Breaking News

Monthly Archives: April 2021

ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ : ಸಾರ್ವಜನಿಕರಿಂದ ಮೆಚ್ಚುಗೆ

  ಶಿವಮೊಗ್ಗ : ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಎಚ್ ಟಿ ಶೇಖರ್ ಡಿವೈಎಸ್‍ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದನ್ನು ಗಮನಿಸಿದರು. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ಹೇಳಿ, ...

Read More »

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಕೋವಿಡ್ ಪಾಸಿಟಿವ್ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿನ ಜನರಲ್ ...

Read More »

ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದವರ ವಿರುದ್ಧ ದಾಖಲಾದ ಪ್ರಕರಣಗಳು ಹಾಗೂ ಸಂಗ್ರಹಿಸಿದ ದಂಡದ ಮೊತ್ತ ಗೊತ್ತಾ ??

  ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್ 18 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 517 ಪ್ರಕರಣಗಳು ದಾಖಲಾಗಿದೆ. 80800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..

Read More »

“ನಾಲ ನೀರು ದಾವಣಗೆರೆ ಭಾಗಕ್ಕೆ ವಿಭಜಿಸುವ ರೆಗ್ಯುಲೇಟರಿ -2 ಕೇಂದ್ರಕ್ಕೆ ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ”

  ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾ ನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ -2 ನಾಲ ನಿರ್ವಹಣಾ ಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆ ಬೆವರು ಹರಿಸಿ ನಾಟಿ ಮಾಡಿದ ಭತ್ತ, ರಾಗಿ ಇನ್ನು ಮುಂತಾದ ಬೆಳೆಗಳನ್ನು ಕಟಾವು ಮಾಡುವ ಸಮಯ ಹತ್ತಿರದಲಿದ್ದು, ಈ ಸಮಯದಲ್ಲಿ ನೀರಿನ ಅವಶ್ಯಕತೆ ಬಹಳಷ್ಟು ಇರುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಅಚ್ಚುಕಟ್ಟು ಭಾಗದ ಅನ್ನದಾತರು ಉತ್ತಮ ಫಸಲು ಪಡೆಯುವ ಮೂಲಕ ...

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್

  ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಬುಧವಾರದಿಂದ ಎರಡು ದಿನ ಅಬ್ಬರ ಪ್ರಚಾರ ನಡೆಸಿದ್ದರು. ಈ ವೇಳೆ ಅವರು 99 ಡಿಗ್ರಿ ಜ್ವರದಿಂದ ಬಳಲುತ್ತಿದ್ದರು. ಈ ಜ್ವರದ ನಡುವೆಯೂ ರೋಡ್​ ಶೋ, ಸಮಾವೇಶದಲ್ಲಿ ಮತಪ್ರಚಾರ ನಡೆಸಿದ್ದರು. ಜ್ವರ ತಗ್ಗದ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ...

Read More »

  ರಂಜಾನ್ ಆಚರಣೆ : ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ ಅಗತ್ಯ – ಚಿದಾನಂದ ವಟಾರೆ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ. ಕಂಟೈನ್‍ಮೆಂಟ್ ವಲಯದಲ್ಲಿ ಬರುವ ಮಸೀದಿ ಹಾಗೂ ಇತರ ಪ್ರಾರ್ಥನಾ ಮಂದಿರಗಳನ್ನು ಸಾರ್ವಜನಿಕರಿಗೆ ತೆರೆಯಬಾರದು. 60ವರ್ಷ ಮೇಲ್ಪಟ್ಟವರು, ತೀವ್ರ ಕಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10ವರ್ಷದೊಳಗಿನ ಮಕ್ಕಳು ಮನೆಯಲ್ಲಿರಬೇಕು. ಗುಂಪು ಸೇರಬಾರದು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತಕ ಕಾಯ್ದುಕೊಳ್ಳಲು ಮಸೀದಿಯಲ್ಲಿ ...

Read More »

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

  ಶಿವಮೊಗ್ಗ : ಹೊಳೆಹೊನ್ನುರು ತಾಲೂಕಿನ ಢಾಣಾಯಕಪುರದಲ್ಲಿ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಢಾಣಾಯಕಪುರ ಗ್ರಾಮದ ವಾಸಿ 54 ವರ್ಷದ ಬಸಪ್ಪ ಎಂಬುವವನ ಯಾರೋ ದುಷ್ಕರ್ಮಿಗಳು ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಬಸಪ್ಪನವರ ಪುತ್ರ ಮಂಜಪ್ಪ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ.

  ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2 ನೇ ಅಲೆಯ ಸ್ಫೋಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರು, ದಕ್ಸಿಣ ಕನ್ನಡ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನಗಳ ಕಾಲ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಶನಿವಾರದಿಂದ ಜಾರಿಗೊಳಿಸುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ. ಪಿಎಂ ...

Read More »

ಮೇ ಅಂತ್ಯದ ವೇಳೆ ಕೊರೋನಾ ಸ್ಫೋಟ: ಸಚಿವ ಡಾ.ಕೆ.ಸುಧಾಕರ್

  ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ.‌ ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...

Read More »

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು

  ಶಿವಮೊಗ್ಗ : ಛತ್ತೀಸಘಡದ ಸುಕ್ಮಾ-ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ನಕ್ಸಲ್ ದಾಳಿಗೆ ಹುತಾತ್ಮರಾದ 22 ವೀರ ಯೋಧರಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಶಿವಪ್ಪನಾಯಕ ಪ್ರತಿಮೆ ಬಳಿ ಶ್ರದ್ಧಾಂಜಲಿ ಸಲ್ಲಿಸಿದ NSUI ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments