Monthly Archives: November 2019

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

  ಶಿವಮೊಗ್ಗ ನಗರದಲ್ಲಿ‌  ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಶಿವಮೊಗ್ಗ ನಗರದ ಹಲವು ಬಡಾವಣೆಗಳು ಸಂಪೂರ್ಣ ಜಲಾವೃತಗೊಂಡಿವೆ. ಶಿವಮೊಗ್ಗದ ಬಾಪೂಜಿ ನಗರದ ನೂರಕ್ಕೂ ಹೆಚ್ಷು ಮನೆಗಳಿಗೆ ನಿನ್ನೆ ರಾತ್ರಿಯೂ ನೀರು ನುಗ್ಗಿತ್ತು. ಮಧ್ಯಾಹ್ನದ ವೇಳೆಗೆ ಮನೆಯನ್ನು ಶುಚಿಯಾಗಿಸಿಕೊಳ್ಳಲಾಗಿತ್ತು. ಆದರೆ ಇಂದು ಸಂಜೆ ಮತ್ತೆ ಧಾರಾಕಾರ ಮಳೆಯಾಗಿರುವುದರಿಂದ ಬಾಪೂಜಿ ನಗರ ಮತ್ತೆ ಜಲಾವೃತವಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಬಡಾವಣೆಯಾಗಿರುವ ಗೋಪಾಲಗೌಡ ಬಡಾವಣೆಯ ರಸ್ತೆಗಳ ಮೇಲೆ ಮೂರು ಅಡಿಗೂ ಹೆಚ್ಚು ನೀರು ತುಂಬಿಕೊಂಡಿತ್ತು. ಇನ್ನು ಕಾಂಗ್ರೆಸ್ ಕಚೇರಿ ಎದುರಿನ ‌ರಸ್ತೆ ಮೇಲೆ ಮೂರು ಅಡಿಗೂ ಹೆಚ್ಚು ನೀರ ...

Read More »

ಸರ್ಕಾರಿ ಶಾಲೆಗಳ ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 14.61 ಕೋಟಿ ರೂ. ಅನುದಾನ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯಗಳ ನಿರ್ಮಾಣಕ್ಕಾಗಿ ಇದೇ ಮೊದಲ ಬಾರಿಗೆ ಸರ್ಕಾರ 14.61 ಕೋಟಿ ರೂ. ಅನುದಾನ ಒದಗಿಸಿದ್ದು, ಮೂರು ತಿಂಗಳ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತಾಗಿ ಅಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ 86ಶಾಲೆಗಳಲ್ಲಿ ಕೊಠಡಿ ದುರಸ್ತಿಗಾಗಿ ...

Read More »