಿನ ಸಂಚಾರವನ್ನು ತಾಳಗುಪ್ಪದವರೆಗೆ ವಿಸ್ತರಣೆ..ರೈಲ್ವೆ ...

Read More »

ನಾಳೆಯಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ನಾಳೆಯಿಂದ ರಾಜ್ಯದ ದಕ್ಷಿಣ ಒಳನಾಡಿನ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ನಾಳೆಯಿಂದ ಒಂದೆರೆಡು ದಿನಗಳ ಕಾಲ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದಿಂದ ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ತಿಳಿದು ಬಂದಿದೆ.

Read More »

ಮಾಜಿ ಸಂಸದ ಬಿ.ವೈ.ರಾಘವೇಂದ್ರ ವಿರುದ್ದ ತೀ.ನಾ. ಶ್ರೀನಿವಾಸ್ ಲೇವಡಿ

ಅಪ್ಪ ಮಕ್ಕಳು ನೀವಿಬ್ಬರೂ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ನಾನು ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮಾತುಗಳನ್ನೇ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದೇನೆ. ನಿಮ್ಮಿಂದ ಏನೂ ಆಗಿಲ್ಲ. ಇನ್ನು ತುಮರಿ ಸೇತುವೆಗೆ ಸಂಬಂಧಿಸಿದಂತೆ ಇವತ್ತೂ ಹೇಳುತ್ತೇನೆ. ಅದಕ್ಕೆ ಆಡಳಿತಾತ್ಮಕ ಅನುಮೋದನೆಯಿರಲಿ ಅದರ ನೀಲನಕ್ಷೆಯೇ ಇನ್ನೂ ಸಿದ್ಧವಾಗಿಲ್ಲ. ಅಂದಾಜು ವೆಚ್ಚವೂ ಇಲ್ಲ. ಇದನ್ನು ರಾಘವೇಂದ್ರ ಅವರೇ ಒಪ್ಪಿಕೊಳ್ಳುತ್ತಾರೆ. ಅವರು ಹೇಳಿದಂತೆ ನಿರ್ಮಾಣ ವೆಚ್ಚ ಕಡಿತಗೊಳಿಸಿರುವುದು ದೆಹಲಿ ಕಛೇರಿಯಲ್ಲಿಯಲ್ಲ. ಬೆಂಗಳೂರಿನ ಇವರ ಕಛೇರಿಯಲ್ಲಿ. ದೆಹಲಿಯ ಅಧಿಕಾರಿಗಳು ಇದನ್ನು ಸುತಾರಾಂ ಒಪ್ಪಿಲ್ಲ. ಕೇಂದ್ರ ಸಚಿವ ...

Read More »

ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ

ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಅವರು ನಿನ್ನೆ ನಿಧಿಗೆ ಹೋಬಳಿಯ ದುಮ್ಮಳ್ಳಿ, ಮಲವಗೊಪ್ಪ ಗ್ರಾಮಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಯನ್ನು ಪ್ರಾಯೋಗಿಕವಾಗಿ ನಡೆಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರು, ಪಿ.ಡಿ.ಒ.ಗಳು, ತಹಶೀಲ್ದಾರ್ ಸತ್ಯನಾರಾಯಣ, ಉಪತಹಶೀಲ್ದಾರ್ ಪ್ರದೀಪ್ ಆರ್.ನಿಕ್ಕಂ ಸೇರಿದಂತೆ ಆ ಭಾಗದ ರೈತರು ಉಪಸ್ಥಿತರಿದ್ದರು.

Read More »

ವಿವಿಧ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 04 : (ಕರ್ನಾಟಕ ವಾರ್ತೆ) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಪ್ರಸ್ತಾವನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31ರೊಳಗಾಗಿ www.karepass.cgg.gov.in ಮತ್ತು www.backwardclasses.kar.nic.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ...

Read More »

ಭಾರತ -ರಷ್ಯಾ ಒಪ್ಪಂದ: ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ ಅಮೇರಿಕಾ

ವಾಷಿಂಗ್ಟನ್/ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಎರಡು ದಿನಗಳ ಭೇಟಿಗಾಗಿ ಇಂಂಂದು ಭಾರತಕ್ಕೆ ಅಗಮಿಸುತ್ತಿದ್ದು ಈ ಸಂದರ್ಭದಲ್ಲಿ ಎಸ್‌-400 ವಾಯು ಪ್ರದೇಶ ರಕ್ಷಣಾ ವ್ಯವಸ್ಥೆ ಕುರಿತು ಭಾರತ-ರಷ್ಯಾ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಆದರೆ ಈ ಒಪ್ಪಂದದ ಬಗ್ಗೆ ಅಮೆರಿಕ ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ನಮ್ಮೊಂದಿಗೆ ಮೈತ್ರಿ ಹೊಂದಿರುವ ರಾಷ್ಟ್ರಗಳು ರಷ್ಯಾದೊಂದಿಗೆ ಒಪ್ಪಂದ ಮಾಡುವುದು ಬೇಡ ಎಂದು ಅಮೆರಿಕ ಮುನ್ನೆಚ್ಚರಿಕೆ ನೀಡಿದೆ. 19ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments