Breaking News

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಯುವ ಸ್ಪಂದನ ಕೇಂದ್ರ ಇಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಯುವ ನೀತಿ – 2012 ರನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಟಾನಗೊಂಡಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಸನಗರ ಮತ್ತು ಸೊರಬ ತಾಲ್ಲೂಕುಗಳಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಯುವಕ ಮತ್ತು ಯುವತಿಯರು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 21 ರಿಂದ 35 ವಯಸ್ಸಿನೊಳಗಿದ್ದು ಕನ್ನಡ ಸ್ಪಷ್ಟವಾಗಿ ಮಾತನಾಡಲು, ಬರೆಯಲು ಬರಬೇಕು ಹಾಗೂ ಸಂವಹನ ಕೌಶಲ್ಯ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಹಾಗೂ ಹೊಸನಗರ ಮತ್ತು ಸೊರಬ ತಾಲ್ಲೂಕುಗಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಜೂನ್ 10 ರೊಳಗೆ ಖುದ್ದಾಗಿ ನೆಹರು ಕ್ರೀಡಾಂಗಣದಲ್ಲಿರುವ ಯುವ ಸ್ಪಂದನ ಕೇಂದ್ರಕ್ಕೆ ಸಲ್ಲಸಬಹುದು ಅಥವಾ ಕೆಳಕಂಡ ಮೊ.ಸಂಖ್ಯೆಗಳಿಗೆ ವಾಟ್ಸಾಪ್ ಮೂಲಕ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-222248 ಯುವ ಸಮಾಲೋಚಕಿ ಪವಿತ್ರ ಆರ್ ಮೊ.ಸಂ: 9353180519, ಕ್ಷೇತ್ರ ಸಂಪರ್ಕಾಧಿಕಾರಿ ನಾಗರತ್ನ 8088488688 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10027

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*