Breaking News

Monthly Archives: February 2020

ಬೆಲೆ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಗ್ಯಾಸ್ ಸಿಲೆಂಡರ್ ಬೆಲೆ ಪೆಟ್ರೋಲ್ ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಇಂದು ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಂ ಸುಂದರೇಶ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ 400 ರೂಪಾಯಿ ಇದ್ದ ಸಿಲಿಂಡರ್ ಬೆಲೆ 800 ಅಗಿದೆ. ಪೆಟ್ರೋಲ್ 80 ರೂ. ಡೀಸೆಲ್‌ ‌40 ರೂ ಏರಿಕೆ ಆಗಿದೆ ಇದರಿಂದ ಜನಸಾಮಾನ್ಯರ ಬದುಕು ...

Read More »

“ಆಚಾರ್ಯ ಅದ್ವಿತೀಯ” ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ..

  ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಿಂದ ಫೆಬ್ರವರಿ 24ರಂದು ಕಾಲೇಜು ಆವರಣದಲ್ಲಿ ಒಂದು ದಿನದ ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಟಿಎನ್ ಸಿ ಕಾಲೇಜು ಪ್ರಾಚಾರ್ಯ ಪ್ರೊ.ಎಚ್.ಎಂ.ಸುರೇಶ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ 10 ಸ್ಪರ್ದೆಗಳು ನಡೆಯಲಿದ್ದು ನಿರ್ವಹಣೆಗೆ ಸಂಬಂಧಿಸಿದಂತೆ 5 ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಸಂಬಂಧಿಸಿದ ಐದು ಸ್ಪರ್ಧೆಗಳು ನಡೆಯಲಿವೆ. ಈ ಎರಡು ವಿಭಾಗದ ಸ್ಪರ್ಧೆಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಹಾಗೂ ರಾಜ್ಯದ ಇತರೆ ವಿಶ್ವವಿದ್ಯಾಲಯಗಳ 50 ತಂಡಗಳಿಂದ ಸುಮಾರು 500 ವಿದ್ಯಾರ್ಥಿಗಳು ...

Read More »

ಮಾರ್ಕೆಟ್ ಲೋಕಿಗೆ ಪೊಲೀಸರ ಗುಂಡೇಟು

ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಎಡಗಾಲಿಗೆ ಶೂಟೌಟ್ ಮಾಡಿರುವ ಪೊಲೀಸರು ಲೋಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಕೆಟ್ ಗಿರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾರ್ಕೆಟ್ ಲೋಕಿ ಅಂದಿನಿಂದ ತಲೆಮರೆಸಿಕೊಂಡಿದ್ದ. ಇಂದು ಅಬ್ಬಲಗೆರೆ ಬಳಿ ಮಾರ್ಕೆಟ್ ಲೋಕಿ ಇದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಲೋಕಿ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಲೋಕಿಯ ಎಡಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆದು ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.  

Read More »

ಬಹುಮುಖಿ ರಾಷ್ಟ್ರೀಯ ನಾಟಕೋತ್ಸವ ಫೆಬ್ರವರಿ 15 ರಿಂದ 22

  ಶಿವಮೊಗ್ಗ ರಂಗಾಯಣ ವತಿಯಿಂದ ಬಹುಮುಖಿ ರಾಷ್ಟ್ರೀಯ ನಾಟಕೋತ್ಸವವನ್ನು ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಫೆಬ್ರವರಿ 15 ರಿಂದ 22 ರವರೆಗೆ ಅಯೋಜಿಸಲಾಗಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ತಿಳಿಸಿದರು.. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಟಕೋತ್ಸವದಲ್ಲಿ ಮಣಿಪುರಿ, ಹಿಂದಿ, ತುಳು, ಕನ್ನಡ ಭಾಷೆಯ ನಾಟಕಗಳು ಪ್ರದರ್ಶಿಸಲ್ಪಡುತ್ತವೆ. ಇದಕ್ಕೆ ಮಣಿಪುರ, ಮುಂಬಯಿ, ಮಂಗಳೂರು, ಧಾರವಾಡ, ಉಡುಪಿ, ಮೂಡಬಿದರೆ ಹಾಗೂ ಬೆಂಗಳೂರಿನ ಪ್ರತಿಷ್ಠಿತ ನಾಟಕ ತಂಡಗಳು ಪಾಲ್ಗೊಳ್ಳಲಿವೆ. ಪ್ರತಿದಿನ ನಾಟಕದ ಪ್ರದಶನ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಂಜೆ 6.45 ಕ್ಕೆ ನಡೆಯಲಿದೆ. ರಂಗೋತ್ಸವದಲ್ಲಿ ಪ್ರತಿ ದಿನ ರಂಗಭೂಮಿ ...

Read More »

ಶ್ರೇಷ್ಠತೆಯ ಪ್ರತೀಕ ಮೈಸೂರು ಸಿಲ್ಕ್ಸ್ ಸೀರೆಗಳ ಮೇಳ ಶಿವಮೊಗ್ಗದಲ್ಲಿ

ಶಿವಮೊಗ್ಗ : ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದಿನಿಂದ 5ದಿನಗಳ ಕಾಲ ನಡೆಯಲಿರುವ ಮೈಸೂರು ಸಿಲ್ಕ್ ಸೀರೆ ಹಾಗೂ ಸಿಲ್ಕ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧುಕಾರಿಗಳಾದ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದ್ದರು.. ಜಾಗತಿಕವಾಗಿ ಅಗ್ರಪಂಕ್ತಿಯಲ್ಲಿ ಗುರುತಿಸಲ್ಪಡುವ ಮೈಸೂರು ಸಿಲ್ಕ್ಸ್ ಉತ್ಪನ್ನಗಳು ನಾಡಿನ ಹೆಮ್ಮೆ ಹಾಗೂ ಶ್ರೇಷ್ಠ ಪರಂಪರೆಯ ಪ್ರತೀಕವೆನಿಸಿದೆ. ನಕಲು ಮಾಡಲಾಗದಂತಹ ಮೈಸೂರು ಸಿಲ್ಕ್ ಉತ್ಪನ್ನಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವರ್ಷಕ್ಕೆ 2ಬಾರಿ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಆರಂಭಿಸುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಶ್ರೀಸಾಮಾನ್ಯರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments