ಶಿವಮೊಗ್ಗ: ಮಾಸ್ಕ ಹಾಕದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹೊಸನಗರ ಠಾಣೆ ಪೊಲೀಸರು ದಂಡ ವಿಧಿಸಿದ್ದರು. ಆದರೆ ದಂಡ ಕಟ್ಟಿದ ಸಿಟ್ಟಿಗೆ ಆತ ಪೊಲೀಸರ ಬೈಕನ್ನೇ ಕದ್ದು ಪರಾರಿಯಾಗಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಚೇತನ್ ಎಂಬಾತ ಮಾಸ್ಕ್ ಹಾಕದೆ ಓಡಾಡುತ್ತಿದ್ದಾಗ ಪೊಲೀಸರು ಆತನನ್ನು ಹೊಸನಗರ ಪೊಲೀಸ್ ಠಾಣೆಗೆ ಕರೆತಂದು ದಂಡ ವಿಧಿಸಿದ್ದಾರೆ. ದಂಡ ಪಾವತಿಸಿ ಹೊರಬಂದ ಚೇತನ್ ಪೊಲೀಸ್ ಠಾಣೆ ಪಕ್ಕದಲ್ಲೇ ನಿಲ್ಲಿಸಿದ್ದ ಪೊಲೀಸ್ ಪೇದೆ ರಾಘವೇಂದ್ರ ಅವರ ಬೈಕ್ ಕದ್ದು ಪರಾರಿಯಾಗಿದ್ದಾನೆ. ಈ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ...
Read More »Monthly Archives: September 2020
ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ಶಿವಮೊಗ್ಗ ನಂಬರ್ ಓನ್
ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳಿಗೂ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಹಿಂಬಾಲಕರನ್ನು ವೃದ್ಧಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ ಓನ್ ಸ್ಥಾನಕ್ಕೆ ಏರಿದೆ. ಜುಲೈ 16 ರಿಂದ ಸೆಪ್ಟಂಬರ್ 15 ರವರೆಗಿನ ಅವಧಿಯಲ್ಲಿ ಯಾರು ಹೆಚ್ಚು ಫೇಸ್ ಬುಕ್ ಹಿಂಬಾಲಕರನ್ನು ಹೊಂದುತ್ತಾರೆಯೋ ಅವರು ಪ್ರಥಮ ಸ್ಥಾನ ಪಡೆಯುತ್ತಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿತ್ತು. ಅದರಂತೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ...
Read More »ಭದ್ರಾ ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ಅಧಿಕಾರ ಸ್ವೀಕಾರ
ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ರೈತ ಮೋರ್ಚಾದ ಮುಖಂಡೆ ಪವಿತ್ರಾ ರಾಮಯ್ಯ ಅವರು ಅಧಿಕಾರ ಸ್ವೀಕರಿಸಿದರು. ಇಂದು ಮಲವಗೊಪ್ಪದಲ್ಲಿರುವ ಭದ್ರಕಾಡಾ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭದ್ರಕಾಡಾ ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪವಿತ್ರ ರಾಮಯ್ಯ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮಕೈಗೊಳ್ಳಲಾಗುವುದು. ಅಲ್ಲದೆ ಅಚ್ಚುಕಟ್ಟು ಪ್ರದೇಶ ರೈತರ ಸಭೆ ನಡೆಸಿ ರೈತರ ಸಮಸ್ಯೆ ಆಲಿಸಿ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು.
Read More »ಎರಡು ಕೆಜಿ ಗಾಂಜಾ ವಶ.
ಶಿವಮೊಗ್ಗ: ಸ್ವಿಫ್ಟ್ ಕಾರಿನಲ್ಲಿ ಕಾರ್ಕಳದಿಂದ ತೀರ್ಥಹಳ್ಳಿಗೆ ಸಾಗಿಸುತ್ತಿದ್ದ ಎರಡು ಕೆಜಿ ಗಾಂಜಾವನ್ನು ತೀರ್ಥಹಳ್ಳಿ ಚೆಕ್ ಪೋಸ್ಟ್ ನಲ್ಲಿ ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಮೂಲದ ಜೀಶನ್, ಜೀನತ್, ಜಬೀರ್, ಮುಬಾರಕ್ ಸ್ವಿಫ್ಟ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ತೀರ್ಥಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಮಾಡುವಾಗ ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಭದ್ರಾದಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ. ಭದ್ರಾವತಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ
ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದಾಗಿ ಜಲಾಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದಾಗಿ ಹರಿದು ಬರುತ್ತಿರುವ ನೀರನ್ನು ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 50 ಸಾವಿರ ಕ್ಯೂಸೆಕ್ ನೀರನ್ನೂ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿರುವ ಭದ್ರಾ ಸೇತುವೆ ನೀರಿನಲ್ಲಿ ಮುಳುಗಿದ್ದು, ಈ ಸೇತುವೆಯ ಮೇಲೆ ವಾಹನ ಹಾಗೂ ಜನ ...
Read More »ಈ ಬಾರಿ ಅತ್ಯಂತ ಸರಳವಾಗಿ ದಸರ ಆಚರಣೆ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿರಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು. ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ: ಚಂದ್ರಶೇಖರ ಆಜಾದ್ ...
Read More »ಮರಕ್ಕೆ ಕಾರ್ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು.
ಶಿವಮೊಗ್ಗ : ಶಿವಮೊಗ್ಗ ದಿಂದ N R ಪುರಕ್ಕೆ ತೆರಳುತ್ತಿದ್ದ ಸೆಲೆರಿಯೋ ಕಾರು ಕಾಚಿನಕಟ್ಟೆಯ ಬಳಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರನ್ನ ಕಟ್ ಮಾಡುವ ಮೂಲಕ ಕಾರಿನಲ್ಲಿದ್ದ ಜನರನ್ನು ಹೊರಗೆ ತೆಗೆಯಲಾಯಿತು. ಇವರನ್ನೆಲ್ಲ ಎನ್ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ. ಆದರೆ ಯಾವುದೇ ನಿಖರವಾದ ಮಾಹಿತಿಗಳು ದೊರೆತಿಲ್ಲ. ತುಂಗಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತ್ ಕಾರ್ಯದರ್ಶಿ ಎಸಿಬಿ ಬಲೆಗೆ.
ಶಿಕಾರಿಪುರ : ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಪಂಚಾಯತ್ ನ ಕಾರ್ಯದರ್ಶಿ ಶಿವಪ್ಪ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ. ಇಂದು ಮಾಧ್ಯಹ್ನ ಗ್ರಾಮ ಪಂಚಾಯತಿ ಕಛೇರಿಯಲ್ಲಿ NREG ಕೆಲಸದ 2,10,000 ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಂಜುನಾಥ ಎಂಬುವರ ಬಳಿ 8,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ನೇರವಾಗಿ ಎಸಿಬಿ ಡಿವೈಎಸ್ ಪಿ ಲೋಕೇಶ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Read More »ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.
ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ. ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
Read More »ಆತ್ಮಹತ್ಯೆಗೆ ಮುಂದಾಗಿದ್ದವನ ಮನವೊಲಿಸಿ ರಕ್ಷಿಸಿದ ಪಿಎಸ್ಐ ತಿರುಮಲೇಶ್.
ಶಿವಮೊಗ್ಗ : ಕಟ್ಟಡದ ನಿರ್ಮಾಣದ ಬಿಲ್ ಸೆಟ್ಲ್ ಮಾಡದೆ 9 ತಿಂಗಳವರೆಗೆ ಸತಾಯಿಸುತ್ತಿದ್ದ ಗುತ್ತಿಗೆದಾರನಿಂದ ಬೇಸತ್ತ ಉಪಗುತ್ತಿಗೆದಾರನೋರ್ವನು ಆತ್ಮಹತ್ಯೆಗೆ ಮುಂದಾಗಿದ್ದಾ ಘಟನೆ ಗಾಡಿಕೊಪ್ಪದಲ್ಲಿ ನಡೆದ್ದಿದೆ. ಗಾಡಿಕೊಪ್ಪದ ಅಪಾರ್ಟ್ ಮೆಂಟ್ ವೊಂದರ ನಿರ್ಮಾಣದ ಗುತ್ತಿಗೆ ಹಿಡಿದ ಗಣೇಶ್ ಎಂಬಾತ ಗೌತಮ್ ಎಂಬ ಉಪ ಗುತ್ತಿಗೆದಾರನಿಗೆ 21 ಲಕ್ಷ ರೂ ಹಣ ನೀಡದೆ ಕಳೆದ ಒಂಬತ್ತು ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದನು. ಈ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಈ ವಿಚಾರ ತಿಳಿದ ಸ್ಥಳೀಯರು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪಿಎಸ್ಐ ...
Read More »
Recent Comments