ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದಲ್ಲಿ ಉಂಟಾದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ, ತುಂಗಾನಗರ, ಕೋಟೆ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ನಾಳೆ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಿಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
Read More »Monthly Archives: December 2020
ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಾಮ‍್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ...
Read More »
Recent Comments