Breaking News

Monthly Archives: February 2021

ಬಿಎಸ್ ವೈ ಜನ್ಮ ದಿನದ ಅಂಗವಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಅಭಿಮಾನಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ರವೀಂದ್ರ ನಗರ ಗಣಪತಿ ದೇವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ನೇತೃತ್ವದಲ್ಲಿ ಆಗಮಿಸಿದ ಯಡಿಯೂರಪ್ಪ ಅವರ ಅಭಿಮಾನಿಗಳು ಯಡಿಯೂರಪ್ಪ ಅವರಿಗೆ ಒಳಿತಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರಿಗೆ ಆರೋಗ್ಯ ಆಯಸ್ಸು ಕರುಣಿಸು ಹಾಗೂ ಇನ್ನಷ್ಟ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿಯನ್ನು ಬಲಮುರಿ ಗಣಪತಿ ಕರುಣಿಸಲಿ ಎಂದು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

Read More »

ಲಾರಿ ಮುಷ್ಕರ ಹಿಂಪಡೆಯಲು ಸಚಿವ ಈಶ್ವರಪ್ಪ ಮನವಿ.

ಶಿವಮೊಗ್ಗ : ತೈಲಬೆಲೆ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ನಡೆಸುತ್ತಿರುವ ಲಾರಿ ಮುಷ್ಕರವನ್ನು ಹಿಂಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ. ಅದರೆ, ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡೋದು ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರ ಬೆಲೆಯನ್ನು ಎಷ್ಟು ಕಡಿಮೆ ಮಾಡ್ಬೇಕೋ ಅಷ್ಟು ಕಡಿಮೆ ಮಾಡುತ್ತೇ. ಮುಷ್ಕರ ಮಾಡೋದ್ರಿಂದ ನಿಮಗೆ ಮಾತ್ರವಲ್ಲದೆ, ರೈತರು, ಕೈಗಾರಿಕೆಗಳು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತೇ. ಮುಷ್ಕರವೇ ...

Read More »

ಲಾರಿ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ವ್ಯಾಪಕ ಬೆಂಬಲ : ರಸ್ತೆಗಿಳಿಯದ 2000ಕ್ಕೂ ಅಧಿಕ ಲಾರಿಗಳು

ಶಿವಮೊಗ್ಗ: ತೈಲ ಬೆಲೆ ಹೆಚ್ಚಳ ಹಾಗೂ ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಎಜೆಂಟರುಗಳು ಕರೆ ನೀಡಿರುವ ಲಾರಿ ಮುಷ್ಕರಕ್ಕೆ ಶಿವಮೊಗ್ಗದಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಮುಷ್ಕರ ಬೆಂಬಲಿಸಿ ಯಾವುದೇ ಲಾರಿಗಳು ಇಂದು ರಸ್ತೆಗೆ ಇಳಿದಿಲ್ಲ. ಸರಕು-ಸಾಗಣೆ ಸ್ಥಗಿತಗೊಳಿಸಿ ಲಾರಿ ಮಾಲೀಕರು ಒಂದು ದಿನದ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಮುಷ್ಕರದಿಂದಾಗಿ ಶಿವಮೊಗ್ಗ ನಗರದ ಸುಮಾರು 2 ಸಾವಿರಕ್ಕೂ ಅಧಿಕ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ. ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಇರುವ ಗೂಡ್ಸ್ ಶೆಡ್ ನಲ್ಲೇ ಸುಮಾರು 200ಕ್ಕೂ ಹೆಚ್ಚು ಲಾರಿಗಳು ...

Read More »

ಮಾ.27ರಂದು ಮೆಗಾ ಲೋಕ ಅದಾಲತ್ ಕಳೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳ ವಿಲೇವಾರಿ: ಮುಸ್ತಫಾ ಹುಸೇನ್

  ಶಿವಮೊಗ್ಗ :  ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್ ಮಾರ್ಚ್ 27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‍ನಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅವರು ತಿಳಿಸಿದರು. ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ವಿಭಜನಾ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳನ್ನು ಗುರುತಿಸಿ, ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ...

Read More »

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ ಸಿಎಂ

  ವಿಜಯಪುರ ಜಿಲ್ಲೆಯಲ್ಲಿ‌ನಲ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಿಂದಲೇ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ನಲ್ಲಿ‌ ನಡೆದ ವರ್ಚುವಲ್‌ ಕಾರ್ಯಕ್ರಮದಲ್ಲಿ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು‌. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನ‌ನಿಲ್ದಾಣವನ್ನು ಎರಡು ಹಂತದಲ್ಲಿ‌ ಅಭಿವೃದ್ಧಿ ಪಡಿಸಲಾಗುವುದು. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ‌ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು. ವಿಜಯಪುರ ವಿಮಾನ ನಿಲ್ದಾಣದಲ್ಲಿ ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ...

Read More »

ತಾಳಗುಪ್ಪದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಸಾವು.

ಶಿವಮೊಗ್ಗ: ಸೈಕಲ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಸೈಕಲ್ ಸವಾರ ಅಣ್ಣಪ್ಪ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ- 206 ರಲ್ಲಿ ತಾಳಗುಪ್ಪದ ಬಳಿ ನಡೆದ ಘಟನೆ ನಡೆದಿದ್ದು, ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.

Read More »

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.

ಶಿವಮೊಗ್ಗ, 72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ. ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.‌ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Read More »

ಶಿವಮೊಗ್ಗದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್.

ಶಿವಮೊಗ್ಗ: ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ...

Read More »

ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...

Read More »

ಶಿವಮೊಗ್ಗ ಸಮೀಪ ಬಸ್ ಬೈಕ್ ಡಿಕ್ಕಿ, ಇಬ್ಬರ ದೇಹ ಛಿದ್ರ ಛಿದ್ರ.

  ಶಿವಮೊಗ್ಗ : ಇಂದು ಮಧ್ಯಾಹ್ನ 1.45 ರ ಹೊತ್ತಿಗೆ ಶಿವಮೊಗ್ಗ- ಹೊನ್ನಾಳಿ ಮಾರ್ಗದ ಮೇಲಿನ ಹನಸವಾಡಿ ಬಳಿ ಸಂಭವಿಸಿದ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು ಕಂಡ ಘಟನೆ ವರದಿಯಾಗಿದೆ. ಶಿವಮೊಗ್ಗ ಮಾರ್ಗದಿಂದ ದಾವಣಗೆರೆ ಮೂಲಕ ಬೆಂಗಳೂರಿಗೆ ಹೋಗುತ್ತಿದ್ದ ಕೆ.ಎ. 17 ಎಫ್ 1931 ಕ್ರಮ ಸಂಖ್ಯೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ಬಂದ ಹೊನ್ನಾಳಿ ತಾಲೂಕು ಲಿಂಗಾಪುರ ಸಮೀಪದ ಬಾಗೋಡಿ ಗ್ರಾಮದ ಇಬ್ಬರು ಸಾವು ಕಂಡಿದ್ದಾರೆ. ಬೈಕ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments