ರಾಷ್ಟ್ರೀಯ ಬಸವ ದಳದ ಅಧ್ಯಕ್ಷೆ ಹಾಗೂ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಒಂದು ವಾರದಿಂದ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನಿಂದ ಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಲಿಂಗೈಕ್ಯರಾಗಿದ್ದಾರೆ. ಅವರ ಎರಡು ಕಿಡ್ನಿಗಳ ಕಾರ್ಯ ಸ್ಥಗಿತಗೊಂಡಿರುವುದರಿಂದ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ..
Read More »Monthly Archives: March 2019
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ – ಕೆ ಎ ದಯಾನಂದ
ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪಕ್ಷದವರಿಗೆ ಖಡಕ್ ವಾರ್ನಿಂಗ್ *ನೀತಿ ಸಂಹಿತೆ ಅನ್ವಯ ಹೊಸದಾಗಿ ಯಾವುದೇ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವಂತಿಲ್ಲ. *ಯಾವುದೇ ಯೋಜನೆಗಳ ಫಲಾನುಭವಿಗಳ ಆಯ್ಕೆ ಅಥವಾ ಸೌಲಭ್ಯಗಳ ವಿತರಣೆ ಮಾಡುವಂತಿಲ್ಲ. *ಎಲ್ಲಾ ರಾಜಕೀಯ ಜಾಹೀರಾತು ಫಲಕಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಬೇಕು. * ನೀತಿ ಸಂಹಿತೆಯನ್ನು ಉಲ್ಲಂಘಿಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಹ ...
Read More »ಲೋಕಸಭಾ ಚುನಾವಣೆಗೆ ಮಹೂರ್ತ ಫಿಕ್ಸ್
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠೀಯಲ್ಲಿ 17ನೆಯ ಲೋಕಸಭಾ ಚುನಾವಣೆಯ ವೇಳಪಟ್ಟಿ ಘೋಷಣೆ ಮಾಡಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದರು. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23 ರಂದು ಎರಡು ಹಂತದ ಮತದಾನ. ಮೇ 23ಕ್ಕೆ ಫಲಿತಾಂಶ ಪ್ರಕಟಣೆ. ಈಗಿನ ನಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ...
Read More »ಮಂಗನ ಕಾಯಿಲೆ ಪೀಡಿತರನ್ನು ಭೇಟಿ ಮಾಡಿದ ಹರತಾಳು ಹಾಲಪ್ಪ.
ಮಲೆನಾಡು ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಲಗೋಡು ಗ್ರಾಪಂ ವ್ಯಾಪ್ತಿಯ 23 ಕ್ಕೂ ಹೆಚ್ಚು ರೋಗ ಪೀಡಿತರು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದು ಇವರನ್ನು ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಭೇಟಿ ಮಾಡಿದರು. ಹಾಗು ವೈದ್ಯರಿಂದ ಇವರ ಆರೋಗ್ಯ ಮಾಹಿತಿಯನ್ನು ಪಡೆದುಕೊಂಡರು..
Read More »ಎಸಿಬಿ ಬಲೆಗೆ ಬಿದ್ದ ಪಿಡಿಒ.
ವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮಪಂಚಾಯತ್ ಪಿಡಿಒ ಶಾರದಾ ಬಾಯಿ ಮ್ಯಾಗಿನ ಮನಿ ಅಂಬೇಡ್ಕರ್ ಅವಾಸ್ ಯೋಜನೆಯ ಮನೆ ನಿರ್ಮಾಣಕ್ಕೆ ಹಣದ ಅಮಿಷ ಒಡ್ಡಿದ್ದರು. ೨ ನೇ ಹಂತದ ಬಿಲ್ ಪಾಸ್ ಮಾಡಲು ೫ ಸಾವಿರ ಹಣಕ್ಕೆ ಬೇಡಿಕೆಯನ್ನು ಸೇವಾಲಾಲ್ ನಗರ ನಿವಾಸಿ ಚಂದ್ರ ನಾಯ್ಕ್ ಎಂಬುವವರಿಗೆ ನೀಡಿದ್ದರು. ಇಂದು ೨ ಸಾವಿರ ಹಣ ಪಡೆಯುವಾಗ ಎಸಿಬಿ ಅಧಿಕಾರಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆಸಿದ್ದಾಗ ಸಿಕ್ಕಿಬಿದ್ದಿದ್ದಾರೆ.
Read More »
Recent Comments