ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ...
Read More »Monthly Archives: July 2020
ಅಧಿಕಾರಿಗಳು ಹಾಗೂ ಸಿಬ್ಬಂದಿ ದಿವ್ಯ ನಿರ್ಲಕ್ಷ ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಕ್ಕೆ ಅಪೂರ್ಣ ಅಂತ್ಯಕ್ರಿಯೆ..
ಶಿವಮೊಗ್ಗ : ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಿದ್ಧವಾಗಿದ್ದು ಆದರೆ ಇದನ್ನು ಸ್ಥಳೀಯರು ವಿರೋಧಿಸಿದರು. ಸ್ಥಳೀಯರ ವಿರೋಧದ ನಡುವೆಯೇ ನೆನ್ನೆ ರಾತ್ರಿ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ ಆದರೆ ಇದನ್ನು ಸಹ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ನಿರ್ಲಕ್ಷದಿಂದ ನಡೆಸಿದ್ದಾರೆ. ಅಪೂರ್ಣ ಅಂತ್ಯಸಂಸ್ಕಾರ ನಡೆಸಿ ಶವದ ಮೇಲೆ ಕಟ್ಟಿಗೆಗಳನ್ನು ಇಟ್ಟು ಹೋಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ...
Read More »ಜುಲೈ 13 ರಿಂದ ಅಗಸ್ಟ್ 13ರವರೆಗೆ ಗಾಂಧಿಬಜಾರ್ ನಲ್ಲಿ ಸ್ವಯಂ ಪ್ರೇರಿತ ಬಂದ್
ಶಿವಮೊಗ್ಗ : ಮಹಾಮಾರಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 13 ರಿಂದ ಆಗಸ್ಟ್ 12 ರವರೆಗೆ ಅರ್ಧ ದಿನ ವ್ಯಾಪಾರ ಮಾಡಲು ನಿರ್ಧರಿಸಲಾಗಿದೆ. ಬೆಳ್ಳಿಗೆ 8 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದ್ದು, 3 ಗಂಟೆಯ ನಂತರ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದಾರೆ. ಪುಟ್ ಬಾತ್ ನಲ್ಲಿ ವ್ಯಾಪಾರ ಮಾಡುವುದು ಹಾಗೂ ...
Read More »ಜುಲೈ ಅಂತ್ಯದ ವೇಳೆಗೆ ಕುವೆಂಪು ವಿವಿ ಘಟಿಕೋತ್ಸವ
ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಬರುವ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವವನ್ನು ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ತಿಳಿಸಿದ್ದಾರೆ. ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕೋವಿಡ್-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ...
Read More »ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವ ಪೊಲೀಸರ ವಶಕ್ಕೆ.
ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಶ್ರೀ ಚನ್ನಬಸವೇಶ್ವರ ದೇವಾಲದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ನಿನ್ನೆ ತಡರಾತ್ರಿ ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ನಾಲ್ವರು ಕಳ್ಳರು ದೇವಾಲಯದ ಒಳಗೆ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನಾಲ್ವರು ಕಳ್ಳರನ್ನು ಹಿಡಿಯಲು ಹೋಗಿದ್ದಾರೆ. ಆಗ ಮೂವರು ಕಳ್ಳರು ತಪ್ಪಿಸಿಕೊಂಡಿದ್ದು, ಓರ್ವ ಮಾತ್ರ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ...
Read More »ಕರೋನಾ ಎಫೆಕ್ಟ್ ತಂತ್ರಜ್ಞಾನದ ಮೊರೆಹೋದ ಕಾಂಗ್ರೆಸ್
ಶಿವಮೊಗ್ಗ: ಕರೋನಾ ಸೋಂಕು ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಅವರು ಪತ್ರಿಕಾಗೋಷ್ಟಿ ನಡೆಸಲು ತಂತ್ರಜ್ಞಾನದ ಮೊರೆಹೋಗಿದ್ದಾರೆ. ಹೌದು. ಇಂದು ಸುಂದರೇಶ್ ಅವರು ಜೂಮ್ ಆ್ಯಪ್‌ಮೂಲಕ ಸುದ್ದಿಗೋಷ್ಟಿ ನಡೆಸುವ ಮೂಲಕ ಶಿವಮೊಗ್ಗದಲ್ಲಿ ಅಂತರ್ಜಾಲದ ಮೂಲಕ ಸುದ್ದಿಗೋಷ್ಟಿ ನಡೆಸಿದ ಮೊದಲಿಗರೆನಿಸಿದರು.
Read More »ಸಚಿವರಿಬ್ಬರ ರಾಜೀನಾಮೆಗೆ ಸುಂದರೇಶ್ ಆಗ್ರಹ
ಶಿವಮೊಗ್ಗ: ಕರೋನಾ ಪಿಪಿಇ ಕಿಟ್ ಖರೀದಿ ಹಾಗೂ ಔಷದ ಮತ್ತು ಇತರೆ ಪರಿಕರಗಳ ಖರೀದಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕರೋನಾ ಹರಡುವುದನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ ಯಾವ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಅಲ್ಲಿ ಕರೋನಾ ತಡೆಯಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರಿಗೆ ಇರುವ ಜನಪರ ...
Read More »ಇಂದಿನಿಂದ ಸಂಜೆ 6ಗಂಟೆ ಬಳಿಕ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತ
ಶಿವಮೊಗ್ಗ : ಶಿವಮೊಗ್ಗದಲ್ಲಿ ಕರೋನಾ ನಿಯಂತ್ರಣದ ಕ್ರಮವಾಗಿ ಸಂಜೆ 6ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ಇಂದಿನಿಂದ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು 6ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು. ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ...
Read More »ಸೇವಾ ಸಿಂಧು ಯೋಜನೆಯಡಿ ವಿವಿಧ ಇಲಾಖೆಗಳ 451ಸೇವೆಗಳು ಲಭ್ಯ: ಜಿ.ಅನುರಾಧ
ಶಿವಮೊಗ್ಗ : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್‍ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್‍ಸೈಟ್ ಮೂಲಕ ಅಥವಾ ಸಮೀಪದ ಸಿಎಸ್‍ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್‍ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...
Read More »ಸರ್ಕಾರದಿಂದ ಹೋಂ ಐಸೋಲೇಷನ್‍ನ ಮಾರ್ಗಸೂಚಿ ಪ್ರಕಟ : ಇನ್ಮುಂದೆ ರೋಗಿಗಳಿಗೆ ಮನೆಯಲ್ಲಿಯೇ ಕೊರೊನಾ ಚಿಕಿತ್ಸೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾದವರಿಗೆ ಇನ್ಮುಂದೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೋಂ ಐಸೋಲೇಷನ್ ಮಾರ್ಗಸೂಚಿಯನ್ನ ಪ್ರಕಟಿಸಿದೆ.. ಸೋಂಕು ಗುಣಲಕ್ಷಣ ಇಲ್ಲದವರು, ಕಡಿಮೆ ಗುಣಲಕ್ಷಣ ಇದ್ದವರಿಗೆ ಹೋಂ ಐಸೊಲೇಷನ್‍ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹಾಗೂ ಯಾವುದೇ ಮಾರಕ ರೋಗ ಇಲ್ಲದವರಿಗೆ ಹೋಂ ಐಸೊಲೇಷನ್ ಮಾಡಲಾಗುತ್ತದೆ. ಹೋಂ ...
Read More »
Recent Comments