ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…
Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…
ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.
ಮಾರಣಾಂತಿಕ ಹಲ್ಲೆ, ಮನೆಗಳ್ಳತನ, ದರೋಡೆ ಸೇರಿದಂತೆ ಒಟ್ಟು 5 ಪ್ರಕರಣಗಳು ಹರ್ಷದ್ (30) ಎಂಬ ವ್ಯಕ್ತಿಯ ಮೇಲೆ ದಾಖಲಾಗಿದೆ. ಅಲ್ಲದೆ ಮಾರಣಾಂತಿಕ ಹಲ್ಲೆ ಪ್ರಕರಣ ಒಂದರಲ್ಲಿ 10 ವರ್ಷಗಳ ಕಾಲ ಕಾರಾವಾಸ ಶಿಕ್ಷೆ ವಿಧಿಸಲಾಗಿತ್ತು, ಆದರೆ ಆತ ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಣ ನೀಡುವಂತೆ ಚಾಕು ತೋರಿಸಿ ಬೆದರಿಕೆ ಹಾಕಿದ. ಈ ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಇನ್ಸ್ಪೆಕ್ಟರ್ ಕಾರ್ಯಾಚರಣೆ ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.
ಆಗ ತುಂಗಾ ನಗರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ರವರು ತಮ್ಮ ಹಾಗೂ ಸಿಬ್ಬಂದಿಗಳ ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸುತ್ತಾರೆ ನಂತರ ಆರೋಪಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಒದಿ : https://cnewstv.in/?p=10052
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ದರೋಡೆಗೆ ಹೊಂಚು ಹಾಕಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ... 2022-06-03