ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಬಹುದಿನದ ಬೇಡಿಕೆಯಾಗಿದ್ದ ಔರದ್ಕರ್ ವರದಿಯನ್ನು ದೀಪಾವಳಿಯಿಂದ ಜಾರಿಗೊಳಿಸಲಾಗುವುದು ಎಂದು ಇತ್ತೀಚೆಗೆ ಸಿಎಂ ಬಿ.ಎಸ್.ವೈ ಹೇಳಿದ ಬೆನ್ನಲ್ಲೇ ಈ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆಗಳು ಆರಂಭವಾಗಿದ್ದವು. ಆದರೆ ಈಗ ಪೊಲೀಸ್ ಸಿಬ್ಬಂದಿಗಳೇ ಸಿಎಂಗೆ ಪತ್ರ ಬರೆದು ಔರಾದ್ಕರ್ ವರದಿಯನ್ನ ರದ್ದುಗೊಳಿಸಿ ಎಂದು ಒತ್ತಾಯಿಸಿದ್ದಾರೆ. ವೇತನ ತಾರತಮ್ಯ ನಿವಾರಣೆಗಾಗಿ ಔರಾದ್ಕರ್ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆದರೆ ವರದಿ ಸಿದ್ಧಪಡಿಸುವಾಗ ಆರ್ಥಿಕ ಇಲಾಖೆ ತನ್ನ ಚಾಣಾಕ್ಷ್ಯತನವನ್ನು ತೋರಿಸಿದೆ ಎಂದು ಆರೋಪಿಸಲಾಗಿದು. ಡಿಜಿ ಹಾಗೂ ಐಜಿ ಹೊರಡಿಸಿದ್ದ ಫಿಟ್ಮೆಂಟ್ ಅಂತ ಮೂಲ ವೇತನ ನಿಗದಿಯಾಗಬೇಕಿತ್ತು. ಆದರೆ ಅದನ್ನು ರದ್ದುಪಡಿಸಿ ಕೇವಲ ಹೊಸದಾಗಿ ಸೇರ್ಪಡೆಯಾದ ಸಿಬ್ಬಂದಿಗೆ ಮಾತ್ರ ವೇತನ ನಿಗದಿ ಮಾಡಲಾಗಿದೆ. ಇದರಿಂದ ಔರಾದ್ಕರ್ ವರದಿ ಮೂಲ ಉದ್ದೇಶವನ್ನೇ ಮರೆಮಾಚಲಾಗಿದೆ ಎಂದು ಹೇಳಲಾಗುತ್ತಿದೆ.. ಈಗಿನ ವರದಿಯು ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಗೃಹ ಸಚಿವರು ತೀರ್ಮಾನಿಸಿ ಜಾರಿಗೊಳಿಸಿದಂತಿಲ್ಲ. ಈ ವರದಿಯ ಜಾರಿಯಿಂದ ಪೊಲೀಸರ ಜೀವನ ಮಟ್ಟ ಸುಧಾರಿಸುತ್ತೆ ಎಂದು ನಂಬಲಾಗಿತ್ತು. ಆದರೆ ಆರ್ಥಿಕ ಇಲಾಖೆಯು ಪೊಲೀಸ್ ಇಲಾಖೆಯ ಬಹುದಿನದ ಬೇಡಿಕೆಗೆ ತಣ್ಣೀರೆರಚಿದೆ. ವರದಿಯ ಮೂಲ ಉದ್ದೇಶವನ್ನು ಬಿಟ್ಟು ಆರ್ಥಿಕ ಇಲಾಖೆಯು ಹೊಸದಾಗಿ ವರದಿಯನ್ನು ಮಾರ್ಪಾಡು ಮಾಡಿರುವ ವರದಿ ಜಾರಿಯಾದ್ರೆ ವೇತನ ತಾರತಮ್ಯದಿಂದ ಪೊಲೀಸರು ವೈಯಕ್ತಿಕವಾಗಿ ಖಿನ್ನತೆಗೆ ಒಳಗಾಗೋ ಸಾಧ್ಯತೆ ಇದೆ..ಈ ವರದಿಯಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಶೇ95ರಷ್ಟು ಸಿಬ್ಬಂದಿಗೆ ಒಂದು ರೂಪಾಯಿ ಪ್ರಯೋಜನವಿಲ್ಲ. ಆದ್ದರಿಂದ ಸರ್ಕಾರ ರಾಘವೇಂದ್ರ ಔರಾದ್ಕರ್ ವರದಿಯ ಮೂಲ ಉದ್ದೇಶದ ಬೇಡಿಕೆಯನ್ನು ...
Read More »Monthly Archives: October 2019
ಹಸುವಿನ ಹೊಟ್ಟೆಯಲ್ಲಿತ್ತು 52 ಕೆಜಿ ಪ್ಲಾಸ್ಟಿಕ್
ಚೆನೈ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಸುವಿನ ಆಪರೇಷನ್ ಮಾಡಿದ ವೈದ್ಯರಿಗೆ ಶಾಕ್ ಕಾದಿತ್ತು. ಹಸುವಿನ ಹೊಟ್ಟೆಯ ಆಪರೇಷನ್ ಮಾಡಿದ ವೈದ್ಯರಿಗೆ ಅಲ್ಲಿ ಸಿಕ್ಕಿದ್ದು ಬರೋಬ್ಬರಿ 52 ಕೆಜಿ ಪ್ಲಾಸ್ಟಿಕ್. ಮುನಿರತ್ನಂ ಎಂಬುವರಿಗೆ ಸೇರಿದ ಹಸು ಹೊಟ್ಟೆ ನೋವಿನಿಂದ ಬಳಲುತ್ತಿತ್ತು. ಜೊತೆಗೆ ನೀಡುತ್ತಿದ್ದ ಹಾಲಿನ ಪ್ರಮಾಣವೂ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ಚಿಕಿತ್ಸೆಗಾಗಿ ಹಸುವನ್ನು ತಮಿಳುನಾಡು ಪಶುವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಕರೆತಂದಿದ್ದರು. ಈ ಹಸುವಿಗೆ ಡಾ.ವೇಲವನ್ ಆಪರೇಷನ್ ಮಾಡಿದಾಗ ಹಸುವಿನ ಹೊಟ್ಟೆಯ ಒಳಗೆ 52 ಕೆ.ಜಿ.ಪ್ಲಾಸ್ಟಿಕ್ ಸಿಕ್ಕಿದೆ. ಪ್ಲಾಸ್ಟಿಕ್ ಮಾತ್ರವಲ್ಲದೆ ಹಸುವಿನ ಹೃದಯದ ...
Read More »ಹಳೆಮಂಡ್ಲಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಶಿವಮೊಗ್ಗ: ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಗಳ ಒಳಗೆ ನೀರು ನುಗ್ಗಿರುವ ಘಟನೆ ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿ ನಡೆದಿದೆ. ಭಾರಿ ಮಳೆ ಸುರಿದಿದ್ದರಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಆದರೆ ಇದೇ ಭಾಗದಲ್ಲಿ ಚರಂಡಿಗಳು ಹಾಗೂ ರಾಜಕಾಲುವೆಗಳನ್ನು ಕೆಲವರು ಬಂದ್ ಮಾಡಿದ್ದರಿಂದಾಗಿ ನೀರು ಹಳೆಮಂಡ್ಲಿಯ ತಗ್ಗು ಪ್ರದೇಶದಲ್ಲಿರುವ ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ವಿಷಯ ತಿಳಿದ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಹಾಗೂ ಪಾಲಿಕೆ ಅಧಿಕಾರಿಗಳು ಜೆಸಿಬಿ ಮೂಲಕ ರಾಜಕಾಲುವೆಗಳನ್ನು ತೆರವುಗೊಳಿಸುವ ಮೂಲಕ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಿದರು. ...
Read More »ಹುತಾತ್ಮರ ದಿನಾಚರಣೆ
ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನಿರಿಸಿ ನಮನ ಸಲ್ಲಿಸಲಾಯಿತು ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ, ಜಿಲ್ಲಾರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು,ಎಎಸ್ ಪಿ ಶೇಖರ್ ಸ್ಮಾರಕಕ್ಕೆ ಹೂಚ್ಛವನ್ನಿಟ್ಟು ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಸಂದರ್ಭದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆಯನ್ನು ಪ್ರತಿಯೊಬ್ಬರೂ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ರಕ್ಷಣೆ ಮಾಡುವಾಗ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಕರ್ತವ್ಯ ನಿರ್ವಹಿಸುವ ...
Read More »ಶಿವಮೊಗ್ಗ ನಗರದಲ್ಲಿ ಗಾಂಧಿ ಸಂಕಲ್ಪ ಯಾತ್ರೆ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಬಿಜೆಪಿಯಿಂದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ನಡೆದ ಗಾಂಧಿ ಸಂಕಲ್ಪಯಾತ್ರೆ ಇಂದು ಶಿವಮೊಗ್ಗ ನಗರದಲ್ಲಿ ನಡೆಯಿತು. ಬೆಳಗ್ಗೆ ಗುಡ್ಡೆಮರಡಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಂಸದ ರಾಘವೇಂದ್ರ ಪಾದಯಾತ್ರೆ ಆರಂಭಿಸಿದರು. ಬಳಿಕಬೈಪಾಸ್ ರಸ್ತೆ, ನ್ಯೂಮಂಡ್ಲಿ, ಎನ್.ಟಿ.ರಸ್ತೆ, ಆರ್ ಎಂಎಲ್ ನಗರ, ಬಸ್ ಸ್ಟಾಂಡ್‌ಮಾರ್ಗವಾಗಿ ಸಂಕಲ್ಪ ಯಾತ್ರೆ ನಡೆಯಿತು. ಗಾಂಧಿ ಸಂಕಲ್ಪ ಯಾತ್ರೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಸಾಥ್ ನೀಡಿದರು.
Read More »ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ ಪಿ
ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಶಾಂತರಾಜು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಶಿವಮೊಗ್ಗ ಉಪವಿಭಾಗದ 200 ಕ್ಕೂ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಪ್ರತಿಯೊಬ್ಬ ಅಪರಾಧ ಮಾಹಿತಿಯನ್ನು ಸಂಗ್ರಹಿಸಿದರು. ಜೊತೆಗೆ ಮುಂದೆ ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿದರೆ ಸುಮ್ಮನಿರುವುದಿಲ್ಲ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
Read More »ತೀರ್ಥಹಳ್ಳಿ ದಸರಾ ಮೆವಣಿಗೆಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಬರುತ್ತಿದ್ದ ವೃದ್ದರೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಸಂಜೀವ್ ಶೆಟ್ಟಿ(62) ಮೃತಪಟ್ಟವರು. ದಸರಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಇವರು ಎಲ್ಲರಂತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದರು. ಆದರೆ ಇದೇ ವೇಳೆ ಅಸ್ವಸ್ಥಗೊಂಡು ಸಂಜೀವ ಶೆಟ್ಟಿ ಕುಸಿದು ಬಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ನೀರು ಕುಡಿಸಿ ಉಪಚರಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಸಂಜೀವ ಶೆಟ್ಟಿ ಮೃತಪಟ್ಟಿದ್ದಾರೆ.
Read More »ಪ್ಲಾಸ್ಟಿಕ್ ಮುಕ್ತ ಆಂದೋಲನದ ಮೂಲಕ ಗಾಂಧಿ ಜಯಂತಿ ಆಚರಣೆ..
ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಪಿ.ವಿ.ಸಿಂಧು ಶಟಲ್ ಬಳಗ ಹಾಗೂ ಗ್ರೋ ಗ್ರೀನ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯನ್ನು ಚಂದನ ಪಾರ್ಕ್ ನಲ್ಲಿ ಆಚರಿಸಲಾಯಿತು.. ಬಳಿಕ ಬಡಾವಣೆಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮಾದಾನ ಮಾಡಿದರು. ಇದಾದ ನಂತರದಲ್ಲಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ಗಳನ್ನು ವಿತರಣೆ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ಆಂದೋಲನಕ್ಕೆ ಬೆಂಬಲ ಸೂಚಿಸಿದರು..ಈ ಸಂದರ್ಭದಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಕಾಟನ್ ಬ್ಯಾಗ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿ.ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಂಪೂರ್ಣ ಸಹಕರಿಸಿ ಬಡಾವಣೆಯ ನಿವಾಸಿಗಳಲ್ಲಿ ...
Read More »ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ.
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಕಾರ್ಯಕ್ರಮದ ಒಂದು ಅಂಗವಾದ ಯುವ ದಸರಾ ಸಮಿತಿಯಿಂದ ಹೊನಲು ಬೆಳಕು ಕಬಡ್ಡಿ ಪಂದ್ಯಾವಳಿಯನ್ನು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಶಿವಮೊಗ್ಗ ವಲಯದ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಇ. ಕಾಂತೇಶ್ ರವರು ಉದ್ಘಾಟಿಸಿದರು…ಸುಮಾರು 40 ಕ್ಕು ಹೆಚ್ಚು ಕಬಡ್ಡಿ ತಂಡಗಳು ಉಪಸ್ಥಿತರಿದ್ದರು.
Read More »
Recent Comments