Monthly Archives: October 2020

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ.

  ಶಿವಮೊಗ್ಗ : ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟಿಸಲಾಗಿದೆ. ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ 130 ಜನ ಸಾಧಕರು ಅರ್ಜಿ ಸಲ್ಲಿಸಿದರು ಆದರೆ ಈ ಪೈಕಿ 26 ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದ 65 ಜನ ಸಾಧಕರಿಗೆ ಮಾತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಸುರೇಶ್ ಗೌಡರು ಆದೇಶವನ್ನು ಹೊರಡಿಸಿದ್ದಾರೆ. ಈ ಬಾರಿ ರಾಜ್ಯ ಸರ್ಕಾರ ಪ್ರಕಟಿಸಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಶಿವಮೊಗ್ಗದ ಮೂವರು ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ ...

Read More »

ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿ ಖೈದಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.

  ಶಿವಮೊಗ್ಗ; ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿ ಖೈದಿ ಮಂಜುನಾಥ್ 33 ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ನಿನ್ನೆ ಸಂಜೆ ಜೈಲಿನ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್ ನಿಂದ ಮಂಜು ನೇಣು ಬಿಗಿದುಕೊಂಡಿದ್ದಾನೆ.ತಕ್ಷಣ ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾನೆ ಎನ್ನಲಾಗಿದೆ. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚನಾಮೆ ಶವಪರೀಕ್ಷೆ..ವಿಡಿಯೋ ಚಿತ್ರೀಕರಣ ಮಾಡಲಾಗಿದೆ.ಮೃತ ಕೈದಿ ಮಂಜು ಸಾಗರ ಎಸ್ ಎಸ್ ಕಾಲೊನಿ ನಿವಾಸಿಎಂದು ತಿಳಿದು ಬಂದಿದೆ.

Read More »

ಅವಾಂತರ ಸೃಷ್ಟಿಸಿದ ಅರ್ಧಗಂಟೆ ಮಳೆ

ಶಿವಮೊಗ್ಗ: ಇಂದು ಸಂಜೆ ವೇಳೆ ಅರ್ಧ ಗಂಟೆ ಸುರಿದ ಮಳೆ ಶಿವಮೊಗ್ಗ ನಗರದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಕಳೆದ‌ ಮೂರು ದಿನಗಳಿಂದ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗುತ್ತಿದೆ. ಆದರೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ಶಿವಮೊಗ್ಗ ಪಾರ್ಕ್ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಮೇಲೆ ಬರೋಬ್ಬರಿ ಎರಡು ಅಡಿಗೂ ಹೆಚ್ಚು ನೀರು ನಿಂತಿತ್ತು. ಅರ್ಧ ಗಂಟೆ ಸುರಿದ ಧಾರಾಕಾರ ಮಳೆ ...

Read More »

ಮಾರ್ಗಸೂಚಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ರಾಜೇಶ ಸುರಗಿಹಳ್ಳಿ

  ಶಿವಮೊಗ್ಗ : ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸರ್ಕಾರದ ಆರೋಗ್ಯ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ಇನ್ನು ಎರಡು ಮೂರು ದಿನಗಳು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ನೀರಿಕ್ಷೆ ಇದೆ. ಮೋಡ, ಮಳೆ, ಶೀತ ವಾತಾವರಣವು ಕೋವಿಡ್ ವೈರಸ್ ಹರಡುವಿಕೆಗೆ ಪೂರಕ ವಾತಾವರಣವಾಗಿರುತ್ತದೆ. ಅಷ್ಟೇ ಅಲ್ಲದೆ ವೈರಸ್ ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆ, ವಾಂತಿ, ಬೇದಿ ಇತರೆ ಕಾಯಿಲೆಗಳಂತಹ ಅನೇಕ ...

Read More »

ಈದ್ ಮಿಲಾದ್ ಹಬ್ಬವನ್ನು ಕೋವಿಡ್-19ರ ಶಿಷ್ಟಾಚಾರದಂತೆ ಆಚರಿಸಲು ಮನವಿ

  ಶಿವಮೊಗ್ಗ : ಕೋವಿಡ್-19 ಹಿನ್ನೆಲೆಯಲ್ಲಿ ಅ.30ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಮಾದರ್ ಪಟೇಲ್ ತಿಳಿಸಿದ್ದಾರೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕøತಿಕ ಕಾರ್ಯಕ್ರಮ/ಸಭೆ ಸಮಾರಂಭಗಳನ್ನು, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜೆ ಬಳಕೆಯನ್ನು, ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವುದು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿ/ದರ್ಗಾಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಉಪಯೋಗಿಸುವುದು, ...

Read More »

ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ : ಬಿ.ಎಸ್.ಯಡಿಯೂರಪ್ಪ

  ಶಿವಮೊಗ್ಗ  : ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಈಗಾಗಲೇ 30ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದ ಅವರು ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ ದೇಶದ ವಿಶಿಷ್ಟ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು. ಇಲ್ಲಿಗೆ ಭೇಟಿ ನೀಡುವ ...

Read More »

ಪ್ರತಿಯೊಬ್ಬರಿಗೂ ನಿವೇಶನ, ಸೂರು ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ಶಿವಮೊಗ್ಗ : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ...

Read More »

ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು ...

Read More »

5 ಗಂಟೆಗಳ ಸತತ ಕಾರ್ಯಾಚರಣೆ.ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ. 

ಶಿವಮೊಗ್ಗ : ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದು ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡ ಅಮೋಘ (29) ಎಂಬ ಯುವಕನನ್ನು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ 5 ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸನ ಮೂಲದ ಅಮೋಘ ತಮಿಳುನಾಡು ಮೂಲದ ಸಂಜೀವ್ ಕಪೂರ್ ಮೂಲದ ಮಧು ಎಂಬುವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇನಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪಿನಲ್ಲಿ ಕೊಡಚಾದ್ರಿ ಗಿರಿ ಹತ್ತಿ ...

Read More »

ಶಿವಮೊಗ್ಗದಲ್ಲಿ ತಗ್ಗಿದ ಕರೋನಾ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಜನರಿಗೆ ಇದೊಂದು ಗುಡ್ ನ್ಯೂಸ್. ಜಿಲ್ಲೆಯಲ್ಲಿ ಗಣನೀಯವಾಗಿ ತಗ್ಗಲಾರಂಭಿಸಿದೆ ಕರೋನಾ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಪ್ರತಿದಿನ ಮೂರಂಕಿ ದಾಟುತ್ತಿದ್ದ ಕರೋನಾ ಸೋಂಕಿತರ ಸಂಖ್ಯೆ ಇದೀಗ ಎರಡಂಕಿಗೆ ಇಳಿದಿದೆ. ಹೌದು ಕಳೆದ ವಾರದವರೆಗೂ ಪ್ರತಿದಿನ ಶಿವಮೊಗ್ಗ ಜಿಲ್ಲೆಯಲ್ಲಿ 350ರಿಂದ 370 ಕರೋನಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಈ ಪ್ರಮಾಣ 100ರ ಸಂಖ್ಯೆಗೆ ಇಳಿದಿತ್ತು. ಆದರೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕರೋನಾ ಸೋಂಕಿತರ ಸಂಖ್ಯೆ ಕೇಳಿದರೆ ಯಾರಿಗಾದರೂ ಆಶ್ಚರ್ಯವಾಗುತ್ತದೆ. ಹೌದು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments