ಆಯನೂರು ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸಾವು ಆಯನೂರು ಹೊರವಲಯದ ಚಿಕ್ಕದಾನವಂದಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.ಇಂದು ಸಂಜೆ ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಶಿವಮೊಗ್ಗ ಮೂಲದ ಮೆಸ್ಕಾಂ ನಿವೃತ್ತ ಎಈಈ ಚಂದ್ರಪ್ಪ ಎಂಬುವವರ ಕುಟುಂಬಕ್ಕೆ ಎಂದು ಹೇಳಲಾಗಿದೆ. ಎಈಈ ಆಗಿದ್ದ ಚಂದ್ರಪ್ಪ, ಪತ್ನಿ ಮಂಗಳಾ, ಇವರ ಪುತ್ರ ಮಂಜುನಾಥ, ಅಳಿಯ ನೀಲಕಂಠ , ಪುತ್ರಿ ...
Read More »Monthly Archives: April 2019
ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ .
ನ್ಯಾಚುರಲ್ ಫಿಲ್ಟರ್ : ದೇಹಕ್ಕೂ ತಂಪು – ನೋ ಸೈಡ್ ಎಫೆಕ್ಟ್ . ಹಿಂದಿನ ಕಾಲದಲ್ಲಿ ಮಣ್ಣಿನ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುವುದು ಮಣ್ಣಿನ ಮಡಿಕೆಯಲ್ಲಿ ನೀರು ಬಳಸುವುದು ಸಾಮಾನ್ಯವಾಗಿತ್ತು. ಆದರೆ ಬದಲಾದ ಕಾಲದಲ್ಲಿ ಮಣ್ಣಿನ ಪಾತ್ರೆಯ ಬಳಕೆ ಕಡಿಮೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಗಾಜು ಬಳಕೆಗೆ ಬಂದಿವೆ.. ಪ್ಲಾಸ್ಟಿಕ್ ಪಾತ್ರೆಯಲ್ಲಿ ನೀರು ತುಂಬಿಡುವುದರಿಂದ ರಾಸಾಯನಿಕಗಳು ಬಿಡುಗಡೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕೆಲವರು ನೀರನ್ನು ಫ್ರಿಡ್ಜ್ ನಲ್ಲಿಟ್ಟು ತಂಪು ಮಾಡಿ ಕುಡಿತಾರೆ ಅಂತಹವರಿಗೆ ಶೀತ ಗ್ಯಾರಂಟಿ..ಅದರೆ ನೈಸರ್ಗಿಕವಾಗಿರುವ ಮಣ್ಣಿನ ಮಡಿಕೆಯಲ್ಲಿ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮ. ಮಣ್ಣಿನ ...
Read More »ಶಿಮುಲ್ ಅಧಿಕಾರ ಕಾಂಗ್ರೆಸ್ ಹಾಗೂ ಜೆಡಿಎಸ್ ತೆಕ್ಕೆಗೆ.
ಶಿಮುಲ್ ಅಧಿಕಾರ ಕಾಂಗ್ರೆಸ್ ಹಾಗೂ ಜೆಡಿಎಸ್ ತೆಕ್ಕೆಗೆ. ಶಿವಮೊಗ್ಗದಲ್ಲಿ ಇಂದು ಬೆಳಿಗ್ಗಿನಿಂದಲೇ ಶಿಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದ್ದಿದ್ದು, ಸುಮಾರು ನಾಲ್ಕು ಗಂಟೆಯ ವೇಳೆಗೆ ಶಿಮೂಲ್ ಒಳಗಡೆ ಚುನಾವಣೆಯ ಮತದಾನ ಮುಗಿದು, ಮೂರು ವಿಭಾಗಗಳ ಮತಎಣಿಕೆಯಾಗಿ ಫಲಿತಾಂಶ ಪ್ರಕಟವಾಗಿವೆ.. ಶಿಮುಲ್ ನ 14 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ 10 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಬಿಜೆಪಿಯ 3 ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯ ಆಡಳಿತ ಮಂಡಳಿಯಲ್ಲಿದ್ದ 14 ನಿರ್ದೇಶಕರ ಪೈಕಿ 11 ಮಂದಿ ಸ್ಪರ್ಧಿಸಿದ್ದರು ಅದರಲ್ಲಿ ...
Read More »ಶಿಮೂಲ್ ನ ನಿರ್ದೇಶಕರ ಚುನಾವಣೆಯಲ್ಲಿ ಲಘು ಲಾಠಿ ಪ್ರಹಾರ
ಶಿವಮೊಗ್ಗದಲ್ಲಿ ಇಂದು ಬೆಳಿಗ್ಗಿನಿಂದಲೇ ಶಿಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಮತದಾರರಿಗೆ ಮತದಾನಕ್ಕೆ ಹಣ ಮತ್ತು ಬಂಗಾರದ ಆಮಿಷಗಳನ್ನು ನೀಡಿದ್ದರು ಎನ್ನಲಾಗಿದ್ದು, ಇದೆ ಸಂಬಂಧ ಅಭ್ಯರ್ಥಿಗಳ ಬೆಂಬಲಿಗರ ನಡುವಿನ ಜಗಳ ಮುಗಿಲು ಮುಟ್ಟಿತ್ತು.. ದಾವಣಗೆರೆಯ ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಆಭ್ಯರ್ಥಿಗಳ ಬೆಂಬಲಿಗರರ ನಡುವಿನ ಜಗಳ ತಾರಕಕ್ಕೇರಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಬೆಂಬಲಿಗರ ಗುಂಪಿನ ನಡುವಿನ ಜಗಳವನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು..
Read More »ಫೂನಿ ‘ ಸೈಕ್ಲೋನ್ ಎಚ್ಚರ ನೀಡಿದ ಭಾರತ ಹವಾಮಾನ ಇಲಾಖೆ
ಬಂಗಾಳಕೊಲ್ಲಿ ಸಮುದ್ರ ಮಧ್ಯಭಾಗದಲ್ಲಿ ವಾಯುಭಾರ ಕುಸಿತದಿಂದ ಫೋನಿ ಸೈಕ್ಲೋನ್ ಉಂಟಾಗಿ ಇದು ಚಂಡಮಾರುತವಾಗಿ ಪರಿವರ್ತನೆಗೊಂಡು ಸುಮಾರು ಸಾವಿರ ಕಿಲೋಮೀಟರ್ ವೇಗದಲ್ಲಿ ದೇಶದ ಪೂರ್ವ ದಕ್ಷಿಣ ಭಾಗದಲ್ಲಿ ಸಂಚರಿಸಿ ಆಂಧ್ರ ಮತ್ತು ತಮಿಳುನಾಡಿನ ಸಮುದ್ರದ ಹತ್ತಿರಕ್ಕೆ ಸೇರುವ ಸಾಧ್ಯತೆಗಳು ಇರುವುದಾಗಿ ಭಾರತ ಹವಾಮಾನ ಇಲಾಖೆಯು ಸಂದೇಶವನ್ನು ರವಾನಿಸಿದ್ದು, ಹವಾಮಾನ ವೈಪರೀತ್ಯಗಳು ಉಂಟಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯ ಗಂಟೆಯನ್ನು ಸಾರ್ವಜನಿಕರಿಗೆ ನೀಡಿದೆ..
Read More »ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಚಲಾಯಿಸಿದರು. ...
Read More »ಮಾಜಿ ಶಾಸಕ ಅಪ್ಪಾಜಿ ಗೌಡರಿಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಐಟಿ ದಾಳಿ.
ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...
Read More »ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ..
ಕೊಲಂಬೋ : ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೇರಿದೆ. ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್‌ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್‌ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ.
Read More »justice for madhu ಅಭಿಯಾನಕ್ಕೆ ಸ್ಯಾಂಡಲ್ ವುಡ್ ತಾರೆಯರ ಬೆಂಬಲ..
ರಾಯಚೂರಿ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನಾ ಅನುಮಾನಾಸ್ಪದ ಸಾವಿಗೆ ನ್ಯಾಯ ಸಿಗಬೇಕು. ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನುಬದ್ಧವಾಗಿ ಶಿಕ್ಷೆಯಾಗಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. justice for madhu ಹೆಸರಿನಲ್ಲಿ ಅಭಿಯಾನವು ಸಹ ನಡೆಯುತ್ತಿದೆ. ಇದಕ್ಕೆ ಸ್ಯಾಂಡಲ್ ವುಡ್ ತಾರೆಯರು ಸಹ ಬೆಂಬಲ ಸೂಚಿಸುತ್ತಿದ್ದಾರೆ…ಹಲವು ನಟ- ನಟಿಯರು ಕೃತ್ಯವನ್ನ ಖಂಡಿಸಿದ್ರು. ಮಧು ಸಾವಿನ ತನಿಖೆ ಅತೀ ಶೀಘ್ರದಲ್ಲಿ ಆಗಬೇಕು..ಅತ್ಯಾಚಾರ ಹಾಗೂ ಕೊಲೆಯ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ರೂಪುಗೊಳ್ಳಬೇಕು ಎಂದು ದರ್ಶನ್ ಟ್ವೀಟ್ ಕೂಡ ಮಾಡಿದ್ದಾರೆ. ಇವತ್ತು ನಟಿ ಹರ್ಷಿಕಾ ಪೂಣಚ್ಚ ...
Read More »ಬಿಜೆಪಿಗೆ ಡಿಕೆಶಿ ಶಾಕ್ – ಒಂದಾದ ಅಪ್ಪಾಜಿ ಗೌಡ ಸಂಗಮೇಶ್
ಶಿವಮೊಗ್ಗ ಜಿಲ್ಲೆ ಭದ್ರಾವತಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ರಾಜಕೀಯದಲ್ಲಿ ಬದ್ಧ ವೈರಿಗಳಾಗಿದ್ದ ಜೆಡಿಎಸ್ ಮುಖಂಡ ಮಾಜಿ ಶಾಸಕ ಅಪ್ಪಾಜಿಗೌಡ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಸಂಗಮೇಶ್ ಇಬ್ಬರನ್ನು ಕೂಡ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಒಂದುಗೂಡಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಏಕೆಂದರೆ ಬಿಜೆಪಿಯು ಅತಿ ಹೆಚ್ಚು ಮತಗಳ ನಿರೀಕ್ಷೆಯನ್ನು ಭದ್ರಾವತಿ ಕ್ಷೇತ್ರದಿಂದ ಹೊಂದಿತ್ತು. ಇದೇ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮೈತ್ರಿ ಧರ್ಮ ಪಾಲನೆಗಾಗಿ ಇಬ್ಬರು ನಾಯಕರು ಒಂದಾಗಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಗೆಲುವಿಗೆ ಇವರಿಬ್ಬರೂ ಸಹ ...
Read More »
Recent Comments