Breaking News

Monthly Archives: January 2020

ಮಹಿಳೆಯರಿಗೆ ಒಲಿದ ಮಹಾನಗರ ಪಾಲಿಕೆ ಗದ್ದುಗೆ.. ಸುವರ್ಣಾ ಶಂಕರ್ ಮೇಯರ್, ಸುರೇಖಾ ಮುರಳೀಧರ್ ಉಪಮೇಯರ್

  ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಮೇಯರ್ ಆಗಿ ಸುವರ್ಣ ಶಂಕರ್ ಮತ್ತು ಉಪಮೇಯರ್ ಆಗಿ ಸುರೇಖಾ ಮುರುಳೀಧರ್ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ 11-30 ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಚುನಾವಣಾ ಅಧಿಕಾರಿಯಾಗಿ ವಿದ್ಯಾಕುಮಾರಿ ಹಾಗು ಪ್ರಾದೇಶಿಕ ಆಯುಕ್ತ N V ಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮೇಯರ್ ಚುನಾವಣೆಗೆ ಬಿಜೆಪಿಯ ಸುವರ್ಣ ಶಂಕರ್ ಮತ್ತು ಕಾಂಗ್ರೆಸ್ ನ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಸುವರ್ಣ ಶಂಕರ್ ಪರವಾಗಿ 26 ಮತಗಳು ಲಭ್ಯವಾದರೆ ಯಮುನಾ ರಂಗೇಗೌಡರಿಗೆ 12 ...

Read More »

ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ನಮಸ್ಕಾರ. ಜಿಲ್ಲೆಯ ಎಲ್ಲಾ ಸಮಸ್ತ ನಾಗರಿಕ ಬಾಂಧವರಿಗೆ ಗಣರಾಜ್ಯೋತ್ಸವ ಶುಭಾಶಯಗಳು ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ ದೇಶ-ನಮ್ಮದೇ ಸಂವಿಧಾನ- ನಮ್ಮದೇ ಆಡಳಿತ-ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರೂ ಕೈಗೊಂಡ ದಿನ ನಮ್ಮ ಗಣರಾಜ್ಯ ದಿನ. ಮಾನ್ಯ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ...

Read More »

ರೇಣುಕಾಚಾರ್ಯ ವಿರುದ್ಧ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ.

ಶಿವಮೊಗ್ಗ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ‌.ರೇಣುಕಾಚಾರ್ಯ ಅವರು ಮಸೀದಿ ಹಾಗೂ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿಟಿಜನ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ರೇಣುಕಾಚಾರ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ರೇಣುಕಾಚಾರ್ಯ ಅವರು ಮಸೀದಿಗಳು ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳಾಗಿವೆ ಎಂದು ಹೇಳಿಕೆ ನೀಡುವ ಮೂಲಕ ಒಂದು ಕೋಮಿನ ವಿರುದ್ಧ ಇನ್ನೊಂದು ಕೋಮನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Read More »

ಲ್ಯಾಪ್ ಟಾಪ್ ಗಾಗಿ ಎನ್ ಎಸ್ ಯುಐ ಪ್ರತಿಭಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್ ನೀಡುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಎನ್ ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ವರ್ಷ ಕಾರಣಾಂತರಗಳಿಂದ ಸರ್ಕಾರ ಲ್ಯಾಪ್ ಟಾಪ್ ವಿತರಿಸಿರಲಿಲ್ಲ. ಆದರೆ ಈ ಬಾರಿ ಸರ್ಕಾರ ಲ್ಯಾಪ್ ಟಾಪ್ ವಿತರಿಸಲು ಮುಂದಾಗಿದೆಯಾದರೂ ಅದು ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ. ಇದರಿಂದಾಗಿ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕೂಡಲೆ ಎಲ್ಲ ವಿದ್ಯಾರ್ಥಿಗಳಿಗೂ ...

Read More »

ಮೆಗ್ಗಾನ್ ಆಸ್ಪತ್ರೆ ವ್ಯವಸ್ಥೆ ಸುಧಾರಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಅವರು ಮಂಗಳವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೆಗ್ಗಾನ್ ಆಸ್ಪತ್ರೆಯ ಕುಂದುಕೊರತೆ ಹಾಗೂ ಲೋಪ ದೋಷಗಳ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದು, ಇದನ್ನು ಸರಿಪಡಿಸಬೇಕು ಎಂದು ಹೇಳಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಬಹುತೇಕ ಔಷಧಿಗಳಿಗೆ ಚೀಟಿ ಬರೆದುಕೊಡಲಾಗುತ್ತಿದೆ. ಸಿರಿಂಜಿ, ಬ್ಯಾಂಡೇಜ್ ಸೇರಿದಂತೆ ಸಣ್ಣಪುಟ್ಟ ಸಾಮಾಗ್ರಿಗಳನ್ನು ಸಹ ಹೊರಗಿನಿಂದ ಖರೀದಿಸಿ ತರುವಂತೆ ರೋಗಿಗಳಿಗೆ ...

Read More »

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಾಸಕ ಸೋಮಶೇಖರ ರೆಡ್ಡಿ ಅವರು ಮುಸ್ಲಿಮ್ ಸಮುದಾಯವನ್ನು ಅವಹೇಳನ ಮಾಡುವಂತ ಹೇಳಿಕೆ ನೀಡಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆಪಡೆದರು. ಸೋಮಶೇಖರ ರೆಡ್ಡಿ ಅವರು ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವಂಥ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದ್ದರೂ ಇನ್ನೂ ಅವರನ್ನು ಬಂಧಿಸಿಲ್ಲ. ಯಡಿಯೂರಪ್ಪ ಅವರೇ ಸೋಮಶೇಖರ ರೆಡ್ಡಿ ಅವರ ರಕ್ಷಣೆಗೆ ನಿಂತಿದ್ದಾರೆ ಎಂಬ ಅನುಮಾನ ಮೂಡಲಾರಂಭಿಸಿದೆ. ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಕಾರರು ...

Read More »

ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಎದುರು ನಡೆದಿದೆ. ರಾತ್ರಿ ಮೋರಿ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿ ನಿದ್ದೆ ಮಾಡುವಾಗ ಮೋರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಜಯನಗರ ಠಾಣೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಪರಿಚಿತ ವ್ಯಕ್ತಿಯ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ಅಪರಿಚಿತ ವ್ಯಕ್ತಿಯ ಗುರುತಿಗೆ ಜಯನಗರ ಠಾಣೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

Read More »

ಗೇಲಿ ಮಾಡಿದಾತನಿಗೆ ಈಗ ಪಕ್ಕೆಲುಬು ಮುರಿದಂತಹ ಅನುಭವ!

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗನೋಬ್ಬ ಪಕ್ಕೆಲುಬು ಎಂದು ತಪ್ಪಾಗಿ ಉಚ್ಚಾರಿಸುತ್ತಿದ್ದ ವಿಡಿಯೋ ವೈರಲ್ ಅಗಿತ್ತು. ಅದರೆ ಇಂದು ಆ ವೀಡಿಯೋ ವೈರಲ್ ಮಾಡಿದ ಶಿಕ್ಷಕನಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ನಿದೇಶಕರು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸೇರಿದ್ದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಅದೇಶವನ್ನು ಹೊರಡಿಸಿದ್ದಾರೆ. ಒಟ್ಟಿನಲ್ಲಿ ಮಗುವಿಗೆ ಪಕ್ಕೆಲುಬು ಉಚ್ಚಾರಣೆ ಬರುವುದಿಲ್ಲ ಎಂದು ಗೇಲಿ ಮಾಡಿದವರಿಗೆ ಇದ್ದಾಗಿನ ಪಕ್ಕೆಲುಬು ಇದೀಗ ಮುರಿದಂತಾಗಿದೆ.

Read More »

ಶಿಷ್ಟಾಚಾರ ಕಟ್ಟುನಿಟ್ಟಿನಿಂದ ಪಾಲಿಸಿ: ಜಿಲ್ಲಾಧಿಕಾರಿ ಸೂಚನೆ

  ಶಿವಮೊಗ್ಗ  : ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಸರ್ಕಾರದ ಶಿಷ್ಟಾಚಾರವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಷ್ಟಾಚಾರ ಪಾಲನೆ ಮಾಡುವ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಶಿಷ್ಟಾಚಾರ ಪಾಲನೆಯನ್ನು ಲಘುವಾಗಿ ಪರಿಗಣಿಸಬಾರದು. ಕಾರ್ಯಕ್ರಮ ಆಯೋಜಿಸುವುದಕ್ಕಿಂತ ಒಂದು ವಾರ ಪೂರ್ವದಲ್ಲೇ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು. ಶಿಷ್ಟಾಚಾರ ಪಾಲಿಸದೆ, ಸ್ಥಳೀಯವಾಗಿ ಸಾರ್ವಜನಿಕರು ಅಥವಾ ಗುತ್ತಿಗೆದಾರರು ಶಂಕುಸ್ಥಾಪನೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ...

Read More »

ಶಿವಮೊಗ್ಗದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

  ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ದಿನವಾದ ಇಂದು ಬೆಳಗಿನ ಜಾವದಿಂದಲೇ ಜನ ಜೀವನ ಎಂದಿನಂತಿತ್ತು. ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್ ಸೇವೆ ಎಂದಿನಂತಿತ್ತು. ಆಟೋಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿದ್ದವು. ಅಂಗಡಿ ಮುಂಗಟ್ಟುಗಳು ಎಂದಿನಂತೆಯೇ ತೆರೆದಿದ್ದು ವರ್ತಕರು ವ್ಯಾಪಾರ ಆರಂಭಿಸಿದ್ದಾರೆ. ಒಟ್ಟಾರೆ ಶಿವಮೊಗ್ಗದಲ್ಲಿ ಭಾರತ್ ಬಂದ್ ಎನ್ನುವುದು ಪ್ರತಿಭಟನೆಗಷ್ಟೇ ಸೀಮಿತವಾಗುವ ಸಾಧ್ಯತೆಯಿದೆ.

Read More »