ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ.ಈಗಾಗಲೇ ಹಳ್ಳಿ ಹಳ್ಳಿಯಲ್ಲೂ ಚುನಾವಣಾ ವೇದಿಕೆ ಸಿದ್ಧಗೊಂಡಿದೆ. ಚುನಾವಣೆ ಮಾರ್ಗಸೂಚಿಯನ್ನು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. * ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು. * ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯ. * ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. * ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು. * ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ...
Read More »Monthly Archives: September 2020
ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ ಇದೀಗ ಮಠದ ಅಂಗಳಕ್ಕೂ ಕಾಲಿಟ್ಟಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಸೋಂಕು
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಬಿಸಿ ತಟ್ಟಿದೆ. ನಿನ್ನೆ ಕರೋನಾ ತಪಾಸಣೆಗೆ ಈಶ್ವರಪ್ಪ ಒಳಗಾಗಿದ್ದರು. ಈ ತಪಾಸಣೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಈಶ್ವರಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ ಅವರ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಹಾಗೂ ಅವರ ಕುಟುಂಬದವರು ಕರೋನಾ ಟೆಸ್ಟ್ ಗೆ ಒಳಗಾಗಿದ್ದರು. ಈಶ್ವರಪ್ಪ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ...
Read More »
Recent Comments