ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.
ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ(ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ/ಎಂ.ಟೆಕ್(ಮೆಕ್ಯಾನಿಕಲ್/ಐಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್‍ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು ಜೂನ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿಧಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಶಿವಮೊಗ್ಗ 577 222, ದೂರವಾಣಿ ಸಂಖ್ಯೆ 08182-246054, ಮೊಬೈಲ್ ಸಂಖ್ಯೆ: 9429530914, 9880141054 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10024
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. 2022-06-01
Recent Comments