Breaking News

Monthly Archives: April 2020

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

    ಶಿವಮೊಗ್ಗ :  ಲಾಕ್‍ಡೌನ್ ಸಂದರ್ಭದಲ್ಲಿ ಕೆಲವು ವ್ಯಾಪಾರಿಗಳು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಮಂಗಳವಾರ ದಿಢೀರ್ ತಪಾಸಣೆ ನಡೆಸಿದರು. ಸಿಮೆಂಟ್, ಸ್ಟೀಲ್, ಹಾರ್ಡ್‍ವೇರ್ ಅಂಗಡಿಗಳು, ದಿನಬಳಕೆ ಮಾರಾಟ ಅಂಗಡಿಗಳಿಗೆ ಭೇಟಿ ನೀಡಿ ಪರೀಕ್ಷಾರ್ಥ ಖರೀದಿ ನಡೆಸಿದ ಸಂದರ್ಭದಲ್ಲಿ ನಗದು ಬಿಲ್ಲು ನೀಡದೆ, ನೇರವಾಗಿ ನಗದು ಸಂಗ್ರಹಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳು ನೊಟೀಸು ಜಾರಿ ಮಾಡಿದ್ದಾರೆ. ಶಿವಮೊಗ್ಗ ನಗರ, ಆಯನೂರು ಹಾಗೂ ಸಾಗರ ಸುತ್ತಮುತ್ತ 10ಕ್ಕೂ ಅಧಿಕ ಮಳಿಗೆಗಳಿಗೆ ...

Read More »

ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆ ಇಲ್ಲ; ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಿರುವುದಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿನ್ನೆಯಿಂದ ಹೆಚ್ಚುವರಿಯಾಗಿ ಕೆಲವು ಸೇವೆಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜ್ಯೂಸ್, ಐಸ್‍ಕ್ರೀಂ ಅಂಗಡಿ, ಮೊಬೈಲ್ ರಿಚಾರ್ಜ್ ಅಂಗಡಿಗಳು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು, ಇಲೆಕ್ಟ್ರಿಕಲ್ ರಿಪೇರಿ, ಕೃಷಿ ಸಂಬಂಧಿತ ಮೆಕ್ಯಾನಿಕ್ ಅಂಗಡಿಗಳು, ಪ್ಲಂಬರ್‍ನಂತಹ ಸ್ವಯಂ ಉದ್ಯೋಗ ಕೈಗೊಂಡಿರುವವರು ಅಂಗಡಿ ...

Read More »

ಕರೋನಾ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರಿಂದ ರೂಟ್ ಮಾರ್ಚ್

ಶಿವಮೊಗ್ಗ: ಕರೋನಾ ವೈರಸ್ ಬಗ್ಗೆ ಜಾಗೃತಿ‌ ಮೂಡಿಸಲು ಹಾಗೂ ಕರೋನಾ ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕರು ಸಹಕಾರ ನೀಡಲಿ ಎಂಬ ಉದ್ದೇಶದಿಂದ ಪೊಲೀಸರು ಇಂದು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಿದರು. ಬೆಂಗಳೂರಿನ ಪಾದರಾಯನಪುರದಲ್ಲಿ ಕರೋನಾ ಸೋಂಕು ಶಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲು ಹೋದ ಪೊಲೀಸ್ ಹಾಗೂ ಅರೋಗ್ಯ ಇಲಾಖೆ ಸಿಬ್ಬಂದಿ‌ ಮೇಲೆ ನಡೆದಂತ ಘಟನೆಗಳು ಶಿವಮೊಗ್ಗದಲ್ಲಿ‌ ನಡೆಯದಂತೆ ಶಿವಮೊಗ್ಗ ಜನರಲ್ಲಿ‌ ಜಾಗೃತಿ ಮೂಡಿಸಲು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.‌ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ‌ ರೂಟ್‌ ಮಾರ್ಚ್ ಗೆ ಚಾಲನೆ‌ ನೀಡಿದರು. ...

Read More »

ಅಬಕಾರಿ‌‌ ಸಿಬ್ಬಂದಿಯಿಂದ‌ ಮಿಲಿಟರಿ ಮದ್ಯ ವಶ

ಶಿವಮೊಗ್ಗ: ಲಾಕ್ ಡೌನ್ ನಡುವೆಯೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 15 ಸಾವಿರ ರೂಪಾಯಿ‌ ಮೌಲ್ಯದ ಮಿಲಿಟರಿ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ‌ ನಡೆದಿದೆ. ಭದ್ರಾವತಿ ಬೈಪಾಸ್ ನ ಆಂಜನೇಯ ದೇವಸ್ಥಾನದ ಬಳಿ ಹಾಗೂ ಮಿಲಿಟರಿ ಕ್ಯಾಂಪ್ ಬಳಿ 15 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು 80 ಸಾವಿರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ‌ ಇನ್ಸ್ ಪೆಕ್ಟರ್ ಹನುಮಂತಪ್ಪ‌ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ 7.5 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ...

Read More »

ಈ ವರ್ಷ ಬಸವ ಜಯಂತಿ ಆಚರಣೆ ಮನೆಗೆ ಸೀಮಿತಗೊಳಿಸಿ: ಬಸವಕೇಂದ್ರದ ಕರೆ

ಶಿವಮೊಗ್ಗ : ಭಾನುವಾರ ೨೬ ಏಪ್ರಿಲ್ ೨೦೨೦ರಂದು ಬಸವ ಜಯಂತಿ. ಕೋವಿಡ್-೧೯ ವೈರಾಣುವಿನಿಂದ ರಕ್ಷಣೆ ಪಡೆಯಲು ದೇಶಕ್ಕೆ ದೇಶವೇ ದಿಗ್ಬಂಧನವನ್ನು ಪಾಲಿಸುತ್ತಿದೆ. ಇದು ವೈರಾಣುವಿನ ಪ್ರಸರಣ ತಡೆಗೆ ಅನಿವಾರ್ಯ. ಪ್ರತೀ ವರ್ಷದಂತೆ ಉತ್ಸವದೊಂದಿಗೆ ಬಸವ ಜಯಂತಿ ಆಚರಿಸಬೇಕೆಂಬುದು ಈ ಬಾರಿ ಅಸಾಧ್ಯ. ಈ ಸ್ಥಿತಿಯನ್ನು ಅರಿತು ನಾವೆಲ್ಲ ಜವಾಬ್ದಾರಿಯಿಂದ ವರ್ತಿಸಬೇಕಿದೆ. ಆದ್ದರಿಂದ ತಾವು ತಮ್ಮ ಮನೆಗಳಲ್ಲೇ ಬಸವಣ್ಣನವರ ಪೂಜೆ ನೆರವೇರಿಸಿ, ವಚನ ಪಠಣ ಮಾಡಿ ಬಸವ ಜಯಂತಿಯನ್ನು ಆಚರಿಸಲು ಸೂಚಿಸಿದೆ. ನಮ್ಮ ಬಸವಕೇಂದ್ರದಲ್ಲಿ ಕೂಡಾ ಅಂದು ಬೆಳಗ್ಗೆ ಎಂದಿನಂತೆ ಇಷ್ಟಲಿಂಗ ಪೂಜೆ ಮುಗಿಸಿ ಬಸವಣ್ಣನವರಿಗೆ ...

Read More »

ಶಿವಮೊಗ್ಗ ಮೆಡಿಕಲ್ ಕಾಲೇಜು ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

  ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಇಂದು ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ 133 ಸಿ ದರ್ಜೆ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ ಪಾಲಿಸಬೇಕು. ಉಳಿದ ಖಾಯಂ ಹುದ್ದೆಗಳ ನೇಮಕಾತಿಗಾಗಿ ಆದಷ್ಟು ಬೇಗನೆ ಇಲಾಖೆಯ ನೇಮಕಾತಿ ಮತ್ತು ವೃಂದ ನಿಯಮಾವಳಿಯನ್ನು ರಚಿಸುವಂತೆ ...

Read More »

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ...

Read More »

ಕರೋನಾದಿಂದ ಪೊಲೀಸರ ರಕ್ಷಣೆಗೆ ಮುಂದಾದ ಎಸ್ ಪಿ

ಶಿವಮೊಗ್ಗ: ಕರೋನಾ ಹರಡದಂತೆ ತಡೆಯಲು ಪೊಲೀಸರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ದಿನವಿಡೀ ಸಮಾಜದ ಸ್ವಾಸ್ಥ್ಯ ಕಾಪಾಡಲು ಶ್ರಮಿಸುವ ಪೊಲೀಸರಿಗೂ ಕರೋನಾ ವೈರಸ್ ಭೀತಿ ಇದೆ. ಇದನ್ನು ಮನಗಂಡ ಶಿವಮೊಗ್ಗ ಎಸ್ ಪಿ ಶಾಂತರಾಜು ಪೊಲೀಸರಿಗೆ ಪೈಬರ್ ಪೇಸ್ ವೈಸರ್ ಹಾಗೂ ಗ್ಲೌಸ್ ಗಳನ್ನು ವಿತರಿಸಲಾರಂಭಿಸಿದ್ದಾರೆ. ಆರಂಭಿಕವಾಗಿ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ 500 ಪೈಬರ್ ಪೇಸ್ ವೈಸರ್ ವಿತರಿಸಿದ್ದಾರೆ. ಜೊತೆಗೆ ಎರಡು ಸಾವಿರ ಪೊಲೀಸರಿಗೆ ಹ್ಯಾಂಡ್ ಗ್ಲೌಸ್ ಗಳನ್ನು ನೀಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಜೊತೆಗೆ ಪೊಲೀಸರ ಸ್ವಾಸ್ಥ್ಯವನ್ನು ಕಾಪಾಡುವ ಉದ್ದೇಶದಿಂದ ಎಸ್ ...

Read More »

ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್ ಸಂಚಾರಿ ಕ್ಯಾಂಟೀನ್ ಆರಂಭ..

  ಶಿವಮೊಗ್ಗ : ಕರೋನಾ ಹರಡುವ ಭೀತಿಯಿಂದಾಗಿ ಲಾಕ್ ಡೌನ್ ಮಾಡಲಾಗಿದ್ದು, ಇದರಿಂದಾಗಿ ಹೋಟೆಲ್ ಗಳು ಬಾಗಿಲು ಮುಚ್ಚಿವೆ. ಇದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳು, ಆವರ ಸಂಬಂಧಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಆಹಾರವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಆರಂಭದಿಂದ ಬೇರೆಡೆಯಿಂದ ಆಹಾರ ತಂದು ಇವರಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದರು. ಆದರೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಸೇರಿ ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ ಕ್ಯಾಂಟೀನ್ ಆರಂಭಿಸಿ ರೋಗಿಗಳು, ಆವರ ಸಂಬಂಧಿಕರು ಹಾಗೂ ವೈದ್ಯಕೀಯ ...

Read More »

ಶಿವಮೊಗ್ಗದಲ್ಲಿ ಸೆಕ್ಟರ್ ವೈಸ್ ಲಾಕ್ ಡೌನ್

  ಶಿವಮೊಗ್ಗ : ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಅದರೂ ಕೊರೊನಾ ವೈರಸ್ ಕಾಳ್ಗಿಚ್ಚಿನಂತೆ ಹಬ್ಬುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಶಿವಮೊಗ್ಗದಲ್ಲಿ ಕೈಗೊಳ್ಳಲಾಗುತ್ತಿದೆ . ಶಿವಮೊಗ್ಗ ನಗರದಲ್ಲಿ ಜನರು ಒಂದು ಏರಿಯಾ ಬಿಟ್ಟು ಮತ್ತೊಂದು ಏರಿಯಾಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಪೊಲೀಸರು ಸೆಕ್ಟರ್ ವೈಸ್ ಲಾಕ್ ಡೌನ್ ಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಮುಖ ರಸ್ತೆಗಳು ಹಾಗೂ ಸರ್ಕಲ್ ಗಳನ್ನು ಬ್ಯಾರೀಕೇಡ್ ಕಟ್ಟಿ ಲಾಕ್ ಮಾಡಲಾಗಿದೆ. ಈ ಮೂಲಕ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments