ಶಿವಮೊಗ್ಗ: ಮನೆಯ ಹಿಂದೆ ಇಟ್ಟಿದ ಅಡಕೆಯನ್ನು ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ. ದುಮ್ಮಳ್ಳಿ ಗ್ರಾಮದ ಚಂದ್ರು ಎಂಬುವರ ಮನೆಯ ಹಿಂದೆ ಸಂಗ್ರಹಿಸಿಟ್ಟಿದ್ದ ಒಂದೂವರೆ ಕ್ವಿಂಟಾಲ್ ನಷ್ಟು ಅಡಕೆಯನ್ನು ಸೋಮವಾರ ರಾತ್ರಿ ಕಳ್ಳರು ಕದ್ದೊಯ್ದಿದ್ದಾರೆ. ಅಡಕೆ ಬೆಲೆ ಹೆಚ್ಚಾಗುತ್ತಿದ್ದಂತೆ ಮಲೆನಾಡಿನಲ್ಲಿ ಅಡಕೆ ಕಳವು ಪ್ರಕರಣಗಳು ಹೆಚ್ಚಲಾರಂಭಿಸಿವೆ.
Read More »Monthly Archives: January 2021
ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ
ಶಿವಮೊಗ್ಗ : ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು. ಸಾರ್ವಜನಿಕರ ದೂರಿಗೆ ತಕ್ಷಣ ...
Read More »ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...
Read More »ರೈಲ್ವೆ ಕ್ರಷರ್ ಬ್ಲಾಸ್ಟ್ : ಬಿಹಾರ ಮೂಲದ 6 ಕಾರ್ಮಿಕರ ಸಾವು
ಶಿವಮೊಗ್ಗ : ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್ ಸ್ಪೋಟದ ಪರಿಣಾಮ ಜಿಲ್ಲೆಯಲ್ಲಿ ಭಾರೀ ಶಬ್ದ ಹಾಗೂ ಕಂಪನ ಸಂಭವಿಸಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ತಾಲೂಕಿನ ಹುಣಸೋಡು ಎಂಬಲ್ಲಿ ರೈಲ್ವೆ ಕ್ವಾರಿಯಲ್ಲಿ ಭಾರೀ ಸ್ಪೋಟ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಘಟನೆ ಸಂಭವಿಸಿದ್ದು, ದಟ್ಟ ವಾಸನೆ ಆವರಿಸಿದೆ. ಘಟನೆಯಲ್ಲಿ ಬಿಹಾರ ಮೂಲದ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸ್ಪೋಟದ ತೀವ್ರತೆಗೆ ಲಾರಿ ಸಂಪೂರ್ಣ ಛಿದ್ರಛಿದ್ರವಾಗಿದೆ. ಸ್ಧಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ದೌಡಾಯಿಸಿದ್ದಾರೆ.
Read More »ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...
Read More »ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು.
ಶಿವಮೊಗ್ಗ:ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಅಂಜಲಿ(19) ಮೃತ ದುರ್ದೈವಿ. ದನಗಳಿಗೆ ನೀರು ಕುಡಿಸಲು ಎಂದಿನಂತೆಯೇ ಬೆಳಿಗ್ಗೆ ಬಾವಿಗೆ ಹೋಗಿದ್ದ ಅಂಜಲಿ, ನೀರು ಸೇದುವಾಗ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ನೀರು ತರಲು ಹೋಗಿದ್ದ ಅಂಜಲಿ ಬಾರದಿದ್ದನ್ನು ಗಮನಿಸಿ, ಮನೆಯವರು ಬಾವಿಯ ಬಳಿಗೆ ಬಂದು ಪರಿಶೀಲಿಸಿದಾಗ ಅಂಜಲಿ ಬಾವಿಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತ್ಯಾಗರ್ತಿ ಗ್ರಾಮಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »ವಿಶಾಲ್ ಮಾರ್ಟ್ ಎದುರು ಡಿವೈಡರ್ ಗೆ ಗುದ್ದಿದ ಬೈಕ್ – ಸವಾರನ ಸಾವು
ಶಿವಮೊಗ್ಗ : ಗೋಪಾಲಗೌಡ ಬಡಾವಣೆಯ ವಿಶಾಲ್ ಮಾರ್ಟ್ ಎದುರು ಬೈಕ್ ವೊಂದು ಡಿವೈಡರ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ದರ್ಶನ್ (18 ) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಶ್ರೇಯಸ್ ನನ್ನ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬೈಕ್ ಸವಾರರಿಬ್ಬರನ್ನೂ ನಂಜಪ್ಪ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದರ್ಶನ್ ತಲೆಗೆ ತೀವ್ರಗಾಯಗಳಾದ ಪರಿಣಾಮ ಸಾವುಕಂಡಿದ್ದಾನೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಗೋಪಾಳಗೌಡ ಬಡಾವಣೆಯಲ್ಲಿ ಹೊನಲು ಬೆಳಕು ವಾಲಿಬಾಲ್ ನೋಡಲು ಹೋಗುತ್ತಿದ್ದಾಗ ಈ ದುರ್ಘಟನೆ ...
Read More »ನಿರಂತರ ಜ್ಯೋತಿ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಸೂಚನೆ : ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್‍ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ...
Read More »ಹಕ್ಕಿಜ್ವರ ಮುನ್ನಚ್ಚರಿಕೆ ಕ್ರಮ ಜನರು ಆತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿಜ್ವರ ಕುರಿತಾಗಿ ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ ...
Read More »ಕರೋನಾವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಜೀ ವಿಶ್ವದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ – ನಳಿನ್ ಕುಮಾರ್ ಕಟೀಲ್
ಶಿವಮೊಗ್ಗ : ಕರೋನಾ ವೈರಸ್ ಹತೋಟಿ ತರುವಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಉತ್ತಮ ಸಾಧನೆಯನ್ನು ಮಾಡಿದೆ,ಈ ಹಿನ್ನೆಲೆಯಲ್ಲಿ ಅಮೆರಿಕ ಸಂಶೋಧನ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯಿಂದ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಮಟ್ಟದ ನಾಯಕರಾಗಿ ಹೊರ ಹೊಮ್ಮಿರುವುದು ಸಾಕ್ಷಿಯಾಗಿದೆ,ಇದೇ ರೀತಿ ಕರ್ನಾಟಕದಲ್ಲಿ ಶ್ರೀಯುತ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರವು ಸಹ ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿದೆ ಎಂದು ಹೇಳಿದರು’ ಇವರು ಶಿವಮೊಗ್ಗ ನಗರದ ಹರ್ಷ ...
Read More »
Recent Comments