ಶಿವಮೊಗ್ಗ: ಆಮಂತ್ರಣ ಪತ್ರಿಕೆ, ಕರಪತ್ರಗಳನ್ನು ವಿವಿಧ ಡಿಸೈನ್ ಗಳಲ್ಲಿ ಮಾಡುವುದನ್ನು ನೋಡಿದ್ದೇವೆ. ಆದರೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪರಿಸರ ಸ್ನೇಹಿ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರಗಳ ಬಳಕೆಗೆ ವಿಶೇಷ ಪ್ರಯತ್ನ ಮಾಡಿದೆ. ಇದುವರೆಗೆ ನಾವು ಸೀಡ್ ಬಾಲ್ ಗಳನ್ನು ನೋಡಿದ್ದೆವು. ಇದೀಗ ಸೀಡ್ ಪೇಪರ್ ಸಹ ಬಂದಿದೆ. ಈ ಸೀಡ್ ಪೇಪರ್ ಬಳಕೆ ಮಾಡಿದ ಮೊದಲ ಸರ್ಕಾರಿ ಇಲಾಖೆ ಹಾಗೂ ನಿಗಮ ಎಂಬ ಹೆಗ್ಗಳಿಕೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲುತ್ತದೆ.. ನಿಗಮದ ಅಧ್ಯಕ್ಷರಾದ ಡಿ.ಎಸ್ ಅರುಣ್ ...
Read More »Monthly Archives: February 2020
ಐಷಾರಾಮಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಪೀಠೋಪಕರಣ ಹಾಗೂ ದಾಖಲೆಗಳು.
ಶಿವಮೊಗ್ಗ: ಮನೆಯ ಎಸಿಯಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶಿವಮೊಗ್ಗದ ಶ್ರೀಮಂತ ಕುಟುಂಬದ ಮನೆಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ನಡೆದಿದೆ. ಭೂಪಾಳಂ ಸತ್ಯನಾರಾಯಣ ಅವರಿಗೆ ಸೇರಿದ ಮನೆಯಲ್ಲಿ ಇಂದು ಬೆಳಗ್ಗೆ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು ಮನೆಯ ಮಹಡಿಯಲ್ಲಿದ್ದ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಕೊಠಡಿಯಲ್ಲಿದ್ದ ಪೀಠೋಪಕರಣಗಳು, ದಾಖಲೆಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಅನಾಹುತವನ್ನು ತಪ್ಪಿಸಿದ್ದಾರೆ..
Read More »ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ
ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...
Read More »ಬೃಹತ್ ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ..
ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.. ಇಂದು ಶಿವಮೊಗ್ಗದ ಎನ್‍ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10ತಿಂಗಳ ...
Read More »ಮಾರಿ ಹಬ್ಬದ ಅಂಗವಾಗಿ ನಡೆದ ಕುರಿ ಕಾಳಗದ ಝಲಕ್
ಶಿವಮೊಗ್ಗ : ಅಖಾಡದ ಸುತ್ತಲೂ ಕಿಕ್ಕಿರಿದ ಪ್ರೇಕ್ಷಕರು, ಮೈದಾನದ ಪಕ್ಕದಲ್ಲಿರುವ ಕಟ್ಟಡಗಳ ಮೇಲೆ ಕುಳಿತಿದ್ದ ಜನ. ಇದು ಕ್ರಿಕೆಟ್ ಟೂರ್ನಿ ಅಥವಾ ಪ್ರೋ ಕಬಡ್ಡಿ ನೋಡಲು ಸೇರಿದ್ದ ಪ್ರೇಕ್ಷಕರಲ್ಲ ಬದಲಾಗಿ ನಮ್ಮ ಗ್ರಾಮೀಣ ಸೊಗಡಿನ ಕ್ರೀಡೆ ಕುರಿಕಾಳಗ ವೀಕ್ಷಣೆಗೆ ಸೇರಿದ್ದ ಜನಸಾಗರ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಸಮಿತಿಯಿಂದ ಕೋಟೆ ಮಾರಿಕಾಂಬ ಜಾತ್ರೆ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ಕುರಿ ಕಾಳಗವನ್ನು ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. 2, 4, 6 ಹಾಗೂ 8 ಹಲ್ಲಿನ ಕುರಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಕುರಿಗಳು ...
Read More »ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಬಹುಜನರ ಧಾರ್ಮಿಕ-ಸಾಂಸ್ಕೃತಿಕ ಉತ್ಸವ
ಶಿವಮೊಗ್ಗದ ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆ ನಾಡಿನ ಜನಮನ ಸೆಳೆದ . ಆಸ್ತಿಕ ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆವ ಜಾತ್ರೆ. ಶಿರಸಿ, ಸಾಗರದ ಮಾರಿಕಾಂಬಾ ಜಾತ್ರೆಗಳ ನಂತರ ಅದ್ಧೂರಿಯ ಹೆಗ್ಗಳಿಕೆಗೆ ಪಾತ್ರವಾಗಿರುವುದು ಶಿವಮೊಗ್ಗನಗರದ ಕೋಟೆ ಶ್ರೀ ಮಾರಿಕಾಂಬಾದೇವಿ ಜಾತ್ರೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯ ಹಿಂದೆ ಊರಿನ ಕ್ಷೇಮ, ಜನರ ಕಲ್ಯಾಣಕ್ಕೆ ಶಕ್ತಿ ದೇವತೆಯನ್ನು ಆರಾಧಿಸುವ ಜನಪದ ನಂಬಿಕೆಯೊಂದು ಭಕ್ತಿ ಮತ್ತು ವೈಭವದಿಂದ ನಡೆದುಕೊಂಡು ಬಂದ ಪರಂಪರೆಯೊಂದು ಹಾಸುಹೊಕ್ಕಾಗಿದೆ. ದೂರ್ವಾಸ ಕ್ಷೇತ್ರವೆಂದೆ ಪುರಾಣಗಳಲ್ಲಿ ಕರೆಯಲ್ಪಡುವ ಶಿವಮೊಗ್ಗ ನಗರದ ಕೋಟೆ ಮಾರಿಕಾಂಬೆದೇವಿಯ ಜಾತ್ರೆಗೆ ಶತಮಾನದ ...
Read More »12ನೇ ಶತಮಾನ ಒಂದು ಅದ್ಭುತ ಶತಮಾನ :ಅನುರಾಧ
ಶಿವಮೊಗ್ಗ ; 12ನೇ ಶತಮಾನದಲ್ಲಿನ ಮೂಢನಂಬಿಕೆಗಳು, ಜಾತಿ ಪದ್ಧತಿ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಕಾಯಕ ಶರಣರ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಯಕ ಶರಣರು, ಬಸವಣ್ಣ, ಅಕ್ಕಮಹಾದೇವಿ ಅನೇಕ ಜ್ಞಾನಿಗಳು 12ನೇ ಶತಮಾನದಲ್ಲಿ ಬಂದು ಹೋಗಿದ್ದಾರೆ. ಹೀಗಾಗಿ ಹನ್ನೆರಡನೇ ಶತಮಾನ ...
Read More »ಜ್ಞಾನವುಳ್ಳ ಮಹಾನ್ ಚೈತನ್ಯ ಸರ್ವಜ್ಞ : ಸುವರ್ಣ ಶಂಕರ್
ಜ್ಞಾನವುಳ್ಳ ಮಹಾನ್ ಚೈತನ್ಯ ಸರ್ವಜ್ಞ : ಸುವರ್ಣ ಶಂಕರ್ ಸರ್ವಜ್ಞ ಒಬ್ಬರು ಮಹಾನ್ ಚೇತನ, ಸಂತನೂ ಹೌದು, ಕವಿಯು ಹೌದು. ಸರ್ವಜ್ಞರು ಅಪಾರ ಜ್ಞಾನವುಳ್ಳವರಾಗಿದ್ದರು ಎಂದು ಪಾಲಿಕೆಯ ಮಹಾಪೌರರು ಸುವರ್ಣ ಶಂಕರ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕುಂಬಾರರ ಸಂಘ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವಜ್ಞನ ತ್ರಿಪದಿಗಳು ಸಾರ್ವಕಾಲಿಕವಾಗಿವೆ. ಭವಿಷ್ಯ, ಒಗಟು, ದಾನ, ಕೌಟುಂಬಿಕ, ವೈದ್ಯಕೀಯ, ರಾಜಕೀಯ, ಕಲೆ ...
Read More »ಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ವ್ಯವಸ್ಥೆಗೆ ಅಗತ್ಯ ಕ್ರಮ.
ಶಿವಮೊಗ್ಗ: ಫೆ.25ರಿಂದ ನಗರದಲ್ಲಿ ನಡೆಯಲಿರುವ ಐದು ದಿನಗಳ ಕೋಟೆ ಶ್ರೀಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಇಂದು ಮಾರಿಕಾಂಬಾ ಸೇವಾಸಮಿತಿಯು ಮಹಾನಗರ ಪಾಲಿಕೆ ಹಾಗೂ ನೀರುಸರಬರಾಜು ಮಂಡಳಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. ಜಾತ್ರೆಯ ಆರಂಭಿಕ ದಿನವಾದ ಫೆ.25 ರಂದು ಗಾಂಧಿಬಜಾರಿನಲ್ಲಿ ಹೆಚ್ಚುವರಿ ಬೆಳಕಿನ ವ್ಯವಸ್ಥೆ, ಈ ಟಾಯ್ಲೆಟ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದೇ ರೀತಿ ನಾಲ್ಕು ದಿನಗಳ ಕಾಲ ಗದ್ದುಗೆಯಲ್ಲಿ ಜಾತ್ರೆ ...
Read More »ಬಿ ಎಸ್ ಯಡಿಯೂರಪ್ಪನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರೇರಣ ಎಜುಕೇಷನ್ ಮತ್ತು ಸೋಶಿಯಲ್ ಟ್ರಸ್ಟ್ ಹಾಗೂ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ವೀರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳ್ಳಿಗೆ 9 ಗಂಟೆಗೆ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ವೈದ್ಯರ ಸಲಹೆ ಮೇರೆಗೆ ಸಾಮನ್ಯ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತದೆ.. ಆಯುಷ್ ಭಾರತದ ಯೋಜನೆಯಡಿಯಲ್ಲಿ ಆರೋಗ್ಯ ಕಾಡ್ ಗಳನ್ನು ಈಗಾಗಲೇ ವಿತರಿಸುವಂತಹ ಕಾರ್ಯ ನಡೆದಿದೆ. ಯಾರಿಗೆ ಈ ಕಾರ್ಡ್ ದೊರೆತಿಲ್ಲವೋ ಅಂತವರಿಗೆ ಫೆಬ್ರವರಿ 27, ...
Read More »
Recent Comments