ಶಿವಮೊಗ್ಗ: ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದ್ದು, ಮೃತರ ವಿವರ ...
Read More »Monthly Archives: December 2024
ತುಂಗಾ ಚಾನಲ್ ನಲ್ಲಿ ಈಜಲು ಹೋಗಿದ್ದ ಬಾಲಕ ಸಾವು
ಶಿವಮೊಗ್ಗ: ಕಲ್ಲೂರು ಮಂಡ್ಲಿ ಸಮೀಪದ ಬಂಡೆ ಕಲ್ಲೂರು ತುಂಗಾ ಚಾನಲ್ ನಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹಳೇ ಮಂಡ್ಲೀ ನಿವಾಸಿ ಮೋಹಿತ್(15) ಮೃತ ಬಾಲಕ. ಬುಧವಾರ ಸ್ನೇಹಿತರೊಂದಿಗೆ ಈಜಲು ಹೋದಾಗ ಚಾನಲ್ ನಲ್ಲಿ ಮೋಹಿತ್ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಬುಧವಾರ ಸಂಜೆಯಿಂದ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಸಂಜೆ ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆಯಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
cnewstv | 26.12.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರ ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ...
Read More »ಟಿಟಿ – ಜೀಪ್ ನಡುವೆ ಢಿಕ್ಕಿ- ದೇವರ ದರ್ಶನಕ್ಕೆ ಬಂದವರಿಗೆ ಆಘಾತ
ಶಿವಮೊಗ್ಗ: ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಹಾಗೂ ಕೊಲ್ಲೂರಿಗೆ ತೆರಳುತ್ತಿದ್ದ ಟಿಟಿ ನಡುವೆ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಿಟ್ಟೂರಿನಲ್ಲಿ ನಡೆದಿದೆ. ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, 8 ಜನರು ಗಾಯಗೊಂಡಿದ್ದಾರೆ. ದೇವರ ದರ್ಶನಕ್ಕೆ ಬಂದವರಿಗೆ ಅಪಘಾತ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿ, ಕೊಡಚಾದ್ರಿ ಪ್ರವಾಸಕ್ಕೆ 8 ಜನರು ಜೀಪ್ ನಲ್ಲಿ ತೆರಳುತ್ತಿದ್ದರು. ಇನ್ನೋಂಡೆದೆ ಶಿವಮೊಗ್ಗದಿಂದ ಟಿಟಿಯಲ್ಲಿ ಕೊಲ್ಲೂರು ಹಾಗೂ ಸಿಗಂದೂರು ದೇವಿಯ ದರ್ಶನಕ್ಕೆ ಹೊರಟ್ಟಿದ್ದರು. ಈ ನಡುವೆ ಮರಕುಟಿಗ ಬಳಿ ಅಪಘಾತ ನಡೆದಿದ್ದು, ಜೀಪ್ ...
Read More »ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಈಶ್ವರಪ್ಪ ಬಂಧನ
ಶಿವಮೊಗ್ಗ: 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಇ- ಖಾತೆಯೊಂದನ್ನ ಮಾಡಿಕೊಡಲು 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂಡುವಳ್ಳಿ ಗ್ರಾಮದ ಮಹಮ್ಮದ್ ಗೌಸ್ ಎಂಬವರು ತಮ್ಮ ತಂದೆಯ ಹೆಸರಿನಲ್ಲಿದ್ದ ಮನೆಯ ಖಾತೆಯನ್ನು ತಾಯಿಯ ಹೆಸರಿಗೆ ಬದಲಾಯಿಸಲು, ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಬೇಕಿದ್ದ ಪಿಡಿಓ ಈಶ್ವರಪ್ಪ ವಿಳಂಬ ಮಾಡುತ್ತಿದ್ದರಲ್ಲದೇ, ಲಂಚಕ್ಕೆ ಸಹ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು ಬೆಳಿಗ್ಗೆ ...
Read More »ಶಿವಣ್ಣಗಾಗಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ವಿಶೇಷ ಪೂಜೆ
ಶಿವಮೊಗ್ಗ: ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಶೀಘ್ರವೇ ಗುಣಮುಖರಾಗಿ, ರಾಜ್ಯಕ್ಕೆ ಮರಳಲಿ ಎಂದು ಶಿವಮೊಗ್ಗದಲ್ಲಿಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ. ಚಿಕಿತ್ಸೆಗಾಗಿ ಕಳೆದ ವಾರ ಅಮೇರಿಕಾಕ್ಕೆ ತೆರಳಿರುವ ಶಿವಣ್ಣ, ಜನವರಿ ತಿಂಗಳ ಅಂತ್ಯದಲ್ಲಿ ರಾಜ್ಯಕ್ಕೆ ವಾಪಸ್ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ...
Read More »ಬಸ್ ಹಾಗೂ ಬೈಕ್ ಢಿಕ್ಕಿ: ಇಬ್ಬರು ಯುವಕರು ಸಾವು
ಶಿವಮೊಗ್ಗ: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಇಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೂರ್ವ ...
Read More »ಗಂಡನಿಂದ ಭೀಕರವಾಗಿ ಹೆಂಡತಿ ಕೊಲೆ: ಆರೋಪಿ ಅಂದರ್
ಶಿವಮೊಗ್ಗ: ಪತಿಯಿಂದಲೇ ಪತ್ನಿ ಭೀಕರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಗರದ ವಾದಿ-ಎ-ಹುದಾದ 5 ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ರುಕ್ಸಾನ(38) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಎಸಿ ಮೆಕ್ಯಾನಿಕ್ ಯೂಸಫ್ ಹಾಗೂ ಆತನ ಪತ್ನಿ ರುಕ್ಸಾನ ನಡುವೆ ಗಲಾಟೆಯಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. ಕೌಟುಂಬಿಕ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆ ಆರೋಪಿ ಯೂಸಫ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಆರಂಭಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್
ಶಿವಮೊಗ್ಗ: ಮಂಗಳೂರಿನಿಂದ ದಾವಣಗೆರೆಗೆ ಚಲಿಸುತ್ತಿದ್ದ ಖಾಸ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಮತ್ತು ಬಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಬಸ್ ನಲ್ಲಿ 18 ಜನ ಪ್ರಯಾಣಿಕರಿದ್ದರು. ಬೆಳಗಿನ ಜಾವ ಸಕ್ರೆಬೈಲು ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪ್ರಯಾಣಿಕರನ್ನ ಕೆಳಗೆ ಇಳಿಸಿದ ಬಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ...
Read More »ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಜಿಲ್ಲೆಯ ಮೂವರು ಆಯ್ಕೆ
ಶಿವಮೊಗ್ಗ: ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಶರಾವತಿ ಹಿನ್ನೀರಿನ ಕರೂರು ಹೋಬಳಿಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇಲ್ಲಿನ ಮಳೂರು ಗ್ರಾಮದ ಕೀರ್ತನ್. ಆರ್, ಕಿರೇತೋಡಿ ಗ್ರಾಮದ ಗಣೇಶ್.ಎಂ ಹಾಗೂ ಹೊನಗಲು ಗ್ರಾಮದ ಮಣಿಕಂಠ.ಎಂ.ಸಿ ಆಯ್ಕೆಯಾಗಿದ್ದಾರೆ. ಈ ಮೂವರು ಕೂಡ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ನಿತಿನ್ ತಂಡದ ಕೋಚ್ ಆಗಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.
Read More »