ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ ಚೇತನ್ ಕುಮಾರ್ ಮೇಲೆ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ...
Read More »Monthly Archives: August 2020
ಕೋವಿಡ್ 19 : ಖಾಸಗಿ ಆಸ್ಪತ್ರೆಗಳಲ್ಲಿಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಸೂಚನೆ.
ಶಿವಮೊಗ್ಗ : ಖಾಸಗಿ ಆಸ್ಪತ್ರೆಗಳಲ್ಲಿ ಕರೋನಾ ರೋಗಿಗಳನ್ನು ದಾಖಲಿಸಿ ಯಾವುದೇ ಕುಂದುಕೊರತೆಯಾಗದಂತೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಮಾತನಾಡಿದರು. ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜು, ನಾರಾಯಣ ಹೃದಯಾಲಯ, ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆಗಳಲ್ಲಿ ಕರೋನಾ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 600ಬೆಡ್‍ಗಳಿವೆ. ಇವುಗಳ ಪೈಕಿ ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ...
Read More »ತೀರ್ಥಹಳ್ಳಿ ನ್ಯಾಯಾಲಯಕ್ಕೆ ನಕ್ಸಲ್ ಶೋಭಾಳನ್ನು ಹಾಜರುಪಡಿಸಿದ ಪೊಲೀಸರು
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬರ್ಕಣ ಫಾಲ್ಸ್ ಬಳಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ಇಂದು ನಕ್ಸಲ್ ಶೋಭಾಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2012ರಲ್ಲಿ ನಡೆದ ಫೈರಿಂಗ್ ನ ನಕ್ಸಲ್ ತಂಡಲ್ಲಿ ಶೋಭಾ ಸಹ ಇದ್ದಳು ಎನ್ನಲಾಗಿದ್ದು, ಈಕೆಯ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಳೆದ 11 ವರ್ಷಗಳಿಂದ ಸಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೋಭಾ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೂಲತಹ ಹೊಸನಗರ ತಾಲೂಕು ಮೇಲುಸಂಕದವಳಾದ ಶೋಭಾ 2012ರಿಂದಲೂ ತಲೆಮರೆಸಿಕೊಂಡಿದ್ದಳು. ...
Read More »ಸರಳವಾಗಿ ನಡೆದ ಗೌರಿ ಹಬ್ಬದ ಆಚರಣೆ
ಶಿವಮೊಗ್ಗ: ಗೌರಿ ಹಬ್ಬ ಬಂತು ಎಂದರೆ ಸಾಕು ಪ್ರತಿವರ್ಷ ಮಲೆನಾಡಿನಲ್ಲಿ ಸಂಭ್ರಮ ಇಮ್ಮಡಿಗೊಳ್ಳುತ್ತಿತ್ತು. ಆದರೆ ಈ ಬಾರಿ ಕರೋನಾ ಕರಿನೆರಳು ಗೌರಿ ಹಬ್ಬದ ಮೇಲೆಯೂ ಬಿದ್ದಿದೆ. ಮಲೆನಾಡಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಿ ಹಬ್ಬ ಈ ವರ್ಷ ಸರಳವಾಗಿ ನಡೆದಿದೆ. ಪ್ರತಿ ವರ್ಷ ಗೌರಿ ಹಬ್ಬದಂದು ದೇವಾಲಯದಲ್ಲಿ ಪ್ರತಿಷ್ಟಾಪಿಸುವ ಗೌರಿಯನ್ನು ನೋಡಿಕೊಂಡು ವಿಶೇಷ ಪೂಜೆ ಸಲ್ಲಿಸಲು ಮಹಿಳೆಯರು ಸಾವಿರಾರು ಸಂಖ್ಯೆಯಲ್ಲಿ ಮುಗಿಬೀಳುತ್ತಿದ್ದರು. ಆದರೆ ಈ ಬಾರಿ ಕರೋನಾ ಹಿನ್ನೆಲೆಯಲ್ಲಿ ದೇವಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಇನ್ನು ಮನೆಯಲ್ಲೇ ಗೌರಿಯನ್ನು ಪ್ರತಿಷ್ಠಾಪಿಸಿ ಮಲೆನಾಡಿಗರು ಸರಳವಾಗಿ ಗೌರಿ ...
Read More »ಗುಲಾಬಿ, ಚಪ್ಪಲಿ ಇಟ್ಟು ನದಿಗೆ ಧುಮುಕಿ ಪ್ರೇಮಿಗಳ ಆತ್ಮಹತ್ಯೆ.
ಶಿವಮೊಗ್ಗ : ಬೈಪಾಸ್ ರಸ್ತೆ ಹೊಸ ಸೇತುವೆಯಿಂದ ತುಂಗಾ ನದಿಗೆ ಧುಮುಕಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಯುವಕ ಹಾಗೂ ಯುವತಿ ಕೈಗೆ ವೇಲನ್ನು ಸುತ್ತುಕೊಂಡು ತುಂಗಾ ನದಿಗೆ ಹಾರಿದ್ದಾರೆ. ಸ್ಥಳೀಯರ ನೆರವಿನಿಂದ ಯುವತಿಯರನ್ನು ರಕ್ಷಿಸಿ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಅದರೆ ಚಿಕಿತ್ಸೆ ಫಲಿಸದೆ ಸಾವಾನಪ್ಪಿದ್ದಾರೆ. ಸ್ಧಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗಮಿಸಿದ್ದು ಯುವಕನ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹುರುಳಿಹಳ್ಳಿ ಗ್ರಾಮದ ಸಂತೋಷ(25) ಹಾಗೂ ಯುವತಿಯರನ್ನು ಕಾಕನಹಸುಡಿ ಗ್ರಾಮದ ಅನುಷಾ(20) ಎಂದು ...
Read More »ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ವಿಜಯ್ ರಾಘವೇಂದ್ರ ರವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾದ ಶಿವಮೊಗ್ಗದ ಬಂಕ್ ಒಂದರಲ್ಲಿ ಪೆಟ್ರೋಲ್ ಹಾಕಿಸಿದ್ದಾರೆ ಅದರೆ ಬಂಕ್ ಸಿಬ್ಬಂದಿಗಳು ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ್ದಾರೆ. ನಂತರ ಸಿಬ್ಬಂದಿಗಳು ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದ್ದಾರೆ. ಬಳಿಕ ಕಾರನ್ನು ಲಾರಿಯಲ್ಲಿ ಹತ್ತಿಸಿ ಸರ್ವೀಸ್ ಗೆ ಕಳುಹಿ, ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡಿದರು.
Read More »ವಿದ್ಯುತ್ ಕಂಬಗಳಿಗೆ ಅಡ್ಡಿಯಾಗುವ ಅಕೇಶಿಯಾ ಮರಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ನೆಟ್ಟಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ ತೆರವುಗೊಳಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಎರಡು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸದರೆ ಮಾತ್ರ ಈ ಭಾಗದ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಿದೆ. ಈ ಎರಡು ಇಲಾಖೆಗಳ ನಡುವಿನ ಸಮನ್ವಯದ ...
Read More »ಕಳೆದ ಒಂದು ದಶಕದಲ್ಲಿ 40ಸಾವಿರ ಎಕ್ರೆ ಕಾನು ಅರಣ್ಯ ರಕ್ಷಣೆ: ಅನಂತ ಹೆಗಡೆ ಅಶೀಸರ
ಶಿವಮೊಗ್ಗ : ಕಾನು ಅರಣ್ಯ ಸಂರಕ್ಷಣಾ ಯೋಜನೆ ಜಾರಿಗೊಳಿಸಿದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಒಂದು ದಶಕದಲ್ಲಿ ಸುಮಾರು 40ಸಾವಿರ ಎಕ್ರೆ ಕಾನು ಅರಣ್ಯ ಪ್ರದೇಶ ಸಂರಕ್ಷಣೆ ಸಾಧ್ಯವಾಗಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 2ಲಕ್ಷ ಎಕ್ರೆಯಷ್ಟಿದ್ದ ಕಾನು ಅರಣ್ಯ ಪ್ರದೇಶ ಇದೀಗ 1.40ಲಕ್ಷ ಎಕ್ರೆಗೆ ಇಳಿದಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಇನ್ನೂ 70ಲಕ್ಷ ಕಾನು ಅರಣ್ಯ ಪ್ರದೇಶ ಸಂರಕ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಪರಿಶೀಲಿಸಲು ...
Read More »ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇವತ್ತು ನಟರ ಟೀಮ್ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಲಿದೆ. ಮಧ್ಯಾಹ್ನದವರೆಗೆ ಸಫಾರಿಯಲ್ಲಿ ಭಾಗವಹಿಸಲಿದ್ದಾರೆ. ಅಭಯಾರಣ್ಯದ ಮಧ್ಯದಲ್ಲಿರುವ ಬ್ರಿಟೀಷರ ಕಾಲದ ಬಂಗಲೆಯಲ್ಲಿ ...
Read More »ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡಿದ್ದ ಲಾಂಚ್ ಕೊನೆಗೂ ಸೇಫ್.
ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಹಸಿರುಮಕ್ಕಿ ಲಾಂಚ್ ನಡುನೀರಿನ ಮಧ್ಯೆ ಸಿಲುಕಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಕೊನೆಗೂ ಲಾಂಚ್ ಸೇಫಾಗಿ ದಡ ಸೇರಿದ್ದರಿಂದಾಗಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಹಸಿರುಮಕ್ಕಿ ಲಾಂಚ್ ಹೊಸನಗರ ತಾಲೂಕು ಕೆ.ಬಿ.ಕ್ರಾಸ್ ನ ಕಡೆಯಿಂದ ಸಾಗರ ತಾಲೂಕಿನ ಹುಲಿದೇವರ ಬನದ ಕಡೆಗೆ ಹಿನ್ನೀರಿನಲ್ಲಿ ಪ್ರಯಾಣ ಆರಂಭಿಸಿತ್ತು. ಆದರೆ ಇದೇ ವೇಳೆಗೆ ಬಾರಿ ಗಾಳಿ ಆರಂಭಗೊಂಡಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಲಾಂಚ್ ನಡುನೀರಿನಲ್ಲೇ ಸಿಲುಕಿಕೊಂಡಿದೆ. ಗಾಳಿಯ ರಭಸ ಹೆಚ್ಚಾದಂತೆ ಲಾಂಚ್ ಇನ್ನೊಂದೆಡೆಗೆ ...
Read More »
Recent Comments