Breaking News

Monthly Archives: August 2019

ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ...

Read More »

ಜಿಮ್ ಟ್ರೈನರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ವಿಫಸ್ಟ್ ಜಿಮ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಮ್ ಎದುರು ಪ್ರತಿಭಟನೆ ನಡೆಸಿದರು. ಜಿಮ್ ನ ಮಾಲೀಕ ಹಾಗೂ ಟ್ರೈನರ್ ಆಗಿರುವ ರಾಜ್ ಕದಂಬ ಎಂಬಾತ ಜಿಮ್ ಗೆ ಬರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಜಿಮ್ ನಲ್ಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ. ಈತನ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಮ್ ನ ಬಾಗಿಲು ಮುಚ್ಚಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವವನ್ನು ...

Read More »

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರಸರ್ಕಾರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮೇಲೆ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹಾಕುವ ಕೆಲಸ ಮಾಡುತ್ತಿದೆ. ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಒತ್ತಡ ಹೇರಿದೆ. ಕೇಂದ್ರ ಸರ್ಕಾರದ ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ದೇವೇಂದ್ರಪ್ಪ, ...

Read More »

ರೋಟಾ ವೈರಸ್ ಲಸಿಕೆ ಎಲ್ಲಾ ಮಕ್ಕಳಿಗೆ ಹಾಕಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆಯನ್ನು ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಟಾನ ಕುರಿತು ಸಭೆ ನಡೆಸಿದರು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆಯನ್ನು ನೀಡಲಾಗುತ್ತಿದ್ದು, ಮಗುವಿಗೆ 6, 10 ಮತ್ತು 14ನೇ ವಾರದಲ್ಲಿ ಈ ಲಸಿಕೆಯನ್ನು ಹಾಕಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಮಕ್ಕಳು ರೋಟಾ ...

Read More »

ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಯುವತಿಯ ವಿಚಾರಕ್ಕೆ ನಡೆದ ಗಲಾಟೆ ಹಾಗೂ ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಶಶಿಕುಮಾರ್ (28) ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಗವಟೂರು ಗ್ರಾಮದ ಈಶ್ವರ, ಅಭಿಷೇಕ್, ದೇವೇಂದ್ರಪ್ಪ, ಸಚಿನ್ ಎಂಬುವರೊಂದಿಗೆ ಶಶಿಕುಮಾರ್ ಗೆ ಹಳೆಯ ದ್ವೇಷವಿತ್ತು. ಜೊತೆಗೆ ಕೆಲ ದಿನಗಳ ಹಿಂದೆ ಈ ನಾಲ್ವರ ಸಂಬಂಧಿ ಯುವತಿಯೋರ್ವಳ ವಿಚಾರದಲ್ಲಿ ಶಶಿಕುಮಾರ್ ಗಲಾಟೆ ಮಾಡಿಕೊಂಡಿದ್ದ. ...

Read More »

ವಿದ್ಯಾರ್ಥಿ ನಿಲಯಗಳಿಗೆ ಸಿಇಒ ದಿಢೀರ್ ಭೇಟಿ

ಶಿವಮೊಗ್ಗ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಬುಧವಾರ ಸಂಜೆ ಶಿವಮೊಗ್ಗ ನಗರದಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನಿಲಯದ ಸಮಸ್ಯೆಗಳನ್ನು ಸಿಇಒ ಅವರೊಂದಿಗೆ ತೋಡಿಕೊಂಡರು. ವಿದ್ಯಾರ್ಥಿನಿಯರಿಗೆ ...

Read More »

ಸಾರ್ವಜನಿಕ ಅಭಿಯೋಜಕ ಎಸಿಬಿ ಬಲೆಗೆ

ಶಿವಮೊಗ್ಗ: ಭದ್ರಾವತಿಯ ನಿರಂಜನ್ ಕದಂ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡಿಸಲು ತಮ್ಮ ಕಕ್ಷಿದಾರರಿಂದ 50 ಸಾವಿರ ಲಂಚಕ್ಕೆ‌ ಬೇಡಿಕೆ ಇಟ್ಟಿದ್ದ‌ ಭದ್ರಾವತಿ 4 ನೇ ಅಡಿಷನಲ್ ಸೆಷೆನ್ಸ್ ನ್ಯಾಯಾಲಯದ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ ರವೀಂದ್ರ ಇಂದು 20 ಸಾವಿರ ರೂಪಾಯಿ ಲಂಚಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಿರಂಜನ್ ಕದಂ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡಿಸಲು 50 ಸಾವಿರ ರೂಪಾಯಿ ಲಂಚ ನೀಡುವಂತೆ ತನ್ನ ಕಕ್ಷಿದಾರ ಸುನೀಲ್ ಗಾಯಕ್ವಾಡ್ ಎಂಬುವರ ಬಳಿ ರವೀಂದ್ರ ಬೇಡಿಕೆ ಇಟ್ಟಿದ್ದರು. ಇಂದು ರವೀಂದ್ರ ಅವರು ...

Read More »

ಅನಧಿಕೃತ ಕಲ್ಲು ಗಣಿಗಾರಿಕೆ ಮುಂದುವರೆಸುವವರ ಗಡಿಪಾರು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಜಿಲ್ಲೆಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆಯನ್ನು ಹಲವು ಬಾರಿ ದಾಳಿ ನಡೆಸಿ ಸ್ಥಗಿತಗೊಳಿಸಿದ್ದರೂ, ಮತ್ತೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹ ವ್ಯಕ್ತಿಗಳ ವಿರುದ್ಧ ಗಡಿಪಾರು ಸೇರಿದಂತೆ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಸಮಿತಿ ಸಭೆಯಲ್ಲಿ ಈ ಕುರಿತು ಸೂಚನೆಗಳನ್ನು ನೀಡಿದರು. ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ವಲಯಗಳಲ್ಲಿ ಕ್ರಶರ್, ಕ್ವಾರಿ ಸೇರಿದಂತೆ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅಕ್ರಮ ಗಣಿಗಾರಿಕೆ ಕ್ವಾರಿಗಳ ಮೇಲೆ ...

Read More »

ರಾಜುಗೌಡ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

        ಶಿವಮೊಗ್ಗ: ಸುರಪುರದ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಜುಗೌಡ ಅಭಿಮಾನಿ ಬಳಗದ ಕಾರ್ಯಕರ್ತರು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜುಗೌಡ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡದೆ ಇರುವುದು ವಾಲ್ಮೀಕಿ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ರಾಜುಗೌಡ ಅವರು ವಾಲ್ಮೀಕಿ ಸಮುದಾಯವನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು‌..   ...

Read More »

ಜಲಪಾತದಲ್ಲಿ ಕೊಚ್ಚಿಹೋದ ಪ್ರವಾಸಿಗರನ್ನು ರಕ್ಷಿಸಿದ ಸ್ಥಳೀಯರು

  ಈ ರೀತಿಯಾಗಿ: ಒಂದು ವೇಳೆ; ಹೊಸ ನ ನ ನ ಒಂದು ವೇಳೆ ಅದು ಸಂಭವಿಸುವುದಿಲ್ಲ. ಒಂದು ವೇಳೆ ಅದು ಸಂಭವಿಸುವುದಿಲ್ಲ. ಒಂದು ವೇಳೆ, ಅದು ಇಲ್ಲದಿರಲಿ. ವೇ ವೇ ಳೆ ಳೆ ಳೆ   Contact For ADVT 7676236690

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments