Breaking News

Monthly Archives: November 2020

ಪೊಲೀಸರಿಗೆ ಮುಂಬಡ್ತಿ…

  ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜು ಅವರು ಇಬ್ಬರು ಸಿ.ಹೆಚ್.ಸಿ. ಅವರನ್ನು ಎಎಸ್ಐ ಹುದ್ದೆಗೆ ಹಾಗೂ ಇಬ್ಬರು ಸಿಪಿಸಿ ಅವರಿಗೆ ಸಿ.ಹೆಚ್.ಸಿ ಹುದ್ದೆಗೆ, ಓರ್ವ ಎ.ಹೆಚ್.ಸಿ ರವರಿಗೆ ಎ.ಆರ್.ಎಸ್.ಐ. ಹುದ್ದೆಗೆ ಹಾಗೂ 2 ಎಪಿಸಿ ರವರಿಗೆ ಎ.ಹೆಚ್.ಸಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶಿಸಿದ್ದಾರೆ. ಸಿ.ಹೆಚ್.ಸಿ ಹುದ್ದೆಯಿಂದ ಎಎಸ್ಐ ಹುದ್ದೆಗೆ ಮುಂಬಡ್ತಿ ವಿವರ ಮಹೇಂದ್ರಕುಮಾರ್, ಸಿ.ಹೆಚ್.ಸಿ 531, ಶಿವಮೊಗ್ಗ ಟ್ರಾಫಕ್ ಪಶ್ಚಿಮ ಠಾಣೆ ಇವರಿಗೆ ನಗರ ಪೊಲೀಸ್ ಠಾಣೆಯ ಎಎಸ್ಐ ಹುದ್ದೆಗೆ ಮುಂಬಡ್ತಿ ನೀಡಿದೆ. ನಾಗರಾಜ್, ಸಿ.ಹೆಚ್.ಸಿ 563, ತುಂಗಾನಗರ ಪೊಲೀಸ್ ಠಾಣೆ ಇವರಿಗೆ ಜೋಗ ...

Read More »

ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೇರವಾಗಿ ಅಕ್ಕಿ ಬೇಳೆ ವಿತರಣೆ: ಜ್ಯೋತಿ ಎಸ್.ಕುಮಾರ್

  ಶಿವಮೊಗ್ಗ : ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ 108ದಿನಗಳ ಅವಧಿಯ ಅಕ್ಕಿ ಮತ್ತು ಬೇಳೆಯನ್ನು ನೇರವಾಗಿ ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಪ್ರಸ್ತುತ 53ದಿನಗಳ ಅವಧಿಯ ರೇಶನ್ ಸರಬರಾಜಾಗಿದ್ದು, ತಲಾ ವಿದ್ಯಾರ್ಥಿಗೆ ಪ್ರತಿದಿನಕ್ಕೆ 100ಗ್ರಾಂ ಅಕ್ಕಿ ಮತ್ತು 37ಗ್ರಾಂ ಬೇಳೆಯಂತೆ ಒಂದೇ ಕಂತಿನಲ್ಲಿ ಇಂದಿನಿAದ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಡಿಸೆಂಬರ್‌ನಿAದ ಶಾಲೆ ಆರಂಭ ಸಾಧ್ಯತೆ: ...

Read More »

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಲಿ

ಶಿವಮೊಗ್ಗ: ಉಪ ಚುನಾವಣಾ ಫಲಿತಾಂಶದ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳುವ ಮೂಲಕ ಜನರ ದಿಕ್ಕುತಪ್ಪಿಸಿದ್ದ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರೇ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ. ಕರ್ನಾಟಕದ ಶಿರಾ ಮತ್ತು ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸಿದ್ದರಾಮಯ್ಯ ...

Read More »

ಕಲಾವಿದನ ಕುಟುಂಬಕ್ಕೆ ನೆರವಾದ ಪತ್ರಕರ್ತ ಶಿ.ಜು.ಪಾಶ.

  ಶಿವಮೊಗ್ಗ : ಶಿವಮೊಗ್ಗದ ಕಲಾವಿದರಾದ ಕಿಶೋರ್ ಇತ್ತೀಚೆಗೆ ಮೃತಪಟ್ಟಿದ್ದರು. ಕಿಶೋರ್ ತಿರಿಕೊಂಡ ಕೆಲವೇ ದಿನಗಳಲ್ಲಿ ಅವರ ತಾಯಿಯೂ ಸಹ ತೀರಿಕೊಂಡರು. ಕಿಶೋರ್ ಕುಟುಂಬದಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾಯಿತು. ಈ ಸಂಬಂಧದಲ್ಲಿ ಶಿವಮೊಗ್ಗದ ಪತ್ರಕರ್ತರ ಮಲೆನಾಡು ಎಕ್ಸ್ಪ್ರೆಸ್ ಪತ್ರಿಕೆಯ ಸಂಪಾದಕರಾದ ಶಿ.ಜು ಪಾಶರವರು ಮೊದಲು 35000 ರೂಪಾಯಿಗಳನ್ನ ಸಂಗ್ರಹಿಸಿದರು ನಂತರ ತಾವೇ ಸ್ವತಹ 50000 ರೂಪಾಯಿಗಳ ನೆರವು ನೀಡಿದ್ದಾರೆ. ಈ ಸಂದರ್ಭದಲ್ಲಿ ಶಿವಮೊಗ್ಗ ಪತ್ರಿಕಾ ಭವನದ ಅಧ್ಯಕ್ಷರಾದ ಮಂಜುನಾಥ್ ಮಲೆನಾಡು ಎಕ್ಸ್ಪ್ರೆಸ್ ಪತ್ರಿಕೆಯ ಸಂಪಾದಕರಾದ ಶಿ.ಜು.ಪಾಶ, ಸುಧೀರ್ ಪದ್ಮನಾಭ ಉಪಸ್ಥಿತರಿದ್ದರು.

Read More »

ಬಸವನಗುಡಿ ರಸ್ತೆಯಲ್ಲಿ ರೌಡಿಶೀಟರ್ ಕೊಲೆ

  ಶಿವಮೊಗ್ಗ : ಹಾಡುಹಗಲೇ ರೌಡಿಶೀಟರ್ ಮಂಜುನಾಥ್ (30) ನನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಸವನಗುಡಿ 5ನೇ ತಿರುವಿನಲ್ಲಿ ಇಂದು ಮಧ್ಯಾಹ್ನ ಮಂಜುನಾಥ್ ನಡೆದುಕೊಂಡು ಹೋಗುತ್ತಿದ್ದಾಗ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಮಂಜುನಾಥ್ ನನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ ಪಿ ಶಾಂತರಾಜು ಭೇಟಿ ನೀಡಿದರು.

Read More »

ಶರಾವತಿ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಎಸ್.ಯಡಿಯೂರಪ್ಪ

  ಶಿವಮೊಗ್ಗ : ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ...

Read More »

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡೆನ್‌ ಆಯ್ಕೆ, Joe Biden:

Joe Biden ವಾಷಿಂಗ್ಟನ್‌: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದ್ದು ಜೋ ಬಿಡೆನ್‌ ಅಮೆರಿಕದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮ್ಯಾಜಿಕ್‌ ನಂಬರ್‌ಗಿಂತ 14 ಮತ ಹೆಚ್ಚು ಪಡೆಯುವ ಮೂಲಕ ಡೆಮಾಕ್ರಟಿಕ್‌ ಪಕ್ಷದ ಜೋ ಬಿಡೆನ್‌ ದಾಖಲಾರ್ಹ ಜಯ ಪಡೆದಿದ್ದಾರೆ. ಜೋ ಬಿಡೆನ್‌ ಒಟ್ಟು 284 ಮತ ಗಳಿಸಿದ್ದಾರೆ. ಡೊನಾಲ್ಡ್‌ ಟ್ರಂಪ್‌ 214 ಮತ ಪಡೆದುಕೊಂಡಿದ್ದಾರೆ. ಎರಡನೇ ಬಾರಿ ಅಧ್ಯಕ್ಷ ಪದವಿ ಅಲಂಕರಿಸುವ ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷನಾಗುವ ಕನಸು ಭಗ್ನಗೊಂಡಿದೆ. ಜೋ ಬಿಡೆನ್‌ ಒಟ್ಟು 49.5ರಷ್ಟು ಮತ ಪಡೆದಿದ್ದರೆ, ಡೊನಾಲ್ಡ್‌ ...

Read More »

ದೀಪಾವಳಿಗಿಲ್ಲ ಪಟಾಕಿ ರಂಗು

ಶಿವಮೊಗ್ಗ: ದೀಪಾವಳಿ ಹಬ್ಬ ಬೆಳಕಿನ ಹಬ್ಬ. ದೀಪಾವಳಿ ಬಂದರೆ ಸಾಕು ಪಟಾಕಿಗಳ ಸದ್ದು ಎಲ್ಲೆಡೆ ಮಾರ್ದನಿಸುತ್ತಿತ್ತು. ಪಟಾಕಿಗಳು ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಿದ್ದವು. ಆದರೆ ಈ ಬಾರಿ ಕಾಣಿಸಿಕೊಂಡಿರುವ ಮಹಾಮಾರಿ ಕರೋನಾ ದೀಪಾವಳಿ ಸಂಭ್ರಮಕ್ಕೂ ತಣ್ಣೀರೆರಚಿದೆ. ಕರೋನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪಟಾಕಿಯಿಂದ ಬರುವ ಹೊಗೆಯಿಂದಾಗಿ ಕರೋನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಟಾಕಿ ನಿಷೇಧದ ...

Read More »

ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

  ಶಿವಮೊಗ್ಗ : ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿ ಬಸಮ್ಮ ಕೋಂ ದಿ||ಯಲ್ಲಪ್ಪ ಎಂಬುವವರು ಅಕ್ಟೋಬರ್ 22 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಎರಡು ಜನ ಅಪರಿಚಿತರು ಆಸ್ಪತ್ರೆಯ ಮುಂಭಾಗ ನಕಲಿ ಬಂಗಾರದ ಸರವನ್ನು ತೋರಿಸಿ ಆ ನಕಲಿ ಬಂಗಾರದ ಸರವನ್ನು ಕೊಟ್ಟು ನಂತರ 3,500 ರೂ. ನಗದು ಹಾಗೂ ...

Read More »

ಕ್ರಿಕೆಟ್‌ ಬೆಟ್ಟಿಂಗ್‌: ಮೂವರ ಬಂಧನ

  ಶಿವಮೊಗ್ಗ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್‌ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments