ಶಿವಮೊಗ್ಗ : ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶಿವಮೊಗ್ಗ ನಗರದ ಎನ್. ಇ.ಎಸ್ ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿಗಳಲ್ಲಿ ಹಾಗೂ ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ. ಮತದಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ ...
Read More »Monthly Archives: December 2020
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಮೂವರು ಖೈದಿಗಳಿಗೆ ಇರಿದ ಸಹಖೈದಿ
ಶಿವಮೊಗ್ಗ : ಚಮಚವನ್ನು ಚಾಕು ರೀತಿ ಬಳಕೆ ಮಾಡಿ ಸಜಾಬಂಧಿಯೊಬ್ಬ ಮೂವರು ಸಜಾಬಂಧಿಗಳಿಗೆ ಇರಿದಿರುವ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಇಂದು ಸಂಜೆ ನಡೆದಿದೆ. ನ್ಯಾಯಾಧೀಶರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲಿನಲ್ಲಿದ್ದ ಉಡುಪಿಯ ಪ್ರಶಾಂತ್ ಎಂಬ ಖೈದಿ ತನ್ನೊಂದಿಗಿದ್ದ ಮೂವರು ಖೈದಿಗಳನ್ನು ಇರಿದ ಆರೋಪಿ. ಇಂದು ಪ್ರಶಾಂತ್ ಓರ್ವ ಖೈದಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಈ ವೇಳೆ ಜೈಲಿನಲ್ಲಿ ಸಜಾಬಂಧಿಗಳಾಗಿರುವ ಮಾಲತೇಶ, ದೇವೇಂದ್ರ, ಬೆನಕಶೆಟ್ಟಿ ಎಂಬುವರು ಜಗಳ ಬಿಡಿಸಲು ಹೋಗಿದ್ದಾರೆ. ಆಗ ರೊಚ್ಚಿಗೆದ್ದ ಪ್ರಶಾಂತ್ ಈ ಮೂವರ ಮೇಲೆ ಚಮಚವನ್ನೇ ಚಾಕುವಿನಂತೆ ಬಳಸಿ ...
Read More »ಸುಪ್ರೀಂ ನಿಂದ ಕೇಂದ್ರ ಸರ್ಕಾರಕ್ಕೆ ಕಪಾಳಮೋಕ್ಷ.
ಶಿವಮೊಗ್ಗ : ರೈತಸಂಘಟನೆಗಳ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದು ರೈತಸಂಘದ ರಾಜ್ಯ ಕಾರ್ಯದ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ರೈತಸಂಘಟನೆಗಳು ಕಳೆದ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದು, ಅವರ ಬೆಂಬಲಕ್ಕೆ ಸುಪ್ರೀಂ ಕೋರ್ಟ್ ನಿಂತಿರುವುದು ರೈತರಿಗೆ ಸಿಕ್ಕ ಜಯ. ಕೇಂದ್ರ ಸರ್ಕಾರ ಈಗಾದರೂ ಜನರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಅರಿತು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಜೊತೆಗೆ ...
Read More »ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ.
ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ಶಿವಮೊಗ್ಗ : ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಗಳಿಗೆ ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಯನ್ನುದ್ದೇಶೀಸಿ ಮಾತನಾಡಿದ ಅವರು, ಸದನದಲ್ಲಿ ನಡೆದ ಗಲಾಟೆಗೆ ಬಿಜೆಪಿ ಕಾರಣವಾಗಿದ್ದರೂ ಸಹ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ಸಮರ್ಥಿಸಿಕೊಳ್ಳುತ್ತಿ ರುವುದು ಖಂಡನೀಯ. ಮೊದಲನೇ ಹೆಂಡತಿ ಇದ್ದಾಗ ಎರಡನೇ ಮದುವೆ ಆಗೋದು ತಪ್ಪು. ಈ ಪರಿಷತ್ ಘಟನೆ ಕೂಡ ಆಗಿರುವುದು ಅದೇ ರೀತಿಯಲ್ಲೇ. ಪರಿಷತ್ ...
Read More »ಗ್ರಾಮ ಪಂಚಾಯ್ತಿ ಚುನಾವಣೆ-2020 ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ. ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯ ವಶ
ಗ್ರಾಮ ಪಂಚಾಯ್ತಿ ಚುನಾವಣೆ-2020 ನಿಮಿತ್ತ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಟಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಖಚಿತ ಮಾಹಿತಿಯನ್ನು ಸಂಗ್ರಹಿಸಿ ಕ್ಯಾಪ್ಟನ್ ಅಜಿತ್ ಕುಮಾರ್, ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ ಆರೋಪಿಯು ಕರ್ನಾಟಕ ರಾಜ್ಯದಲ್ಲಿ ತೆರಿಗೆಯನ್ನು ವಂಚಿಸಿ ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯವನ್ನು ಗ್ರಾಮ ಪಂಚಾಯ್ತಿ ಚುನಾವಣೆಗೆ ಬಳಸುವ ಉದ್ದೇಶದಿಂದ ಕೆಎ-15-8249 ಆಟೋರಿಕ್ಷಾದಲ್ಲಿ ಗೋವಾ ರಾಜ್ಯದಲ್ಲಿ ತಯಾರಾದ ಮೆಕ್ಡೊನಾಲ್ಡ್ ವಿಸ್ಕಿ, ಇಂಪೀರಿಯಲ್ ವಿಸ್ಕಿ, ಗೋವಾ ಫೆನ್ನಿ ಸೇರಿದಂತೆ ಅಕ್ರಮವಾಗಿ 71 ಲೀಟರ್ ಗೋವಾ ಮದ್ಯ ...
Read More »ಸಕ್ರೆಬೈಲು ಹಿರಿಯ ಆನೆ ಗೀತಾ ಇನ್ನಿಲ್ಲ
ಶಿವಮೊಗ್ಗ: ರಾಜ್ಯದ ಆನೆ ಬಿಡಾರಗಳಲ್ಲೇ ಅತಿ ಹಿರಿಯ ಆನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಗೀತಾ ಆನೆ ಕಳೆದ ನಾಲ್ಕು ದಿನದಿಂದ ಆಹಾರವನ್ನು ತ್ಯಜಿಸಿತ್ತು. ಇಂದು ಬೆಳಗ್ಗೆ ಸಕ್ರೆಬೈಲು ಕ್ರಾಲ್ ಸಮೀಪ ಮೃತಪಟ್ಟಿದೆ. ಗೀತಾ ಆನೆಯನ್ನು 1968ರಲ್ಲಿ ಕಾಕನಕೋಟೆಯಲ್ಲಿ ಸೆರೆ ಹಿಡಿದು ಪಳಗಿಸಿ ಬಳಿಕ ಸಕ್ರೆಬೈಲು ಆನೆ ಬಿಡಾರಕ್ಕೆ ತರಲಾಗಿತ್ತು. ರಾಜ್ಯದ ಅತಿ ಹಿರಿಯ ಆನೆ ಮೃತಪಟ್ಟಿರುವುದು ನೋವಿನಸಂಗತಿಯಾಗಿದೆ.
Read More »ಕ್ಯಾಂಟರ್ ಪಲ್ಟಿ, ಗೋವುಗಳ ಸಾವು
ಶಿವಮೊಗ್ಗ: ಗೋವುಗಳನ್ನು ಸಾಗಿಸುತ್ತಿದರೆ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಎಂಟು ಎತ್ತು ಹಾಗೂ ಎಮ್ಮೆಗಳು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಇಂದು ಮುಂಜಾನೆ ನಡೆದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಕಾರ್ಯಾಚರಣೆ ನಡೆಸಿ ಆರು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ಕ್ಯಾಂಟರ್ ನಲ್ಲಿ ಗೋವುಗಳನ್ನು ಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಘಟನೆಯಲ್ಲಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ತುಂಗಾನಗರ,ದೊಡ್ಡಪೇಟೆ, ಕೋಟೆ ಠಾಣಾ ವ್ಯಾಪ್ತಿಯ ಜನರ ಗಮನಕ್ಕೆ
ಶಿವಮೊಗ್ಗ : ಇಂದು (ಡಿಸೆಂಬರ್ 8) ಬೆಳಿಗ್ಗೆ 7 ರಿಂದ ಬೆಳಿಗ್ಗೆ 10 ರ ವರೆಗೆ ಈ ಸೂಚಿಸಲಾದ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೂರು ಗಂಟೆಗಳ ಕಾಲ ಇರುವ ಕರ್ಫ್ಯೂ ಸಡಿಲ ಮಾಡಲಾಗಿದೆ. ಬೆಳಿಗ್ಗೆ 3 ಗಂಟೆಗಳ ಕಾಲ ಈ ಮೂರೂ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ…ಅಂಗಡಿಗಳನ್ನು ತೆರೆದು ಸಾರ್ವಜನಿಕ ಸೇವೆ ನೀಡಬಹುದು. ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಬುಧವಾರದ ವರೆಗೆ ಮುಂದುವರೆಯಲಿದೆ…
Read More »ಸಹಜ ಸ್ದಿತಿಯತ್ತ ಶಿವಮೊಗ್ಗ: ಆದ್ರೂ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿರುವ ಜನ
ಶಿವಮೊಗ್ಗ : ನಿನ್ನೆ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದರಿಂದ ಆರಂಭಗೊಂಡಿರುವ ಗಲಾಟೆಯನ್ನು ನಿಯಂತ್ರಣ ಮಾಡಲು ಪೋಲಿಸರು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿದ್ದರು. ಈ ಕಾರಣದಿಂದಾಗಿ ಇಂದು ಬೆಳಗ್ಗೆಯಿಂದಲೇ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ. ಆದರೆ ನಿನ್ನೆಯ ಗಲಭೆಯಿಂದ ಭಯಭೀತರಾಗಿರುವ ಜನತೆ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಶಿವಮೊಗ್ಗದ ಬಹುತೇಕ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಎಲ್ಲ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಲಾಗಿದೆ. ಆದರೆ ಹಾಲಿನ ಅಂಗಡಿಗಳು ಹಾಗೂ ಮೆಡಿಕಲ್ ಶಾಪ್ ಗಳನ್ನು ...
Read More »ವದಂತಿಗಳಿಗೆ ಕಿವಿಗೊಡಬೇಡಿ. ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಬಿಗಿ ಬಂದೋಬಸ್ತು : ಐಜಿಪಿ ರವಿ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಯಿಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ...
Read More »
Recent Comments