Monthly Archives: November 2020

ಒಂದು ನಾಯಿಯ ಕಥೆ

ಶಿವಮೊಗ್ಗ: ಇದು ಅಂತಿಂಥ ನಾಯಿಯಲ್ಲ. ಮಾಲೀಕರಿಂದ ತಪ್ಪಿಸಿಕೊಂಡ ಈ ನಾಯಿ ಇದೀಗ ಪೊಲೀಸರ ವಶದಲ್ಲಿದೆ. ಈ ನಾಯಿ ಪೊಲೀಸರ ವಶಕ್ಕೆ ಬಂದ ಕಥೆಯೇ ಒಂದು ರೋಚಕ. ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಮಾಲೀಕರಿಂದ ತಪ್ಪಿಸಿಕೊಂಡಿದ್ದ ದಷ್ಟಪುಷ್ಟವಾಗಿದ್ದ ಲ್ಯಾಬ್ರಡಾರ್ ನಾಯಿ ಕಾಣಿಸಿಕೊಂಡಿದೆ. ಯಾರೋ ಸಾಕಿದ ನಾಯಿ ಎಂಬುದನ್ನು ಅರಿತ ಮೀನು ವ್ಯಾಪಾರಿಯೊಬ್ಬರು ನಾಯಿಯನ್ನು ಕರೆದುಕೊಂಡು ತನ್ನ ಮನೆಗೆ ಬಂದಿದ್ದಾರೆ. ನಾಯಿಯ ಮಾಲೀಕರು ಬರಬಹುದೇನೋ ಎಂದು ಕಾದಿದ್ದಾರೆ. ಆದರೆ ನಾಯಿಯ ಮಾಲೀಕರು ಬರಲೇ ಇಲ್ಲ. ಅಷ್ಟರಲ್ಲಾಗಲೇ ಸಂಜೆಯಾಗಿದ್ದು, ನಾಯಿ ಕೂಗಾಡಲಾರಂಭಿಸಿದೆ‌. ಆಗ ಏನು ಮಾಡಬೇಕೆಂದು ದಿಕ್ಕುತೋಚದ ಮೀನು ವ್ಯಾಪಾರಿ ತುಂಗಾ ...

Read More »

ಸುಲಿಗೆ ಪ್ರಕರಣ ಮೂವರು ಆರೋಪಿಗಳ ಬಂಧನ ಹಾಗೂ 15ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ ಕಾರು ವಶ

  ನವೆಂಬರ್ 24 ರಂದು 35 ವರ್ಷದ ನಫೀಸ್ ಆಲಂ ಎಂಬುವವರು ಕೊಲ್ಲಾಪುರದಿಂದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರೂ 15 ಲಕ್ಷ ರೂ ನಗದನ್ನು ಇಟ್ಟುಕೊಂಡು ಆನವಟ್ಟಿ ಮಾರ್ಗವಾಗಿ ಸಾಗರದ ಕಡೆಗೆ ಬರುತ್ತಿರುವಾಗ, ರಾತ್ರಿ ಸುಮಾರು 10-30 ಗಂಟೆಗೆ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಇವರನ್ನು ಹಿಂಬಾಲಿಸಿಕೊಂಡು ಬಂದು, ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಆನವಟ್ಟಿ – ಸೊರಬ ಮುಖ್ಯ ರಸ್ತೆಯ ಕೊರಕೋಡು ಕ್ರಾಸ್ ನ ಹತ್ತಿರ ಕಾರನ್ನು ಅಡ್ಡಗಟ್ಟಿ, ಇವರಿಗೆ ಹೆದರಿಸಿ ಈ ಹದಿನೈದು ಲಕ್ಷ ನಗದು ಮತ್ತು ಸ್ವಿಫ್ಟ್ ಡಿಸೈರ್ ಕಾರನ್ನು ಬಲವಂತವಾಗಿ ...

Read More »

ಕಾಣೆಯಾದ ಬಾಲಕ ಶವವಾಗಿ ಪತ್ತೆ.

  ಶಿವಮೊಗ್ಗ: ಕಾಣೆಯಾಗಿದ್ದ ಬಾಲಕ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಹೊಳೆಹನಸವಾಡಿಯಲ್ಲಿ ನಡೆದಿದೆ. ಶಿವಮೊಗ್ಗ ಹೊರ ವಲಯದ ಚಿಕ್ಕಲ್ ನಿವಾಸಿಯಾದ ಮೊಹಮದ್ ಹುಸೈನ್(12) ಮೊನ್ನೆ 23 ರಂದು ತನ್ನ ಸ್ನೇಹಿತರ ಜೊತೆ ತುಂಗಾ ನದಿಯಲ್ಲಿ ಈಜಾಡಲು ಹೋಗಿದ್ದ, ಈ ವೇಳೆ ಹುಸೈನ್ ನದಿಯಲ್ಲಿ ಮುಳುಗಿದ್ದಾನೆ. ಈತನ ಜೊತೆಯ ಸ್ನೇಹಿತರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ವೇಳೆಗಾಗಲೇ ಹುಸೈನ್ ತಂದೆ ನೂರ್ ಅಹಮದ್ ಸ್ನೇಹಿತರಲ್ಲಿ ವಿಚಾರಿಸಿದರು ಸಹ ಅವರು ನದಿಯಲ್ಲಿ ಮುಳಗಿರುವ ವಿಚಾರ ತಿಳಿಸಲಿಲ್ಲ. ಇದರಿಂದ ಹುಸೈನ್ ತಂದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ...

Read More »

ದೊಡ್ಡೇರಿ ಗ್ರಾಮಪಂಚಾಯಿತಿಯಲ್ಲಿ ನಡೆಯುತ್ತಿದೆಯೇ ಅವ್ಯವಹಾರ?

  ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವೈಯಕ್ತಿಕವಾಗಿ ಹಣ ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ. ಕಾಮಗಾರಿ ಅನುಷ್ಠಾನ ಆಗದೆ ಕೂಲಿ ಹಣ ಪಾವತಿಸುತ್ತಿದ್ದಾರೆ. ಆ ಊರಿನವರೇ ಅಲ್ಲದ ವ್ಯಕ್ತಿಗಳಿಗೆ ಹಣವನ್ನು ಪಾವತಿ ಮಾಡಲಾಗಿದೆ. ಇದು ದೊಡ್ಡೇರಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ‌. ದೊಡ್ಡೇರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ರವರು ಎಲ್ಲಾ ಅವ್ಯವ್ಯಹಾರಕ್ಕೆ ಸಾಥ್ ನೀಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read More »

ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 04 ಜನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮುಖ್ಯ ಮಂತ್ರಿಗಳ ಚಿನ್ನದ ಪದಕ

  ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ, ಅಧಿಕಾರಿಗಳಾದ ಡಾ|| ಶೇಖರ್ ಹೆಚ್. ಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ. ಕೆ ಟಿ ಗುರುರಾಜ್ ಪೊಲೀಸ್ ನಿರೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ. ಅಂಥೋನಿ, ಎಎಸ್ಐ, ದೊಡ್ಡಪೇಟೆ ಪೊಲೀಸ್ ಠಾಣೆ, ಶಿವಮೊಗ್ಗ , ಇಂದ್ರೇಶ, ಸಿಹೆಚ್.ಸಿ- 1968, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ* 2017ನೇ ಹಾಗೂ 2018ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿರುತ್ತಾರೆ. ಇವರಿಗೆ ಶಿವಮೊಗ್ಗ ...

Read More »

ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ ನಗರದ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಕೆ.ಬಿ. ಪ್ರಸನ್ನ ಕುಮಾರ್ ಅವರ 45ನೇ ಹುಟ್ಟುಹಬ್ಬದ ಅಂಗವಾಗಿ ಅವರ ನಿವಾಸದಲ್ಲಿ ಹಾಗೂ ಜೀವನ ಸಂಜೆ ವೃದ್ಧಾಶ್ರಮದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಕೋರಿ ಅಚರಿಸಲಾಯಿತು.  

Read More »

ರೈಲಿನಿಂದ ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದಿದ್ದ ಯುವತಿ ಶವ ಪತ್ತೆ. ಸತತ 36 ಗಂಟೆಗಳ ಕಾರ್ಯಚರಣೆ.

  ಶಿವಮೊಗ್ಗ : ನ.12 ರಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಜನಶತಾಬ್ದಿ ರೈಲಿನಲ್ಲಿ ಸಹನಾ ಹಾಗೂ ಅವರ ತಾಯಿ ಪ್ರಯಾಣ ಮಾಡುತ್ತಿದ್ದರು. ಸಿ ಎ ವ್ಯಾಸಂಗ ಮಾಡುತ್ತಿದ್ದ ಸಹಾನ(24) ರೈಲಿನ ಬಾಗಿಲ ಬಳಿ ನಿಂತಿದ್ದಾಗ ಅಕಸ್ಮತ್ ಅಗಿ ಕಾಲು ಜಾರಿ ತುಂಗಾ ನದಿಗೆ ಬಿದ್ದಿದ್ದಳು. ಕಳೆದ ಎರಡು ದಿನದಿಂದ ಸಹನಾ ಶವಕ್ಕಾಗಿ ತುಂಗಾ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ತುಂಗಾ ನದಿಯಲ್ಲಿ ಸಹನಾ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದು 36 ಗಂಟೆಯ ನಂತರ ಸಹನಾ ಶವ ಸಚಿವ ಈಶ್ವರಪ್ಪನವರ ...

Read More »

ಟ್ರಾಫಿಕ್ ವ್ಯವಸ್ಥೆ ಸುಧಾರಣೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುಧಾರಿಸಲು ಸ್ಮಾರ್ಟ್ ಸಿಟಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಉಬ್ಬುಗಳ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅನುದಾನವನ್ನು ಬಳಸಿಕೊಳ್ಳಲಾಗುವುದು. ರಸ್ತೆ ಅಪಘಾತ ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ...

Read More »

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಸಂಸದ ಬಿ.ವೈ.ರಾಘವೇಂದ್ರ

ದಿಶಾ ಸಮಿತಿ ಸಭೆ ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ರಾಮ ಜ್ಯೋತಿ ಯೋಜನೆ: ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ...

Read More »

ಮೂವರು ಕಳ್ಳರ ಬಂಧನ ಹಾಗೂ 11 ದ್ವಿ ಚಕ್ರ ವಾಹನ ವಶ

ಶಿವಮೊಗ್ಗ : ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ನವೆಂಬರ್ 11ರಂದು ತುಂಗಾನಗರ ಪೊಲೀಸರು ಮೂವರು ದ್ವಿ ಚಕ್ರ ವಾಹನ ಕಳ್ಳರನ್ನು ಬಂಧಿಸಿ, 11 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆಮಾಡಿ, ಆರೋಪಿತರಿಂದ ಒಟ್ಟು 3.44 ಲಕ್ಷ ರೂ. ಮೌಲ್ಯದ 11 ದ್ವಿ ಚಕ್ರ ವಾಹನ ವಶಪಡಿಸಿಕೊಂಡಿರುತ್ತಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಆರೋಪಿಗಳು ಹಾಗೂ ಕಳ್ಳತನವಾದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments