Breaking News

Monthly Archives: May 2020

ನಾಳೆಯಿಂದ ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ

  ಶಿವಮೊಗ್ಗ : ನಾಳೆ ಬೆಳಗ್ಗೆ 5.30ಕ್ಕೆ ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭವಾಗಲಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಸಹಾ ಆಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ರೈಲ್ವೆ ನಿಲ್ದಾಣದ ಮುಂದೆ ಬಾಕ್ಸ್‍ಗಳನ್ನು ಹಾಕಲಾಗಿದೆ ಹಾಗೂ ಆರೋಗ್ಯ ತಪಾಸಣೆ ಮಾಡುವುದಕ್ಕೆ ರೈಲ್ವೆ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಬೇಕಿರುವ ಹಿನ್ನೆಲೆ, ಪ್ರಯಾಣಿಕರು ನಿಗದಿತ ಸಮಯಕ್ಕಿಂತಲು 90 ನಿಮಿಷ ಮೊದಲೇ ರೈಲ್ವೆ ನಿಲ್ದಾಣ ತಲುಪಬೇಕಿದೆ.ಪ್ರತಿ ಬೋಗಿಗೆ 54 ಪ್ರಯಾಣಿಕರಷ್ಟೇ ಅವಕಾಶ ನೀಡಲಾಗಿದೆ. ಹಾಗಾಗಿ ರೈಲಿನಲ್ಲಿ ಕೇವಲ 648 ಸೀಟುಗಳಷ್ಟೇ ಅವಕಾಶವಿದೆ.

Read More »

ಇನ್ನು ಮುಂದೆ ಕೇವಲ 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7ದಿನಗಳಿಗೆ ಇಳಿಸಲಾಗಿದೆ. ಪ್ರಸ್ತುತ ವಿವಿಧ ಹಾಸ್ಟೆಲ್‍ಗಳಲ್ಲಿ 553ಮಂದಿ ಕ್ವಾರೆಂಟೈನ್‍ನಲ್ಲಿದ್ದಾರೆ. ಪ್ರತಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ 7ದಿನಗಳ ಅವಧಿ ಪೂರ್ಣಗೊಳಿಸಿರುವವರ ಆರೋಗ್ಯ ತಪಾಸಣೆ ನಡೆಸಿ ಕೈಗೆ ಸೀಲು ಹಾಕಿ ಮನೆಗೆ ಕ್ವಾರೆಂಟೈನ್‍ಗೆ ಕಳುಹಿಸಬೇಕು. ಇದಕ್ಕಾಗಿ ...

Read More »

ಜೂನ್ 1ರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಆರಂಭ.

ಶಿವಮೊಗ್ಗ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಜೂನ್ 1 ರಿಂದ ಆರಂಭಗೊಳ್ಳಲಿದೆ‌. ಕರೋನಾ ಆತಂಕದಿಂದಾಗಿ ಕಳೆದ ಎರಡು ತಿಂಗಳಿನಿಂದ ಭಕ್ತರಿಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ನಿರ್ಬಂಧಿಸಲಾಗಿತ್ತು.‌ ಇದೀಗ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯವನ್ನು ಭಕ್ತರಿಗೆ ಕರುಣಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ ಜೂನ್ 1 ರಿಂದ ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ತೆರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ದೇವಸ್ಥಾನದ ಆವರಣದಲ್ಲಿ ನಿಯಮಿತವಾಗಿ ಸ್ಯಾನಿಟೈನೇಷನ್ ಮಾಡುವ ...

Read More »

ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್: ಕೆ.ಬಿ.ಶಿವಕುಮಾರ್

  ಶಿವಮೊಗ್ಗ: ಇಂದು ಸಂಜೆ ಏಳು ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಕರೋನಾ ಅರಂಭದ ಲಾಕ್ ಡೌನ್ ನಲ್ಲಿ ಯಾವರೀತಿಯ ಮಾರ್ಗ ಸೂಚಿಗಳನ್ನು ಅನುಸರಿಸಲಾಗಿತ್ತೋ ಅದೇ ರೀತಿಯ ಮಾರ್ಗಸೂಚಿಗಳನ್ನು ಈಗಲೂ ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಪೀಸ್ ಕಮಿಟಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ಆರಂಭದ ಸಮಯದಲ್ಲಿ ಅಗತ್ಯವಸ್ತುಗಳನ್ನ ಹೊರತು ಪಡಿಸಿ ಸಂಪೂರ್ಣ ಲಾಕ್ ಡೌನ್ ನ್ನ ಹೇಗೆ ಆಚರಿಸಲಾಗಿತ್ತೋ ಆ ಲಾಕ್ ಡೌನ್ ನಿಯಮಾವಳಿಗಳನ್ನೇ ಈಗಲೂ ...

Read More »

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕರೋನಾ ಪ್ರಕರಣ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 32 ಕರೋನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಕರೋನಾ ವೈರಸ್ ಸೋಂಕಿತ ಪೇಷೆಂಟ್ ನಂಬರ್ 1498ರ ಸಂಪರ್ಕದಿಂದ 28 ವರ್ಷದ ಯುವಕನಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಪೇಷೆಂಟ್ ನಂಬರ್ 1502 ರ ಸಂಪರ್ಕದಿಂದ 48 ವರ್ಷದ ಮಹಿಳೆಯಲ್ಲಿ ಕರೋನಾ ಕಾಣಿಸಿಕೊಂಡಿದೆ. ಕರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಇಂದು ಎರಡು ಕರೋನಾ ಪ್ರಕರಣಗಳು ಶಿವಮೊಗ್ಗ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಕರೋನಾ ಸೋಂಕಿತ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಜೂನ್ 1ರಿಂದ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಧ್ಯ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ. ಜೂನ್ 1ರಂದು ಸಂಜೆ 5.30ಕ್ಕೆ ಬೆಂಗಳೂರಿನಿಂದ ಹಾಗೂ ಜೂನ್ 2ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್‍ಲೈನ್‍ನಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ...

Read More »

ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್, ಸಿಪಿಐ ಅಮಾನತ್ತಿಗೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.‌ ಸಾಗರ ವಕೀಲ ಪ್ರವೀಣ್ ಎಂಬುವರು ನೀಡಿದ ದೂರಿನ‌ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರವೀಣ್ ನೀಡಿದ ಸುಳ್ಳು ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿದ ಸಾಗರ ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನ ...

Read More »

ಶಿವಮೊಗ್ಗದಲ್ಲಿ 6 ಕರೋನಾ ಪ್ರಕರಣ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 6 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಿಂದ ಬಂದ ಐವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಇಬ್ಬರು ಮೂರು ವರ್ಷದ ಮಕ್ಕಳು ಸೇರಿದ್ದಾರೆ. ಇನ್ನುಳಿದಂತೆ 60 ವರ್ಷ ವೃದ್ದೆಯಲ್ಲೂ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

Read More »

29 ಕಾರ್ಮಿಕರಿಗೆ ಯುವ ಕಾಂಗ್ರೇಸ್ಸಿನಿಂದ ಒಂದು ದಿನದ ಸಹಾಯಧನ ವಿತರಣೆ 

  ಶಿವಮೊಗ್ಗ :  ಇಂದು ನಗರದ ಗೋಪಿ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿಗಳಾದ ದಿವಂಗತ ಶ್ರೀ ರಾಜೀವ್ ಗಾಂಧಿ ಅವರ 29ನೇ ಪುಣ್ಯಸ್ಮರಣೆಯ ಅಂಗವಾಗಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಜೊತೆಗೆ “ನ್ಯಾಯ ಯೋಜನೆಯ” ಕಾರ್ಯಕ್ರಮವನ್ನು ನಗರದ 29ಜನ ಬಡ ಕೂಲಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಪ್ರತಿಯೊಬ್ಬರಿಗೆ 200 ರೂ.ಗಳಂತೆ ಯುವ ಕಾಂಗ್ರೆಸ್‍ನಿಂದ ನೀಡುತ್ತಿದ್ದು ಇದೇ ರೀತಿಯಲ್ಲಿ ಕೇಂದ್ರ ಸರ್ಕಾರವು 6 ತಿಂಗಳುವರೆಗೆ ಎಲ್ಲಾ ಬಡ ಕೂಲಿ ಕಾರ್ಮಿಕರಿಗೆ ನೀಡಬೇಕೆಂದು ಆಗ್ರಹಿಸಿದ್ದರು. ಲಾಕ್‍ಡೌನ್ ನಿಂದ ತತ್ತರಿಸಿರುವ ವಲಸೆ ಕಾರ್ಮಿಕರು ಹಾಗೂ ...

Read More »

ಆಂಬುಲೆನ್ಸ್ ನಲ್ಲಿ ಜಿಂಕೆ‌ ಮಾಂಸ ಸಾಗಣೆ ಮಾಡುತ್ತಿದ್ದವರ ಬಂಧನ.

ಶಿವಮೊಗ್ಗ: ಸರ್ಕಾರಿ ಆಂಬುಲೆನ್ಸ್ ನಲ್ಲಿ ಜಿಂಕೆ ಮಾಂಸ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಆಂಬುಲೆನ್ಸ್ ನಲ್ಲಿ‌ ಜಿಂಕೆ ಮಾಂಸ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ‌ ಮೇರೆಗೆ ಆಂಬುಲೆನ್ಸ್ ಮೇಲೆ‌ ದಾಳಿ‌‌ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಐದು ಕೆ.ಜಿ.‌ ಜಿಂಕೆ ಮಾಂಸ ವಶಪಡಿಸಿಕೊಂಡು ಆಂಬುಲೆನ್ಸ್ ನಲ್ಲಿದ್ದ ಇಬ್ಬರು ಸ್ಟಾಫ್ ನರ್ಸ್ ಸೇರಿದಂತೆ ಮೂವರನ್ನು ಬಂಧಿಸಿದ್ದರು. ಇವರ ವಿಚಾರಣೆ ವೇಳೆ ಮತ್ತಷ್ಟು ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments