ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರು 22 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಜನರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ವಿದೇಶ ಹಾಗೂ ಅಂತರ್ ರಾಜ್ಯ ಹಾಗೂ ಬೆಂಗಳೂರಿನಿಂದ ಬಂದ 9 ಜನರಲ್ಲಿ ಇಂದು ಕರೋನಾ ವೈರಸ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 173 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 109 ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ...
Read More »Monthly Archives: June 2020
ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 2225 ಬೆಡ್ ವ್ಯವಸ್ಥೆ
ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯ ಪಡೆಯಲು ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ : ಕರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ನೋಂದಣಿಯಾಗಿರುವ 21ಆಸ್ಪತ್ರೆಗಳಲ್ಲಿ ಕರೋನಾ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳು ಸೇರಿದಂತೆ ವೈದ್ಯಕೀಯ ಸೌಲಭ್ಯಗಳ ಕುರಿತು ಈಗಾಗಲೇ ನೀಡಿರುವ ಮಾಹಿತಿಯನ್ನು ಗೂಗಲ್ ಶೀಟ್‍ನಲ್ಲಿ ನವೀಕರಿಸಬೇಕು. ಕೆಪಿಎಂಎ ವೈದ್ಯಾಧಿಕಾರಿಗಳ ತಂಡ ...
Read More »ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ
ಶಿವಮೊಗ್ಗ : ಎಸ್‍ಎಸ್‍ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ ಪರಿಶೀಲನೆ ನಡೆಸಿದರು. ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್‍ಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಹಜವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯಲ್ಲಿ 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 84 ಪರೀಕ್ಷಾ ಕೇಂದ್ರಗಳಿವೆ. ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ರೂಟ್‍ಗಳಲ್ಲಿ 198 ...
Read More »ಶೀಘ್ರವೇ ಸೆಟ್ಟೇರಲಿರುವ ಫ್ಯಾಮಿಲಿ ಪ್ಯಾಕ್ ಕನ್ನಡ ಚಲನಚಿತ್ರ
ಫ್ಯಾಮಿಲಿ ಪ್ಯಾಕ್ ಇದು ನೂತನವಾಗಿ ಸೆಟ್ಟೇರಲಿರುವ ಕನ್ನಡ ಚಲನಚಿತ್ರದ ಹೆಸರು. ಈ ಹೆಸರು ಕೇಳಿದಾಕ್ಷಣ ಯಾರಾದರೂ ಇದು ಪಕ್ಕಾ ಕಾಮಿಡಿ ಚಿತ್ರ ಎಂದುಕೊಳ್ಳುತ್ತಾರೆ. ಹೌದು ಇದೊಂದು ಪಕ್ಕಾ ಕಾಮಿಡಿ ಪ್ರಿಯರಿಗೆ ಹೇಳಿ ಮಾಡಿಸಿದಂತಾ ಚಲನಚಿತ್ರ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಈ ಚಲನಚಿತ್ರ ನಿರ್ಮಿಸಿ ಅರ್ಪಿಸುತ್ತಿದ್ದಾರೆ. ಇನ್ನು ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಒಂದಾಗಿದ್ದ ನಿರ್ದೇಶಕ ಅರ್ಜುನ್ ಕುಮಾರ್ ಹಾಗೂ ನಾಯಕ ನಟ ಲಿಖಿತ್ ಶೆಟ್ಟಿ ಜೋಡಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲೂ ಮುಂದುವರಿದಿದೆ. ಇನ್ನು ಚಿತ್ರದ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಚಿತ್ರದ ...
Read More »ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ...
Read More »ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್.. ಎಷ್ಟು ತಿಂಗಳು ಬಂದ್ ?? ಪರ್ಯಾಯ ಮಾರ್ಗ ಯಾವುದು ಗೊತ್ತಾ ??
ಶಿವಮೊಗ್ಗ : ಆಗುಂಬೆ ಭಾಗದಲ್ಲಿ ಅತಿಯಾದ ಮಳೆಯಾಗುತ್ತಿದೆ ಹಾಗಾಗಿ ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ರಸ್ತೆ ಕುಸಿದು ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಬಹುದು. ಆಸ್ತಿ ಮತ್ತು ಪ್ರಾಣ ಹಾನಿಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 a ತಿರ್ಥಹಳ್ಳಿ – ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವವರೆಗೂ 15.06.2020 ರಿಂದ 15.10.2020 ರವರೆಗೆ 12 ಟನ್ ಗಿಂತ ಅಧಿಕಾ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.. ಪರ್ಯಾಯ ಮಾರ್ಗಗಳು : 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ...
Read More »ಜಿಲ್ಲೆಯಲ್ಲಿ ಕೆರೆಗಳ ಸುತ್ತ 3ಲಕ್ಷ ಸಸಿಗಳನ್ನು ನೆಡಲು ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಕನಿಷ್ಟ 3ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ವೀರಣ್ಣನಬೆನವಳ್ಳಿ ಗ್ರಾಮದ ಕೆರೆಯ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಂತರ್ಜಲ ಚೇತನ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆರೆಗಳ ಸುತ್ತ 1ಸಾವಿರ ಸಸಿಗಳನ್ನು ನೆಡುವ ಕಾರ್ಯವನ್ನು ಆರಂಭಿಸಲಾಗಿದೆ. ಇದರಿಂದ ...
Read More »Donald Trump considering suspending H1B, other visas
Washington: US President Donald Trump is considering suspending a number of employment visas including the H-1B, most sought-after among Indian IT professionals, in view of the massive unemployment in America due to the coronavirus pandemic, according to a media report. The proposed suspension could extend into the government’s new fiscal year beginning October 1, when many new visas are ...
Read More »ಇಂದು ಶಿವಮೊಗ್ಗದಲ್ಲಿ ಹತ್ತು ಕರೋನಾ ಪ್ರಕರಣ ಪತ್ತೆ, ಸ್ವಾಮೀಜಿಗೂ ಬಿಡದೆ ಕಾಡಿದ ಕರೋನಾ.
ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿ ಸೇರಿದಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದಿದ್ದ ಎಂಟು ಜನರಲ್ಲಿ ಕಿಲ್ಲರ್ ಕರೋನಾ ವೈರಸ್ ಕಾಣಿಸಿಕೊಂಡಿದೆ. ಇದಲ್ಲದೆ ಇನ್ನೋರ್ವ ವ್ಯಕ್ತಿಯಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರು ತೀವ್ರ ಉಸಿರಾಟದ ತೊಂದರೆ(SARI) ಅನುಭವಿಸುತ್ತಿದ್ದಾರೆ. 25 ವರ್ಷದ ಮಹಿಳೆಯಲ್ಲಿಯೂ ಕರೋನಾ ಕಾಣಿಸಿಕೊಂಡಿದ್ದು, ಇವರಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂದು ಜಿಲ್ಲಾಡಳಿತ ಪತ್ತೆಹಚ್ಚಲಾರಂಭಿಸಿದೆ. ಸ್ವಾಮೀಜಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂಬುದು ಜಿಲ್ಲಾಡಳಿತಕ್ಕೆ ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. ಇಂದು ಕರೋನಾ ಸೋಂಕಿಗೆ ತುತ್ತಾದ ...
Read More »ಮಠದ ಅಂಗಳಕ್ಕೆ ಕಾಲಿಟ್ಟ ಕರೋನಾ
ಶಿವಮೊಗ್ಗ : ಇಷ್ಟು ದಿನ ಹೊರಜಿಲ್ಲೆ ಹೊರರಾಜ್ಯಗಳಿಂದ ಬಂದವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಹಾಮಾರಿ ಕರೋನಾ ವೈರಸ್ ಮೊನ್ನೆಯಷ್ಟೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೆ ಕಾಣಿಸಿಕೊಂಡು ಜಿಲ್ಲಾಡಳಿತಕ್ಕೆ ತಲೆನೋವಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಠದ ಅಂಗಳಕ್ಕೂ ವೈರಸ್ ಕಾಲಿಟ್ಟಿದೆ. ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿರುವ ಆಶ್ರಮವೊಂದಕ್ಕೆ ಕರೋನಾ ಇದೀಗ ಕಾಲಿಟ್ಟಿದೆ. ಆಶ್ರಮವನ್ನು ಸೀಲ್ ಡೌನ್ ಮಾಡಲಾಗಿದ್ದು ಯಾರು ಆಶ್ರಮಕ್ಕೆ ಹೋಗದಂತೆ ತಡೆಯಲಾಗಿದೆ. ಇನ್ನು ಸ್ವಾಮೀಜಿಯವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತದೆ..
Read More »
Recent Comments